ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ಗ್ರೀನ್‌ಸಿಗ್ನಲ್ ನೀಡಲಾಗಿದೆ. ನವೆಂಬರ್ 8 ರಿಂದ ಎಲ್‌ಕೆಜಿ, ಯುಕೆಜಿ ಭೌತಿಕ ತರಗತಿ ಆರಂಭಕ್ಕೆ ಅವಕಾಶ ಮಾಡಲಾಗಿದೆ. LKG, UKG ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್‌ಸಿಗ್ನಲ್ ಕೊಟ್ಟಿದೆ. LKG, UKG ಭೌತಿಕ ತರಗತಿ ಆರಂಭಕ್ಕೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಗೈಡ್‌ಲೈನ್ಸ್ ರಿಲೀಸ್ ಆಗಿದೆ.
LKG ಹಾಗೂ UKG ಕೇಂದ್ರವನ್ನು ಸ್ವಚ್ಛಗೊಳಿಸಬೇಕು. ರಾಸಾಯನಿಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು. ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯ ಇರಬೇಕು. ಪೋಷಕರಿಗೂ ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯ ಆಗಿರಬೇಕು. ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ LKG, UKG ಭೌತಿಕ ತರಗತಿಗಳು ಶುರು ಆಗಲಿವೆ. ಬೆಳಗ್ಗೆ 9.39 ರಿಂದ ಮಧ್ಯಾಹ್ನ 3.39 ರವರೆಗೆ ತರಗತಿ ನಡೆಸಬೇಕು ಎಂದು ಹೇಳಲಾಗಿದೆ. ಕೊವಿಡ್ ಲಕ್ಷಣ ಇರೊ ಮಕ್ಕಳಿಗೆ Lkg ಹಾಗೂ Ukg ಪ್ರವೇಶ ಇಲ್ಲ ಎಂದೂ ತಿಳಿಸಲಾಗಿದೆ.
ಕರ್ನಾಟಕದಲ್ಲಿ ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭವಾಗಿತ್ತು. ಶಾಲೆ ಆರಂಭಕ್ಕೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಅ. 25ರಿಂದ ಅ. 30ರವರೆಗೆ ಅರ್ಧದಿನ ಮಾತ್ರ ತರಗತಿಗಳು ನಡೆದಿತ್ತು. ನವೆಂಬರ್ 2ರಿಂದ ಪೂರ್ಣಾವಧಿ ತರಗತಿಗಳು ಆರಂಭವಾಗಿದೆ. ಮಕ್ಕಳು ಶಾಲೆಗೆ ಬರಲು ಪೋಷಕರ ಒಪ್ಪಿಗೆ ಕಡ್ಡಾಯವಾಗಿರಲಿದೆ. ಶಿಕ್ಷಕರು, ಮಕ್ಕಳಿಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಶಿಕ್ಷಕರು 2 ಡೋಸ್ ಲಸಿಕೆ ಪಡೆದಿರುವುದು ಕಡ್ಡಾಯವಾಗಿದೆ. ಹಾಗೇ, 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್ಶೀಲ್ಡ್ ಕಡ್ಡಾಯವಾಗಿದೆ ಎಂದು ನಿಯಮ ವಿಧಿಸಲಾಗಿತ್ತು.
ಅ. 30ರವರೆಗೂ ಮಧ್ಯಾಹ್ನದ ಬಿಸಿಯೂಟ ಇರುವುದಿಲ್ಲ. ನ. 2ರಿಂದ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ವ್ಯವಸ್ಥೆ ಮಾಡಲಾಗುವುದು. ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳೇ ಊಟ ತರಬೇಕು. ಎಲ್ಲಾ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇರಲಿದೆ. ಕೊಠಡಿಯಲ್ಲಿ 15ರಿಂದ 20 ಮಕ್ಕಳ ತಂಡ ರಚಿಸಿ ಪಾಠ ಮಾಡಬಹುದು. ಶಾಲೆಯ ಗೇಟ್ ಬಳಿ ಮಕ್ಕಳಿಗೆ ಕೊವಿಡ್ ತಪಾಸಣೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು.
ಇದನ್ನೂ ಓದಿ: Karnataka School Reopen: 1ರಿಂದ 5ನೇ ತರಗತಿ ಆರಂಭ: ಖುಷಿಖುಷಿಯಾಗಿ ಶಾಲೆಗೆ ಹೊರಟರು ಮಕ್ಕಳು
ಇದನ್ನೂ ಓದಿ: ಸರ್ಕಾರಿ ಶಾಲೆಗೆ ಆಕರ್ಷಕ ರೈಲು ಬಂಡಿ ಪೇಂಟಿಂಗ್; ಮಕ್ಕಳನ್ನು ಶಾಲೆಗೆ ಕರೆತರಲು ವಿನೂತನ ಪ್ರಯತ್ನ
Published On - 4:43 pm, Thu, 4 November 21