ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ರಾಜ್ಯದ ಎಲ್ಲ ಕಾಲೇಜುಗಳಿಗೂ ಒಂದೇ ಪ್ರಶ್ನೆಪತ್ರಿಕೆ

ಪ್ರಥಮ ಪಿಯುಸಿಯಿಂದಲೇ ಶಿಕ್ಷಣದ ಗುಣಮಟ್ಟದ ಬಗ್ಗೆ ಸರ್ಕಾರ ನಿಗಾ ವಹಿಸಿದ್ದು, 2027 ರಿಂದ ಪ್ರಥಮ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಆಗಲಿದೆ. KSEAB ರಾಜ್ಯಮಟ್ಟದ ಏಕರೂಪ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಲಿದ್ದು, ಇವುಗಳನ್ನು ಡಿಜಿಟಲ್ ರೂಪದಲ್ಲಿ ಕಾಲೇಜುಗಳಿಗೆ ರವಾನಿಸಲಾಗುತ್ತದೆ. ಪರೀಕ್ಷೆಗಳು ಕಾಲೇಜುಗಳಲ್ಲಿ ನಡೆಯಲಿದ್ದು, ಮೌಲ್ಯಮಾಪನವೂ ಅಲ್ಲೇ ಆಗಲಿದೆ.

ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ರಾಜ್ಯದ ಎಲ್ಲ ಕಾಲೇಜುಗಳಿಗೂ ಒಂದೇ ಪ್ರಶ್ನೆಪತ್ರಿಕೆ
ಪಿಯುಸಿ ಪರೀಕ್ಷಾ (ಪ್ರಾತಿನಿಧಿಕ ಚಿತ್ರ)
Image Credit source: Getty images
Edited By:

Updated on: Nov 07, 2026 | 9:41 PM

ಮುಖ್ಯಾಂಶಗಳು

  • ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
  • 2027ರಿಂದ ಪ್ರಥಮ ಪಿಯುಸಿಗೆ ರಾಜ್ಯಮಟ್ಟದ ಪ್ರಶ್ನೆಪತ್ರಿಕೆ
  • ಇನ್ಮುಂದೆ ರಾಜ್ಯದ ಎಲ್ಲ ಕಾಲೇಜುಗಳಿಗೂ ಒಂದೇ ಪ್ರಶ್ನೆಪತ್ರಿಕೆ

ಬೆಂಗಳೂರು, ನವೆಂಬರ್​​ 07: ಕರ್ನಾಟಕದ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ 2027ರಿಂದ ಮಹತ್ವದ ಬದಲಾವಣೆಯಾಗಲಿದೆ. ಇನ್ಮುಂದೆ ರಾಜ್ಯದ ಎಲ್ಲಾ ಕಾಲೇಜುಗಳ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಒಂದೇ ಪ್ರಶ್ನೆಪತ್ರಿಕೆ ಇರಲಿದೆ. ಆ ಮೂಲಕ ಪ್ರಥಮ ಪಿಯುಸಿಯಿಂದಲೇ ಶಿಕ್ಷಣದ ಗುಣಮಟ್ಟಕ್ಕೆ ಸರ್ಕಾರ ನಿಗಾ ವಹಿಸಿದೆ.

ಡಿಜಿಟಲ್ ರೂಪದಲ್ಲಿ ಕಾಲೇಜುಗಳಿಗೆ ಪ್ರಶ್ನೆಪತ್ರಿಕೆ ರವಾನೆ

ರಾಜ್ಯಮಟ್ಟದ ಪ್ರಶ್ನೆಪತ್ರಿಕೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಿದ್ಧಪಡಿಸಲಿದೆ. ಪರೀಕ್ಷೆಗಳನ್ನು ಕಾಲೇಜುಗಳಲ್ಲೇ ನಡೆಸಲಾಗುತ್ತದೆಯಾದರೂ, ಪ್ರಶ್ನೆ ಪತ್ರಿಕೆಗಳನ್ನು ರಾಜ್ಯಮಟ್ಟದಲ್ಲಿ ಸಿದ್ಧಪಡಿಸಿ ಡಿಜಿಟಲ್​ ರೂಪದಲ್ಲಿ ಕಾಲೇಜುಗಳಿಗೆ ರವಾನಿಸಲಾಗುತ್ತದೆ.

Loading...

ಪರೀಕ್ಷೆ ನಡೆಸುವ ಜವಾಬ್ದಾರಿ ಶಿಕ್ಷಣ ಇಲಾಖೆಗೆ

ಪರೀಕ್ಷೆ ನಡೆಸುವ ಸಂಪೂರ್ಣ ಜವಾಬ್ದಾರಿ ಕೆಎಸ್​​ಇಎಬಿ ಮಂಡಳಿಗೆ ಇರುವುದಿಲ್ಲ. ಶಾಲಾ ಶಿಕ್ಷಣ ಇಲಾಖೆ ನೇತೃತ್ವದಲ್ಲೇ ಪರೀಕ್ಷೆಗಳು ನಡೆಯಲಿವೆ. ಪ್ರಾಯೋಗಿಕ ಪರೀಕ್ಷೆಗಳು ಮಾತ್ರ ಹಿಂದಿನಂತೆಯೇ ಜಿಲ್ಲಾಮಟ್ಟದ ವೇಳಾಪಟ್ಟಿಯಂತೆ ನಡೆಯಲಿವೆ.

ಇದನ್ನೂ ಓದಿ: ಕನ್ನಡ ವಿಷಯವೇ ಮಕ್ಕಳಿಗೆ ಕಬ್ಬಿಣದ ಕಡಲೆಯಾಯ್ತಾ? SSLCಯಲ್ಲಿ 1.65 ಲಕ್ಷ ವಿದ್ಯಾರ್ಥಿಗಳು ಫೇಲ್; ಪಠ್ಯಪುಸ್ತಕ ಪರಿಷ್ಕರಣೆಗೆ ಶಿಫಾರಸು!

ರಾಜ್ಯಮಟ್ಟದ ಪ್ರಶ್ನೆಪತ್ರಿಕೆ ಜಾರಿಯಾದರೂ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾಲೇಜು ಹಂತದಲ್ಲೇ ನಡೆಯಲಿದೆ. ಮೌಲ್ಯಮಾಪನ ಪೂರ್ಣಗೊಂಡ ಬಳಿಕ ಫಲಿತಾಂಶ ಪ್ರಕಟಿಸುವ ಮುನ್ನ ಜಿಲ್ಲಾ ಉಪನಿರ್ದೇಶಕರು ಪರಿಶೀಲನೆ ನಡೆಸಲಿದ್ದಾರೆ. ಜಿಲ್ಲಾ ಉಪನಿರ್ದೇಶಕರ ಅನುಮೋದನೆ ದೊರೆತ ನಂತರ ಫಲಿತಾಂಶ ಪ್ರಕಟಿಸಲಾಗುತ್ತದೆ.

ಪ್ರಥಮ ಪಿಯುಸಿಯಿಂದಲೇ ಶಿಕ್ಷಣದ ಗುಣಮಟ್ಟಕ್ಕೆ ಸರ್ಕಾರದ ನಿಗಾ

ಇನ್ನು ಪ್ರಥಮ ಪಿಯುಸಿ ಹಂತದಿಂದಲೇ ರಾಜ್ಯದ ಎಲ್ಲಾ ಕಾಲೇಜುಗಳ ಶಿಕ್ಷಣದ ಗುಣಮಟ್ಟವನ್ನು ಪರಿಶೀಲಿಸಲು ಶಿಕ್ಷಣ ಇಲಾಖೆಗೆ ಅವಕಾಶ ದೊರೆಯಲಿದೆ. ರಾಜ್ಯದ ಎಲ್ಲಾ ಕಾಲೇಜುಗಳಿಗೂ ಒಂದೇ ಪ್ರಶ್ನೆಪತ್ರಿಕೆ ಜಾರಿಗೊಳಿಸುವ ಮೂಲಕ ಶಿಕ್ಷಣದ ಗುಣಮಟ್ಟದ ಮೇಲೆ ನಿಗಾ ವಹಿಸುವ ವ್ಯವಸ್ಥೆ ಜಾರಿಗೆ ಬರಲಿದೆ.

ಇದನ್ನೂ ಓದಿ: ಕ್ಲಚ್ ಇಲ್ಲ, ಗೇರ್ ಬದಲಾಯಿಸೋ ಶ್ರಮವೂ ಇಲ್ಲ: 11ನೇ ತರಗತಿ ವಿದ್ಯಾರ್ಥಿಗಳಿಂದ ‘Eco Ride’ ಮಿನಿ ಕಾರ್ ಆವಿಷ್ಕಾರ

ಈ ವ್ಯವಸ್ಥೆಯು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ಅನುದಾನಿತ ಕಾಲೇಜುಗಳು ಹಾಗೂ ಅನುದಾನರಹಿತ ಖಾಸಗಿ ಕಾಲೇಜುಗಳು ಸೇರಿದಂತೆ ರಾಜ್ಯ ಸರ್ಕಾರದ ಇತರ ಇಲಾಖೆಗಳ ಆಡಳಿತ ನಿಯಂತ್ರಣದಲ್ಲಿರುವ ಪದವಿ ಪೂರ್ವ ಕಾಲೇಜುಗಳೂ ಒಳಗೊಂಡಂತೆ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ಅನ್ವಯವಾಗಲಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us