AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆ, ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆ

ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಎಗ್ಗಿಲ್ಲದೇ ಸುರಿಯುತ್ತಿರುವುದರಿಂದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಭಾರಿ ಮಳೆ, ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆ
ಮಂಗಳೂರು ವಿಶ್ವವಿದ್ಯಾಲಯ
TV9 Web
| Edited By: |

Updated on: Jul 25, 2023 | 7:10 AM

Share

ಮಂಗಳೂರು, (ಜುಲೈ 25): ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ (Rain) ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ (Mangaluru University) ಪದವಿ ಪರೀಕ್ಷೆಗಳು (Degree Exams) ಮುಂದೂಡಲಾಗಿದೆ. ಇಂದು(ಜುಲೈ 25) ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆ ಮುಂದೂಡಿ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಇನ್ನು ಶೀಘ್ರದಲ್ಲೇ ಪರಿಷ್ಕೃತ ದಿನಾಂಕ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Rains: ಕರ್ನಾಟಕದ ಹಲವೆಡೆ ಭಾರೀ ಮಳೆ; ಡಿಸಿಗಳ ಜತೆ ಸಿದ್ದರಾಮಯ್ಯ ವಿಡಿಯೋ ಸಂವಾದ

ಇಂದು ರಜೆ ಘೋಷಣೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಬಿಟ್ಟು ಬಿಡದೇ ಧಾರಾಕಾರ ಮಳೆ (Rain) ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಅಬ್ಬರಕ್ಕೆ ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿವೆ. ಮಳೆ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸುಳ್ಯ, ಉಡುಪಿ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜು, ಅಂಗನವಾಡಿಗಳಿಗೆ ಇಂದು(ಜುಲೈ 255) ರಜೆ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಭಾಗದ 3 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್​ ಘೋಷಣೆ ಮಾಡಿದೆ.

ಜುಲೈ 27ರವರೆಗೂ ಮಳೆ

ಬೆಂಗಳೂರು: ರಾಜ್ಯದಲ್ಲಿ ಜುಲೈ 27ರವರೆಗೂ ಮಳೆಯ ಆರ್ಭಟ ಮುಂದುವರಿಯಲಿದೆ. ಸಮುದ್ರಮಟ್ಟದಿಂದ 3.5ರಿಂದ 5.8 ಕಿ.ಮೀ.ವರೆಗೆ ಗಾಳಿ ಬೀಸುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಜುಲೈ 27ರವರೆಗೆ ಮಳೆ ಆರ್ಭಟ ಹೀಗೆ ಮುಂದುವರಿಯಲಿದೆ. ಬೆಂಗಳೂರು ನಗರದಲ್ಲಿ ತುಂತುರು ಮಳೆ ಸಹಿತ ಚಳಿ ವಾತಾವರಣವಿರಲಿದೆ; ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲೊದೆ. ಬೆಂಗಳೂರು ನಗರ & ಗ್ರಾಮಾಂತರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು