ಮಂಗಳೂರು, (ಜುಲೈ 25): ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ (Rain) ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ (Mangaluru University) ಪದವಿ ಪರೀಕ್ಷೆಗಳು (Degree Exams) ಮುಂದೂಡಲಾಗಿದೆ. ಇಂದು(ಜುಲೈ 25) ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆ ಮುಂದೂಡಿ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಇನ್ನು ಶೀಘ್ರದಲ್ಲೇ ಪರಿಷ್ಕೃತ ದಿನಾಂಕ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Karnataka Rains: ಕರ್ನಾಟಕದ ಹಲವೆಡೆ ಭಾರೀ ಮಳೆ; ಡಿಸಿಗಳ ಜತೆ ಸಿದ್ದರಾಮಯ್ಯ ವಿಡಿಯೋ ಸಂವಾದ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಬಿಟ್ಟು ಬಿಡದೇ ಧಾರಾಕಾರ ಮಳೆ (Rain) ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಅಬ್ಬರಕ್ಕೆ ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿವೆ. ಮಳೆ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸುಳ್ಯ, ಉಡುಪಿ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜು, ಅಂಗನವಾಡಿಗಳಿಗೆ ಇಂದು(ಜುಲೈ 255) ರಜೆ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಭಾಗದ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಬೆಂಗಳೂರು: ರಾಜ್ಯದಲ್ಲಿ ಜುಲೈ 27ರವರೆಗೂ ಮಳೆಯ ಆರ್ಭಟ ಮುಂದುವರಿಯಲಿದೆ. ಸಮುದ್ರಮಟ್ಟದಿಂದ 3.5ರಿಂದ 5.8 ಕಿ.ಮೀ.ವರೆಗೆ ಗಾಳಿ ಬೀಸುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಜುಲೈ 27ರವರೆಗೆ ಮಳೆ ಆರ್ಭಟ ಹೀಗೆ ಮುಂದುವರಿಯಲಿದೆ. ಬೆಂಗಳೂರು ನಗರದಲ್ಲಿ ತುಂತುರು ಮಳೆ ಸಹಿತ ಚಳಿ ವಾತಾವರಣವಿರಲಿದೆ; ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲೊದೆ. ಬೆಂಗಳೂರು ನಗರ & ಗ್ರಾಮಾಂತರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ