ಮಂಗಳೂರು ವಿಶ್ವ ವಿದ್ಯಾನಿಲಯ 2021ರ (Mangalore University) 1, 3 ಮತ್ತು 3ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಕುಳಿತಿದ್ದ ಅಭ್ಯರ್ಥಿಗಳು ಫಲಿತಾಂಶವನ್ನು (Exam result) ನೋಡಬಹುದು. ಪದವಿಪೂರ್ವ ಸೆಮಿಸ್ಟರ್ ಪರೀಕ್ಷೆಗಳನ್ನು (Exams) ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ನಡೆಸಲಾಯಿತು. ಪರೀಕ್ಷೆ ಬರೆದಿದ್ದಾ ಎಲ್ಲಾ ಅಭ್ಯರ್ಥಿಗಳು ಫಲಿತಾಂಶವನ್ನು ವಿಶ್ವವಿದ್ಯಾನಿಯಲದ ಅಧಿಕೃತ ವೆಬ್ ಸೈಟ್ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.
ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ http://mangaloreuniversity.ac.in/ ನಲ್ಲಿ ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಹಿಂದೆ ಏಪ್ರಿಲ್ ತಿಂಗಳಿನಲ್ಲಿ ಪರೀಕ್ಷೆಯನ್ನು ನಿರ್ಧರಿಸಲಾಗಿತ್ತು. ಕೊವಿಡ್ ಸಾಂಕ್ರಾಮಿಕ ರೋಗ ಹರಡುವಿಕೆಯಿಂದ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಯಿತು. ಇದೀಗ ಪರೀಕ್ಷೆಯ ರಿಸಲ್ಟ್ ಪ್ರಟವಾಗಿದ್ದು, ನೀವು ಈ ಕೆಳಗೆ ಹೇಳಿರುವ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪಡೆಯಬಹುದು.
*ಅಭ್ಯರ್ಥಿಗಳು ಮೊದಲಿಗೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ https://mangaloreuniversity.ac.in/results
*ಅಲ್ಲಿ ಕಾಣಿಸು ಪರೀಕ್ಷೆ ವಿಭಾಗದಲ್ಲಿ ಫಲಿತಾಂಶ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
*ನಿಮ್ಮ ರೋಲ್ ನಂಬರ್ ಮತ್ತು ಸೆಕ್ಯುರಿಟಿ ಪಿನ್ ಜೊತೆಗೆ ಕೇಳಿರುವ ಇತರ ಮಾಹಿತಿಯನ್ನು ನಮೂದಿಸಿ
*ಬಳಿಕ ನಿಮ್ಮ ಪರೀಕ್ಷಾ ಫಲಿತಾಂಶ ಸ್ಕ್ರೀನ್ ಮೇಲೆ ಕಾಣಿಸುತ್ತದೆ. ಆ ಪುಟವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಇದನ್ನೂ ಓದಿ:
ರೈತರ ಬದುಕಿಗೆ ಕೊಳ್ಳಿಯಿಟ್ಟ ಮಳೆರಾಯ; ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ಭಾರೀ ಮಳೆಗೆ ಐದು ಲಕ್ಷ ಹೆಕ್ಟೇರ್ ಬೆಳೆ ನಾಶ; ದುಪ್ಪಟ್ಟಾದ ತರಕಾರಿ ಬೆಲೆ, ಪ್ಯಾಕೆಟ್ ಒಂದರಲ್ಲಿ 2 ಟೊಮೆಟೋ ಮಾರಾಟ!
Published On - 10:58 am, Wed, 24 November 21