Mangaluru University: 4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ

ಅಕಾಡೆಮಿಕ್ ಕೌನ್ಸಿಲ್ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪಿ.ಎಸ್.ಯಡಪಡಿತ್ತಾಯ, ಕುಲಸಚಿವ (ಮೌಲ್ಯಮಾಪನ) ರಾಜು ಕೃಷ್ಣ ಚಲನ್ನವರ್, ಕುಲಸಚಿವರಾದ ಕಿಶೋರ್ ಕುಮಾರ್ ಸಿ.ಕೆ ಮತ್ತು ಇತರರು ವಹಿಸಿದ್ದರು.

Mangaluru University: 4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ
Mangaluru University
Follow us
ನಯನಾ ಎಸ್​ಪಿ
|

Updated on:Mar 17, 2023 | 1:12 PM

ಕೊಣಾಜೆ: ಗುರುವಾರ (ಮಾರ್ಚ್ 16) ನಡೆದ ಮಂಗಳೂರು ವಿಶ್ವವಿದ್ಯಾನಿಲಯದ (Mangaluru University) ಅಕಾಡೆಮಿಕ್ ಕೌನ್ಸಿಲ್ ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ (Academic Year) ಪ್ರಾರಂಭವಾಗುವ ನಾಲ್ಕು ವರ್ಷಗಳ ಬಿಕಾಂ ಇನ್ ಬ್ಯುಸಿನೆಸ್ ಡೇಟಾ ಅನಾಲಿಟಿಕ್ಸ್ (BCom in Business Data Analytics) ಕೋರ್ಸ್‌ಗೆ ಅನುಮೋದನೆ ನೀಡಲಾಯಿತು. ಮೊದಲ ಮತ್ತು ಎರಡನೇ ಸೆಮಿಸ್ಟರ್‌ಗಳ ಪಠ್ಯಕ್ರಮವನ್ನು ಅನುಮೋದಿಸಲಾಗಿದೆ. ಅಕಾಡೆಮಿಕ್ ಕೌನ್ಸಿಲ್ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪಿ.ಎಸ್.ಯಡಪಡಿತ್ತಾಯ, ಕುಲಸಚಿವ (ಮೌಲ್ಯಮಾಪನ) ರಾಜು ಕೃಷ್ಣ ಚಲನ್ನವರ್, ಕುಲಸಚಿವರಾದ ಕಿಶೋರ್ ಕುಮಾರ್ ಸಿ.ಕೆ ಮತ್ತು ಇತರರು ವಹಿಸಿದ್ದರು.

ಇದೇ ವೇಳೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನ ಕೇಂದ್ರದ ಸಂಸ್ಥೆಗೆ ಸಂಬಂಧಿಸಿದ ಕರಡು ಕಾಯಿದೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಸರ್ಕಾರವು ಪ್ರಸ್ತಾವನೆಯನ್ನು ಅನುಮೋದಿಸಿ 2022-23ರ ಬಜೆಟ್‌ನಲ್ಲಿ ವಿತ್ತೀಯ ಮಂಜೂರಾತಿಯನ್ನು ನೀಡಿದೆ ಮತ್ತು ಅರೆಭಾಷೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಲು ಅರೆಭಾಷೆ ಸಂಶೋಧನ ಕೇಂದ್ರ ಸ್ಥಾಪನೆಗೆ ಅನುದಾನವನ್ನು ಬಿಡುಗಡೆ ಮಾಡಿದೆ.

ಅರೆಭಾಷೆ ಅಥವಾ ಅರೆಗನ್ನಡವು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕುಗಳನ್ನು ಒಳಗೊಂಡಂತೆ ಗೌಡರು ಮತ್ತು ಇತರ ಕೆಲವು ಸಮುದಾಯಗಳಿಂದ ಮುಖ್ಯವಾಗಿ ಮಾತನಾಡುವ ಪ್ರಾದೇಶಿಕ ಭಾಷೆಯಾಗಿದೆ. 1,000 ವರ್ಷಗಳ ಇತಿಹಾಸ ಹೊಂದಿರುವ ಈ ಭಾಷೆ ಅಳಿವಿನ ಭೀತಿ ಎದುರಿಸುತ್ತಿದ್ದು, ಅರೆಭಾಷೆಯ ಸಾಹಿತ್ಯ, ಶ್ರೀಮಂತ ಸಂಸ್ಕೃತಿ, ಆಚರಣೆಗಳನ್ನು ಸಂರಕ್ಷಿಸಲು ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸುವ ಅಗತ್ಯವಿತ್ತು. ಸದ್ಯ ಯಡಪಡಿತ್ತಾಯ ಅವರು ರಾಜ್ಯ ಸರ್ಕಾರದ ಔಪಚಾರಿಕ ಅನುಮೋದನೆಗೆ ಕಾಯುತ್ತಿದ್ದಾರೆ ಮತ್ತು ಅನುಮೋದನೆ ಬಿಡುಗಡೆಯಾದ ನಂತರ ಸಂಶೋಧನಾ ಕೇಂದ್ರವು ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ ಎಂದು ಟೈಮ್ಸ್ ಆಫ್ ಇಂಡಿಯಾಗೆ ಹೇಳಿದ್ದಾರೆ.

ಇದನ್ನೂ ಓದಿ: ಮುಂದಿನ ವಾರ ಹೊರಬೀಳಲಿದೆ ಐಐಟಿ ಜೆಎಎಂ 2023 ಫಲಿತಾಂಶ; ಇಲ್ಲಿದೆ ಸಂಪೂರ್ಣ ಮಾಹಿತಿ

ಮಂಗಳೂರು ವಿಶ್ವವಿದ್ಯಾನಿಲಯ

ಮಂಗಳೂರು ವಿಶ್ವವಿದ್ಯಾನಿಲಯವು ಮಂಗಳೂರಿನ ಕೊಣಾಜೆಯಲ್ಲಿದೆ. “ಜ್ಞಾನವೇ ಬೆಳಕು” ಎಂಬ ಧ್ಯೇಯ ವಾಕ್ಯ ಹೊಂದಿರುಲಾವ್ ಈ ವಿಶ್ವವಿದ್ಯಾನಿಲಯ ಸುಮಾರು 360 ಎಕರೆ ಪ್ರದೇಶವನ್ನು ಹೊಂದಿದೆ. ದಕ್ಷಿಣ ಕನ್ನಡ, ಕೊಡಗು ಹಾಗು ಉಡುಪಿ ಜಿಲ್ಲೆಯ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳು ಈ ವಿಶ್ವವಿದ್ಯಾಲಯದ ಅಧಿಕಾರ ವ್ಯಾಪ್ತಿಗೆ ಒಳಪಡುತ್ತವೆ. ಮೊದಲು ಇದು ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರವಾಗಿತ್ತು .1980 ರಲ್ಲಿ ಸ್ವತಂತ್ರ ವಿಶ್ವವಿದ್ಯಾಲಯವಾಯಿತು.

Published On - 1:07 pm, Fri, 17 March 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್