SSLC, PUC ಎಕ್ಸಾಂ ಕುರಿತು ಮಹತ್ವದ ಸಭೆ: ಇದೇ ಮೊದಲ ಬಾರಿಗೆ ಪಿಯುಸಿಗೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳು

|

Updated on: Feb 21, 2023 | 2:58 PM

ಎರಡು ವರ್ಷಗಳ ಬಳಿಕ ಸಂಪೂರ್ಣ ಕೊವಿಡ್ ಮುಕ್ತವಾಗಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಹಿನ್ನಲೆ ಯಾವುದೇ ತರಹದ ಅಡಚಣೆ ಬಾರದಂತೆ ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆಯ ಜವಾಬ್ದಾರಿ. ನಕಲು ತಡೆದು ಸುರಕ್ಷಿತವಾಗಿ SSLC ಹಾಗೂ ಪಿಯು ಪರೀಕ್ಷೆ ನಡೆಸುವ ಕುರಿತು ಪೊಲೀಸ್ ಅಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಬಿ.ಸಿ ನಾಗೇಶ್ ಮಾತನಾಡಿದರು.

SSLC, PUC ಎಕ್ಸಾಂ ಕುರಿತು ಮಹತ್ವದ ಸಭೆ: ಇದೇ ಮೊದಲ ಬಾರಿಗೆ ಪಿಯುಸಿಗೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳು
ಬಿ.ಸಿ ನಾಗೇಶ್
Follow us on

ಬೆಂಗಳೂರು: ಮಾರ್ಚ್​​ ತಿಂಗಳಿಂದ ಎಸ್​ಎಸ್​​ಎಲ್​ಸಿ (SSLC) ಮತ್ತು ದ್ವಿತೀಯ ಪಿಯು (PUC) ಪರೀಕ್ಷೆ ಹಿನ್ನೆಲೆ ವಿಧಾನಸೌಧದಲ್ಲಿ (Vidhana Soudha) ಇಂದು (ಫೆಬ್ರವರಿ 21) ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪ್ರಾಥಮಿಕ ಹಾಗೂ ಪ್ರೌಢ  ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (B.C Nagesh) ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಪರೀಕ್ಷಾ ಕ್ರಮ, ಪರೀಕ್ಷೆಯಲ್ಲಿ ಆದ ಬದಲಾವಣೆ, ಭದ್ರತೆ ಹಾಗೂ ನಕಲು ಮುಕ್ತ ಪರೀಕ್ಷೆಯ ಕ್ರಮಗಳ ಕುರಿತು ಚರ್ಚಿಸಲಾಯಿತು.  ಪರೀಕ್ಷೆಯಲ್ಲಿ ನಕಲು ತಡೆದು ಸುರಕ್ಷಿತವಾಗಿ ಪರೀಕ್ಷೆ ನಡೆಸುವ ಕುರಿತು ಪೊಲೀಸ್ ಅಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಬಿ.ಸಿ ನಾಗೇಶ್ ಮಾತುಕತೆ ನಡೆಸಿದರು.

ಮಾರ್ಚ್ 9 ರಿಂದ 29 ರವರೆಗೂ ದ್ವೀತಿಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ SSCL ಪರೀಕ್ಷೆಗಳು ನಡೆಯಲಿದೆ. ಸಭೆಯ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್,  ದ್ವಿತೀಯ ಪಿಯುಸಿ ಪರೀಕ್ಷೆಯ ವಿವರಗಳನ್ನು ನೀಡಿದರು. ” ಈ ಬಾರಿ ದ್ವಿತೀಯ ಪಿಯುಸಿ ಪರೀಸಖೆಯಲ್ಲಿ ಒಟ್ಟು 5716 ಕಾಲೇಜುಗಳು ಭಾಗಿಯಾಗಲಿವೆ. ಒಟ್ಟು 7,27,387 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 1109 ಒಟ್ಟು ಪರೀಕ್ಷಾ ಕೇಂದ್ರಗಳು ಇರಲಿದೆ ಎಂದು ತಿಳಿಸಿದರು.

“ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್​ಗಳಿಗೆ ಅವಕಾಶ ಇರುವುದಿಲ್ಲ. ಪರೀಕ್ಷೆ ಪ್ರಾರಂಭವಾಗುವ 15 ನಿಮಿಷ ಮೊದಲು ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ಹಾಜರಿರಬೇಕು ಇದೆ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಮಲ್ಟಿಪಲ್ ಚಾಯ್ಸ್ ಇರಲಿದೆ. ಮಕ್ಕಳು ಪಾಸಾಗಲು 3 ಹಂತದ ಪ್ರಶ್ನೆಗಳು ಇರಲಿವೆ ಎಂದು ವಿವರಿಸಿದರು.

ಇನ್ನು ಇದೇ ಎಸ್​ಎಸ್​ಎಲ್​ಸಿ ಪರೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ನಾಗೇಶ್, ಪಿಯುಸಿ ಪರೀಕ್ಷೆ ನಂತರ ಎಸ್​ಎಸ್​​ಎಲ್​ಸಿ ಪರೀಕ್ಷೆಗಳು ನಡೆಯಲಿದೆ. ಶಿಕ್ಷಣ ಇಲಾಖೆ ಸಿಸಿ ಟಿವಿ ಅಳವಡಿಕೆ ಸೇರಿ ಬಹುತೇಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಭೆಯ ಬಳಿಕ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, “ಎಸ್​ಎಸ್​​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದಿನ ತಿಂಗಳು ನಡೆಯಲಿದ್ದು, ಪರೀಕ್ಷೆ ಸಂಬಂಧ ಯಾವುದೇ ವಿವಾದಗಳು ಆಗದ ರೀತಿಯಲ್ಲಿ ಪರೀಕ್ಷೆ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಿದ್ದೇವೆ. ಪ್ರಶ್ನೆ ಪತ್ರಿಕೆ ಸಾಗಾಟಕ್ಕೆ ಸೂಕ್ತ ಭದ್ರತೆ ಕಲ್ಪಿಸುವ ಬಗ್ಗೆಯೂ ಚರ್ಚೆ ಆಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಬೇಕು ಹಾಗೆಯೇ ಪರೀಕ್ಷೆ ಪಾವಿತ್ರತೆ ಕಾಪಾಡಬೇಕು.” ಎಂದು ತಿಳಿಸಿದರು.

ಇದನ್ನೂ ಓದಿ: ಕೇಂದ್ರ ಶಿಕ್ಷಣ ಸಚಿವರಿಂದ ಆರಂಭಿಕ ಬಾಲ್ಯ ಶಿಕ್ಷಣಕ್ಕೆ ಬೋಧನಾ ಕಲಿಕಾ ಸಾಮಗ್ರಿ ‘ಜಾದುಯಿ ಪಿತಾರಾ’ ಬಿಡುಗಡೆ

ಗೃಹ ಸಚಿವ ಆರಗ ಜ್ಞಾನೇಂದ್ರ, ಸಿಸಿಬಿ ಜಂಟಿ ಆಯುಕ್ತ ಶರಣಪ್ಪ, ಪಿಯು ಬೋರ್ಡ್ ನಿರ್ದೇಶಕಿ ಸಿಂಧು, ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷ ರಾಮಚಂದ್ರನ್, ನಿರ್ದೇಶಕ ಗೋಪಾಲಕೃಷ್ಣ ಸೇರಿದಂತೆ ಹಲವರ ಈ ಸಭೆಯಲ್ಲಿ ಭಾಗಿಯಾಗಿದ್ದರು.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Tue, 21 February 23