ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ: ಅಶ್ವತ್ಥ್ ನಾರಾಯಣ ಮಾಹಿತಿ

| Updated By: ganapathi bhat

Updated on: Nov 13, 2021 | 6:32 PM

ವಿದ್ಯಾರ್ಥಿಗಳು ಇಂಥವರನ್ನು ನೋಡಿ ಪ್ರೇರೇಪಿತರಾಗಬೇಕು. ನಾಡು ನುಡಿ ಚೆನ್ನಾಗಿರಬೇಕೆಂದರೆ ಸದೃಢವಾಗಿ ಬೆಳೆಯಬೇಕು ಎಂದು ಬೆಂಗಳೂರಿನಲ್ಲಿ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ: ಅಶ್ವತ್ಥ್ ನಾರಾಯಣ ಮಾಹಿತಿ
ಸಚಿವ ಆಶ್ವಥ್ ನಾರಾಯಣ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ ಆಗಿದೆ. ಎನ್​ಇಪಿಯಲ್ಲಿ ಸಾಂಸ್ಕೃತಿಕ ಶಿಕ್ಷಣ, ದೈಹಿಕ ಶಿಕ್ಷಣ, ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡಲಾಗುವುದು ಎಂದು ಬೆಂಗಳೂರಿನಲ್ಲಿ ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ ಇಂದು (ನವೆಂಬರ್ 13) ಹೇಳಿಕೆ ನೀಡಿದ್ದಾರೆ. ಸರ್ಕಾರಿ ಕಾಲೇಜಿನಲ್ಲಿರುವ ವ್ಯವಸ್ಥೆ ಖಾಸಗಿ ವಿವಿಗಳಲ್ಲೂ ಇಲ್ಲ. ಇಡೀ ಭಾರತ ದೇಶವೇ ಬೆಂಗಳೂರಿನಲ್ಲಿ ತಿರುಗಿ ನೋಡುತ್ತಿದೆ. ತಂತ್ರಜ್ಞಾನ, ಆವಿಷ್ಕಾರ ಕ್ಷೇತ್ರದಲ್ಲಿ ಬೆಂಗಳೂರು 23ನೇ ಸ್ಥಾನದಲ್ಲಿ ಇದೆ ಎಂದು ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಕನ್ನಡಿಗರು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಬಾರದು. ವಿಶ್ವದ ಮೂಲೆಮೂಲೆಗಳಲ್ಲೂ ಕನ್ನಡಿಗ ಸಾಧಕರಿದ್ದಾರೆ. ವಿದ್ಯಾರ್ಥಿಗಳು ಇಂಥವರನ್ನು ನೋಡಿ ಪ್ರೇರೇಪಿತರಾಗಬೇಕು. ನಾಡು ನುಡಿ ಚೆನ್ನಾಗಿರಬೇಕೆಂದರೆ ಸದೃಢವಾಗಿ ಬೆಳೆಯಬೇಕು ಎಂದು ಬೆಂಗಳೂರಿನಲ್ಲಿ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ಕನ್ನಡಿಗರು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಬಾರದು. ಜಗತ್ತಿನ ಮೂಲೆಮೂಲೆಗಳಲ್ಲೂ ಇಂದು ಕನ್ನಡಿಗ ಸಾಧಕರಿದ್ದಾರೆ. ವಿದ್ಯಾರ್ಥಿ ಸಮುದಾಯವು ಇಂಥವರಿಂದ ಪ್ರೇರಣೆ ಪಡೆದುಕೊಳ್ಳಬೇಕು. ನಮ್ಮ ನಾಡು-ನುಡಿ ಚೆನ್ನಾಗಿರಬೇಕೆಂದರೆ ಕನ್ನಡಿಗರು ಸದೃಢವಾಗಿ ಬೆಳೆಯಬೇಕು ಎಂದು ಅವರು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ನಿರೂಪಕಿ ಅಪರ್ಣಾ, ಪ್ರಾಂಶುಪಾಲರಾದ ಡಾ.ಡಿ.ಎಸ್. ಪ್ರತಿಭಾ, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರತ್ನಾಕರ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಎಸ್.ಕೌಸಲ್ಯಾ ಮುಂತಾದವರು ಉಪಸ್ಥಿತರಿದ್ದರು.

ಬಿಟ್‌ ಕಾಯಿನ್ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಬಸವರಾಜ ಬೊಮ್ಮಾಯಿ ಚರ್ಚೆ
ಬಿಟ್‌ ಕಾಯಿನ್ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಚರ್ಚೆ ನಡೆಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಬೊಮ್ಮಾಯಿ ಇಂದು (ನವೆಂಬರ್ 13) ಚರ್ಚೆ ಮಾಡಿದ್ದಾರೆ. ಬೆಳಗ್ಗೆ, ಮಧ್ಯಾಹ್ನ 2 ಸಲ ಅಧಿಕಾರಿಗಳನ್ನು ಕರೆಸಿ ಚರ್ಚೆ ನಡೆಸಲಾಗಿದೆ. ತನಿಖೆಯ ಪ್ರಗತಿ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಜೊತೆ ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ.

ಅನುಗ್ರಹ ಯೋಜನೆ ಮುಂದುವರಿಸಿದ್ದಕ್ಕೆ ಸಿಎಂಗೆ ಸನ್ಮಾನ ಮಾಡಲಾಗಿದೆ. ಕುರಿ, ಮೇಕೆ ಆಕಸ್ಮಿಕ ಮರಣಕ್ಕೆ ಪರಿಹಾರ ನೀಡುವ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದುವರಿಸಿದ್ದಕ್ಕೆ ಸನ್ಮಾನ ಮಾಡಲಾಗಿದೆ. ಗೃಹಕಚೇರಿ ಕೃಷ್ಣಾದಲ್ಲಿ ಶರಣು ತಳ್ಳಿಕೇರಿಯಿಂದ ಸಿಎಂಗೆ ಸನ್ಮಾನ ಮಾಡಲಾಗಿದೆ. ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮನವಳ್ಳಿ, ಬಸವರಾಜ್ ದಡೇಸುಗೂರು ಕಾರ್ಯಕ್ರಮದಲ್ಲಿ ಉಪಸ್ಥಿತಿ ವಹಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಕನ್ನಡಕ್ಕೆ ಮಾರಕ, ಸಿಎಫ್ಐ ಕರಾಳ ದಿನಾಚರಣೆ- ಅಲ್ಪಬುದ್ಧಿಯವರು ಹೀಗೆ ಹೇಳ್ತಾರೆ ಎಂದ ಸಚಿವ ಸುನೀಲ್ ಕುಮಾರ್

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆ ನಿರ್ಧಾರವನ್ನು ಪ್ರಶ್ನಿಸಿದ ಬಿಕೆ ಹರಿಪ್ರಸಾದ್; ಖಾಸಗೀಕರಣದ ಹುನ್ನಾರ ಎಂದು ಟೀಕೆ

Published On - 6:28 pm, Sat, 13 November 21