ಇನ್ನೆರಡು ದಿನಗಳಲ್ಲಿ ಶಾಲೆ ಆರಂಭಿಸುವ ಬಗ್ಗೆ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆ

ಇನ್ನೆರಡು ದಿನಗಳಲ್ಲಿ ಶಾಲೆ ಆರಂಭಿಸುವ ಬಗ್ಗೆ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆ
ಸಚಿವ ಬಿ.ಸಿ.ನಾಗೇಶ್

BC Nagesh: ಶನಿವಾರ, ಭಾನುವಾರ ತರಗತಿ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಆದರೆ ಪಠ್ಯ ಕಡಿತದ ಕುರಿತು ಯಾವುದೇ ಪ್ರಸ್ತಾಪ ಇಲ್ಲ ಎಂದು ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

TV9kannada Web Team

| Edited By: ganapathi bhat

Oct 16, 2021 | 4:18 PM

ಬೆಂಗಳೂರು: ಇನ್ನೆರಡು ದಿನಗಳಲ್ಲಿ ಶಾಲೆ ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. 1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಿಗದಿ ಮಾಡುತ್ತಾರೆ. ಸಭೆಯಲ್ಲಿ ಶಾಲೆ ಆರಂಭಿಸುವ ಬಗ್ಗೆ ನಿರ್ಧರಿಸಲಾಗುತ್ತೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದಾರೆ. ಶನಿವಾರ, ಭಾನುವಾರ ತರಗತಿ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಆದರೆ ಪಠ್ಯ ಕಡಿತದ ಕುರಿತು ಯಾವುದೇ ಪ್ರಸ್ತಾಪ ಇಲ್ಲ ಎಂದು ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

1 ರಿಂದ 5 ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ‌. ಆದರೆ ತಾಂತ್ರಿಕ ಸಲಹಾ ಸಮಿತಿ ಏನು ಹೇಳುತ್ತದೆ ಎಂಬುದನ್ನು ನೋಡಬೇಕು. ಒಂದು ವೇಳೆ ಅವರು ಹಂತ ಹಂತವಾಗಿ ಶಾಲೆ ಆರಂಭಿಸಿ ಅಂದರೆ‌, 1 ರಿಂದ 2 ಹಾಗೂ 3 ರಿಂದ‌ 5ನೇ ತರಗತಿವರೆಗೆ ಶಾಲೆ ಆರಂಭಿಸುವ ಬಗ್ಗೆ ನಿರ್ಧಾರ ಮಾಡ್ತೇವೆ‌. ಒಂದು ವೇಳೆ ಈ ರೀತಿ ನಿರ್ಧಾರ ಆದರೂ ಸಮಯ ಜಾಸ್ತಿ ತೆಗೆದುಕೊಳ್ಳುವುದಿಲ್ಲ‌. ಹತ್ತು ದಿನಗಳಲ್ಲಿ ಉಳಿದ ತರಗತಿಗಳನ್ನು ಆರಂಭಿಸುವ ಬಗ್ಗೆ ನಿರ್ಧಾರ ಮಾಡ್ತೇವೆ ಎಂದು ನಾಗೇಶ್ ಮಾಹಿತಿ ನೀಡಿದ್ದಾರೆ.

ಸದ್ಯಕ್ಕೆ ಇದುವರೆಗೂ ಶಾಲೆ ಆರಂಭಿಸುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆದಿಲ್ಲ. ಸಿಎಂ ಸಭೆಗೆ ಸಮಯ ಕೊಟ್ಟ ಕೂಡಲೇ, ತಜ್ಞರಿಂದ ಅಭಿಪ್ರಾಯ ಪಡೆಯುತ್ತೇವೆ. ಆ ನಂತರ ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಮಾಡ್ತೇವೆ. ಈಗಾಗಲೇ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ದತೆ ನಡೆಸಿದೆ ಎಂದು ಅವರು ತಿಳಿಸಿದ್ದಾರೆ.

ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಹಲವಾರು ಜಿಲ್ಲೆಯಲ್ಲಿ ಪಾಸಿಟಿವಿಟಿ ಶೂನ್ಯ ಪ್ರಮಾಣದಲ್ಲಿದೆ. ಹೀಗಾಗಿ ತಜ್ಞರ ಅಭಿಪ್ರಾಯದಂತೆ ದಸರಾ ಮುಗಿದ ತಕ್ಷಣವೇ ಶಾಲೆಗಳು ಆರಂಭಿಸುತ್ತೇವೆ. ಜತೆಗೆ ದಸರಾ ಮುಗಿದ ತಕ್ಷಣ ಬಿಸಿಯೂಟ ಆರಂಭವಾಗಲಿದೆ ಎಂದು ಈ ಮೊದಲು ಸಚಿವರು ಹೇಳಿಕೆ ನೀಡಿದ್ದರು.

ಆಯಾ ಜಿಲ್ಲೆಯ ಅಧಿಕಾರಿಗಳು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದಾರೆ. ಎಲ್ಲರಿಗೂ ಶಾಲೆ ಕಡ್ಡಾಯ ಮಾಡಿಲ್ಲ, ಮುಂದೆಯೂ ಕಡ್ಡಾಯ ಮಾಡಲ್ಲ. ಆನ್ಲೈನ್, ಆಫ್ ಲೈನ್ ಎರಡು ಮಾದರಿಯಲ್ಲಿ ತರಗತಿಗಳು ನಡೆಯಲಿದೆ. ಈಗ ಆರಂಭವಾಗಿರುವ ಶಾಲೆಗಳ ಹಾಜರಾತಿ ತೃಪ್ತಿಕರವಾಗಿದೆ. ಆನ್ಲೈನ್ ತರಗತಿಯಿಂದ ಕೆಳ ಗ್ರಾಮೀಣ ಮಕ್ಕಳಿಗೆ ತೊಂದರೆಯಾಗಿದೆ. ಗ್ರಾಮೀಣ ಭಾಗದಲ್ಲಿ ಹೈಸ್ಕೂಲ್ ಮಕ್ಕಳ ಹಾಜರಾತಿ ಶೇ. 90ರಷ್ಟಿದೆ ಎಂದು ಅವರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿ ರೋಹಿತ್ ಚಕ್ರತೀರ್ಥ; ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸಮರ್ಥನೆ

ಇದನ್ನೂ ಓದಿ: Karnataka School Reopen: ದಸರಾ ಬಳಿಕ 1ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ: ಶಿಕ್ಷಣ ಸಚಿವ ಬಿ ಸಿ ನಾಗೇಶ್

Follow us on

Related Stories

Most Read Stories

Click on your DTH Provider to Add TV9 Kannada