AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆ ಶುರುವಾಗುವ ಸಮಯ ವಿವರ

ಕರ್ನಾಟಕ SSLC, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ: ಕರ್ನಾಟಕ ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ವೇಳಾಪಟ್ಟಿ ಪ್ರಕಟವಾಗಿದೆ. ಈಗಾಗಲೇ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮತ್ತೊಮ್ಮೆ ದ್ವಿತೀಯ ಪಿಯುಸಿ, 10ನೇ ತರಗತಿ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ. ಇನ್ನು ಈ ಬಾರಿ ಎಷ್ಟು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ? ಪರೀಕ್ಷೆ ಸಮಯದ ಬಗ್ಗೆ ವಿವರಿಸಿದ್ದು, ಅದು ಈ ಕೆಳಗಿನಂತಿದೆ.

SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆ ಶುರುವಾಗುವ ಸಮಯ ವಿವರ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on:Feb 17, 2026 | 3:43 PM

Share

ಬೆಂಗಳೂರು, (ಫೆಬ್ರವರಿ 17): ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ತಿಳಿಸಿದರು.

SSLC ಪರೀಕ್ಷಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ

ಮಾರ್ಚ್​ 18ರಿಂದ ಆರಂಭವಾಗಲಿರುವ ಎಸ್​​ಎಸ್​​ಎಲ್​ಸಿ ಪರೀಕ್ಷೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ. ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 9,02,889. ಹೊಸಬರು 8,12,855, ಪುನರಾವರ್ತಿತ 62,845 ವಿದ್ಯಾರ್ಥಿಗಳು. 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ 2871.

ಇದನ್ನೂ ಓದಿ: 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ

ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ

ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪೈಕಿ 6,46,801 ಹೊಸಬರು, 50,540 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಖಾಸಗಿ ಅಭ್ಯರ್ಥಿಗಳು ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ರಾಜ್ಯಾದ್ಯಂತ ಒಟ್ಟು 1217 ದ್ವಿತೀಯ ಪಿಯು ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದ್ದು, ಏಪ್ರಿಲ್ 7ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

ಎಸ್​​ಎಸ್​​ಎಲ್​ಸಿ ಪರೀಕ್ಷಾ ವೇಳಾಪಟ್ಟಿ: ಮೇ 18ರಿಂದ ಆರಂಭವಾಗಲಿರುವ ಎಸ್​ಎಲ್​ಎಲ್​ಸಿ ಪರೀಕ್ಷೆ-2; ಮೇ 18ರಂದು ಪ್ರಥಮ ಭಾಷೆ, ಮೇ 19ರಂದು ವಿಜ್ಞಾನ, ಮೇ 20ರಂದು ದ್ವೀತಿಯ ಭಾಷೆ, ಮೇ 21ರಂದು ಗಣಿತ, ಮೇ 22ರಂದು ತೃತೀಯ ಭಾಷೆ, ಮೇ 23ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ

  • ಫೆಬ್ರವರಿ 28- ಕನ್ನಡ, ಅರೇಬಿಕ್
  • ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
  • ಮಾರ್ಚ್ 3- ಇಂಗ್ಲಿಷ್
  • ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್.
  • ಮಾರ್ಚ್ 5- ಇತಿಹಾಸ
  • ಮಾರ್ಚ್ 6- ಭೌತಶಾಸ್ತ್ರ
  • ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ.
  • ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
  • ಮಾರ್ಚ್ 10- ಅರ್ಥಶಾಸ್ತ್ರ
  • ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ
  • ಮಾರ್ಚ್ 12- ಹಿಂದಿ
  • ಮಾರ್ಚ್ 13- ರಾಜ್ಯಶಾಸ್ತ್ರ
  • ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
  • ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ.
  • ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Tue, 17 February 26

Follow Us
Vinay Kashappanavar
Vinay Kashappanavar
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!