AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಸಚಿವ ಜೋಶಿ ಕಸರತ್ತು: ಹಿರಿಯ ಅಧಿಕಾರಿಗಳ ಜತೆ ಸರಣಿ ಸಭೆ

ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಶೈಕ್ಷಣಿಕ ಉಪಕ್ರಮಗಳ ಅನುಷ್ಠಾನವನ್ನು ಪರಿಶೀಲಿಸಿದರು. ಪ್ರತಿ ಹಂತದಲ್ಲೂ ಶಿಕ್ಷಣ ಸುಧಾರಣೆ, ಯೋಜನೆಗಳ ಸಮಯೋಚಿತ ಅನುಷ್ಠಾನ ಮತ್ತು ಪರಿಣಾಮಕಾರಿ ಮೇಲ್ವಿಚಾರಣೆಗೆ ಅವರು ಆದ್ಯತೆ ನೀಡುತ್ತಿದ್ದಾರೆ.

ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಸಚಿವ ಜೋಶಿ ಕಸರತ್ತು: ಹಿರಿಯ ಅಧಿಕಾರಿಗಳ ಜತೆ ಸರಣಿ ಸಭೆ
ಅಧಿಕಾರಿಗಳೊಂದಿಗೆ ಪ್ರಲ್ಹಾದ್​ ಜೋಶಿ ಸಭೆImage Credit source: x.com/JoshiPralhad
ಗಂಗಾಧರ​ ಬ. ಸಾಬೋಜಿ
|

Updated on:Aug 26, 2026 | 10:48 PM

Share

ದೆಹಲಿ, ಆಗಸ್ಟ್​ 26: ನೀಟ್ ಪ್ರಶ್ನೆಪತ್ರಿಕೆ ಸೊರಿಕೆ ಇಡೀ ದೇಶದಲ್ಲಿ ಹೋರಾಟ ಕ್ರಾಂತಿ ಹುಟ್ಟಿಸಿತ್ತು. ಅಷ್ಟೇ ಅಲ್ಲದೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೂ ಕಾರಣವಾಗಿತ್ತು. ಆಬಳಿಕ ವಿದ್ಯಾರ್ಥಿಗಳ ಪ್ರತಿಭಟನೆ ಸೈಲೆಂಟ್ ಆಗಿತ್ತು. ನಂತರ ನೂತನ ಶಿಕ್ಷಣ ಸಚಿವರನ್ನಾಗಿ ಪ್ರಲ್ಹಾದ್​​ ಜೋಶಿಯನ್ನು (Pralhad Joshi) ಕೇಂದ್ರ ಸರ್ಕಾರ ನೇಮಿಸಿತ್ತು. ಅಂದಿನಿಂದ ಈವರೆಗೆ ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಪ್ರಲ್ಹಾದ್​​ ಜೋಶಿ ನಿರಂತರವಾಗಿ ಉನ್ನತ ಮಟ್ಟದ ಸಭೆಗಳನ್ನು ಮಾಡುತ್ತಿದ್ದಾರೆ. ಇಂದು ಕೂಡ ಉನ್ನತ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಮಾಡಿದ್ದು, ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಕಸರತ್ತು ನಡೆಸಿದ್ದಾರೆ.

ಪ್ರತಿ ಹಂತದಲ್ಲೂ ಶಿಕ್ಷಣ ವ್ಯವಸ್ಥೆ ಬಲಪಡಿಸಲು ಆದ್ಯತೆ

ಶಿಕ್ಷಣ ಸಚಿವ ಪ್ರಲ್ಹಾದ್​​ ಜೋಶಿ ಇಂದು ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಉನ್ನತ ಮಟ್ಟದ ಮಹತ್ವದ ಸಭೆ ಮಾಡಿದ್ದು, ಪ್ರಸ್ತುತ ಜಾರಿಯಲ್ಲಿರುವ ವಿವಿಧ ಶೈಕ್ಷಣಿಕ ಉಪಕ್ರಮಗಳ ವಾಸ್ತವ ಅನುಷ್ಠಾನದ ಕುರಿತು ಸಮಗ್ರ ಅವಲೋಕನ ನಡೆಸಿದ್ದಾರೆ.

ಪ್ರಲ್ಹಾದ್​​ ಜೋಶಿ ಟ್ವೀಟ್​

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ‘ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನೀಡಲಾದ ನಿರ್ದೇಶನಗಳ ಪ್ರಗತಿಯನ್ನು ಅವಲೋಕಿಸಲಾಯಿತು ಮತ್ತು ಪ್ರಸ್ತುತ ಜಾರಿಯಲ್ಲಿರುವ ಉಪಕ್ರಮಗಳ ಅನುಷ್ಠಾನವನ್ನು ಪರಿಶೀಲಿಸಲಾಯಿತು’ ಎಂದಿದ್ದಾರೆ.

ಇದನ್ನೂ ಓದಿ: ಶಿಕ್ಷಣ ಸಚಿವಾಲಯದ ಅಧಿಕಾರಿಗಳೊಂದಿಗೆ ಸಿಬಿಎಸ್​ಇ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಭೆ

‘ಪ್ರತಿಯೊಂದು ಹಂತದಲ್ಲೂ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದರ ಕಡೆಗೆ ನಿರಂತರ ಗಮನಹರಿಸುವುದರೊಂದಿಗೆ, ಯೋಜನೆಗಳ ಸಮಯೋಚಿತ ಅನುಷ್ಠಾನ ಹಾಗೂ ಪರಿಣಾಮಕಾರಿ ಮೇಲ್ವಿಚಾರಣೆಯ ಅಗತ್ಯತೆಯನ್ನು ಹೇಳಲಾಯಿತು’ ಎಂದು ತಿಳಿಸಿದ್ದಾರೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:46 pm, Wed, 26 August 26

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ