ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಮೈಸೂರು ವಿಶ್ವವಿದ್ಯಾಲಯ, ಪದವಿ ಪರೀಕ್ಷೆಗಳು ಮುಂದೂಡಿಕೆ

ವಿದ್ಯಾರ್ಥಿಗಳ ಪ್ರತಿಭಟನೆ ಮೈಸೂರು ವಿಶ್ವವಿದ್ಯಾಯಲ ಮಣಿದಿದ್ದು, ಪದವಿ ಪರೀಕ್ಷೆಗಳನ್ನು ಒಂದು ವಾರಗಳ ಕಾಲ ಮುಂದೂಡಿದೆ.

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಮೈಸೂರು ವಿಶ್ವವಿದ್ಯಾಲಯ, ಪದವಿ ಪರೀಕ್ಷೆಗಳು ಮುಂದೂಡಿಕೆ
ಮೈಸೂರು ವಿಶ್ವವಿದ್ಯಾಲಯ
Follow us
ದಿಲೀಪ್​, ಚೌಡಹಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on:Jul 21, 2023 | 9:17 AM

ಮೈಸೂರು, (ಜುಲೈ 21): ಮೈಸೂರು ವಿಶ್ವ ವಿದ್ಯಾನಿಲಯದ (Mysuru University) ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ವಿದ್ಯಾರ್ಥಿಗಳ(Students) ಪ್ರತಿಭಟನೆ‌ಗೆ ಮಣಿದ ವಿಶ್ವವಿದ್ಯಾಯಲ, ಪದವಿ ಪರೀಕ್ಷೆಗಳನ್ನು(Exams) ಒಂದು ವಾರ ಮುಂದೂಡಿದೆ. 24-7-2023ರಿಂದ ಪದವಿ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಆದ್ರೆ, ಪದವಿ ಕಾಲೇಜುಗಳು ಕೇವಲ 2 ತಿಂಗಳಷ್ಟೇ ನಡೆದಿದ್ದು, ಸರಿಯಾಗಿ ಪಾಠ ಪ್ರವಚನ ನಡೆಸಿಲ್ಲ. ಕನಿಷ್ಠ 15ದಿನಗಳ ಕಾಲ ಪರೀಕ್ಷೆ ಮುಂದೂಡಬೇಕೆಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಇದರಿಂದ ವಿಶ್ವವಿದ್ಯಾಯಲದ ಪರೀಕ್ಷಾ ಪ್ರಾಧಿಕಾರ ಪರೀಕ್ಷೆಗಳನ್ನು ಮುಂದೂಡಿದ್ದು, 1-8-2023ರಿಂದ 30-8-2023ರ ವರೆಗೆ  ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ.

ಇದನ್ನೂ ಓದಿ: Mysore News: ಪದವಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಮೈಸೂರು ವಿವಿ ವಿದ್ಯಾರ್ಥಿಗಳಿಂದ ಮುಂದುವರಿದ ಪ್ರತಿಭಟನೆ

ವಿಧಾನಸಭೆ ಚುನಾವಣೆಗಾಗಿ ಕಾಲೇಜಿನ ಕಟ್ಟಡಗಳನ್ನು ಬಳಸಿಕೊಳ್ಳಲಾಗಿತ್ತು. ಹೀಗಾಗಿ ಪಾಠಗಳು ಸಮರ್ಪವಾಗಿ ನಡೆದಿಲ್ಲ. ಪದವಿ ಕಾಲೇಜುಗಳಲ್ಲಿ 4 ತಿಂಗಳು ಪಾಠ ಮಾಡಿ, ಪರೀಕ್ಷೆ ಮಾಡಬೇಕು. ಆದರೆ, ಕೇವಲ 2 ತಿಂಗಳು ಮಾತ್ರ ತರಗತಿಗಳು ನಡೆದಿವೆ. ಇದುವರೆಗೆ ಪಠ್ಯ ಕ್ರಮವೂ ಲಭ್ಯವಾಗಿಲ್ಲ. ಭಾನುವಾರ ಕೂಡ ಪರೀಕ್ಷೆಗಳನ್ನು ನಡೆಸುತ್ತಿರುವುದು ಸರಿಯಾದ ಕ್ರಮವಲ್ಲ. ಕೇವಲ ಒಂದು ವಾರದಲ್ಲಿ ಎಲ್ಲಾ ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕನಿಷ್ಠ 15 ದಿನ ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದರು. ಕೊನೆಗೆ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ವಿಶ್ವಾವಿದ್ಯಾಲಯ ಒಂದು ವಾರ ಪರೀಕ್ಷೆಗಳನ್ನು ಮುಂದೂಡಿದೆ.

ಪದವಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಬಳಿ ನೂರಾರು ವಿದ್ಯಾರ್ಥಿಗಳು ಕಳೆದ ಮೂರು ದಿನಗಳಿಂದ ಪ್ರತಿಭಟನೆ(Protest) ನಡೆಸಿದ್ದರು. ಎಐಡಿಎಸ್ಒ(AIDSO) ಸಂಘಟನೆಯ ಸಂಯುಕ್ತಾಶ್ರಯದಲ್ಲಿ ಈ ಪ್ರತಿಭಟನೆ ನಡೆದಿದ್ದು, ಹಲವು ವಿದ್ಯಾರ್ಥಿಗಳ ಸಂಘಟನೆಗಳು ಸಹ ಸಾಥ್ ನೀಡಿದ್ದವು.

ಇನ್ನಷ್ಟು ರಾಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:59 am, Fri, 21 July 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ