AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Education Day 2021: ಮೌಲಾನಾ ಅಬುಲ್​ ಕಲಾಂ ಆಜಾದ್ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ನೆಪಿಸಿಕೊಳ್ಳಲೇಬೇಕು

ರಾಷ್ಟ್ರೀಯ ಶಿಕ್ಷಣ ದಿನ 2021: ಶಿಕ್ಷಣ ಕ್ಷೇತ್ರಕ್ಕೆ ಮೌಲಾನಾ ಅಬುಲ್​ ಕಲಾಂ ಆಜಾದ್ ಅವರು ನೀಡಿದ ಕೊಡುಗೆಗಳನ್ನು ಗಮನದಲ್ಲಿಟ್ಟುಕೊಂಡು 2008ರಿಂದ ಪ್ರತೀ ವರ್ಷ ಅವರ ಜನ್ಮದಿನದಂದು ರಾಷ್ಟ್ರಿಯ ಶಿಕ್ಷಣ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

National Education Day 2021: ಮೌಲಾನಾ ಅಬುಲ್​ ಕಲಾಂ ಆಜಾದ್ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ನೆಪಿಸಿಕೊಳ್ಳಲೇಬೇಕು
ಮೌಲಾನಾ ಅಬುಲ್​ ಕಲಾಂ ಆಜಾದ್
TV9 Web
| Updated By: shruti hegde|

Updated on:Nov 11, 2021 | 11:46 AM

Share

ರಾಷ್ಟ್ರೀಯ ಶಿಕ್ಷಣ ದಿನವನ್ನು ನವೆಂಬರ್ 11 ರಂದು ಆಚರಿಸಲಾಗುತ್ತದೆ. 2008ರಿಂದ ಪ್ರತೀ ವರ್ಷ ನವೆಂಬರ್ 11ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ದಿನದಂದು ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವ, ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ ಮೌಲಾನಾ ಅಬುಲ್​ ಕಲಾಂ ಆಜಾದ್ ಅವರ ಜನ್ಮ ದಿನವಾಗಿದ್ದು, ಈ ದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ. ಧೀಮಂತ ಮನಸ್ಸಿನ ಕಲಾಂ ಅವರು ಸ್ವಾತಂತ್ರ್ಯಾ ನಂತರ ದೇಶದ ಮೊದಲ ಕೆಂದ್ರ ಶಿಕ್ಷಣ ಸಚಿವರಾಗಿದ್ದರು. ಅವರು 1947 ರಿಂದ 1958ರವರೆಗೆ ಸ್ವತಂತ್ರ ಭಾರತದ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದರು. ಕಲಾಂ ಅವರ ಜನ್ಮದಿನದ ನೆನಪಿಗಾಗಿ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ.

ಶಿಕ್ಷಣ ತಜ್ಞ, ಪತ್ರಕರ್ತ, ಸ್ವಾತಂತ್ರ್ಯ ಹೋರಾಟಗಾರ ಮತ್ತು ರಾಜಕಾರಣಿಯಾಗಿ ಸೇವೆ ಸಲ್ಲಿಸಿದ್ದ ಕಲಾಂ ಅವರು ಭಾರತದ ಶಿಕ್ಷಣ ಕ್ಷೇತ್ರವನ್ನು ಸುಧಾರಿಸಲು ಪ್ರಮುಖ ಪಾತ್ರವಹಿಸಿದರು. ಶಾಲೆಗಳು ದೇಶದ ಭವಿಷ್ಯದ ನಾಗರಿಕರನ್ನು ಉತ್ಪಾದಿಸುವ ಪ್ರಯೋಗಾಲಯಗಳಿದ್ದಂತೆ ಎಂದು ಮೌಲಾನಾ ಆಜಾದ್ ಅವರು ಹೇಳಿದ್ದರು.

ನಮ್ಮ ಕನಸುಗಳು ಆಲೋಚನೆಗಳಾಗಿ ಬದಲಾಗುತ್ತವೆ ಮತ್ತು ಆಲೋಚನೆಗಳು ಕ್ರಿಯೆಗಳಿಗೆ ಕಾರಣವಾಗುತ್ತವೆ ಎಂದು ಕಲಾಂ ಹೇಳುತ್ತಾರೆ. ಕಲಾಂ ಅವರು ದೇಶದಲ್ಲಿ ಶಿಕ್ಷಣವನ್ನು ಸುಧಾರಿಸುವ ಕನಸು ಕಂಡಿದ್ದರು. ಆ ಕನಸನ್ನು ನನಸಾಗಿಸಲು ಶ್ರಮಿಸಿದರು. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ಗಮನದಲ್ಲಿಟ್ಟುಕೊಂಡು 2008ರಿಂದ ಪ್ರತೀ ವರ್ಷ ಅವರ ಜನ್ಮದಿನದಂದು ರಾಷ್ಟ್ರಿಯ ಶಿಕ್ಷಣ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಈ ದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವಚನ್ನಾಗಿ ಆಚರಿಸಲು ನಿರ್ಧರಿಸಿತು. ಭಾರತದ ಶಿಕ್ಷಣದ ಸುಧಾರಣೆಯಲ್ಲಿ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವ ಮೂಲಕ ಭಾರತದ ಮಹಾನ್ ಪುತ್ರ ಕಲಾಂ ಅವರ ಜನ್ಮದಿನದಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ ಎಂದು ಸಚಿವಾಲಯವು ಹೇಳಿದೆ.

ರಾಷ್ಟ್ರದ ಬೆಳವಣಿಗೆ ಮತ್ತು ಏಳಿಗೆಗೆ ಶಿಕ್ಷಣ ಅತ್ಯಂತ ಮುಖ್ಯ ಎಂದು ಕಲಾಂ ಉಲ್ಲೇಖಿಸಿದ್ದರು. ಅವರು ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ, ಭಾರತದಲ್ಲಿ ಮೊದಲ ಭಾರತೀಯ ತಂತ್ರಜ್ಞಾನ ಸಂಸ್ಥೆ, ಸ್ಕೂಲ್ ಆಫ್ ಪ್ಲಾನಿಂಗ್ ಆರ್ಕಿಟೆಕ್ಚರ್, ಭಾರತೀಯ ವಿಜ್ಞಾನ ಸಂಸ್ಥೆ ಹೀಗೆ ಹಲವಾರು ಪ್ರಮುಖ ಸಂಸ್ಥೆಗಳನ್ನು ಸ್ಥಾಪಿಸಿದರು.

ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಸೌದಿ ಅರೇಬಿಯಾದ ಮೆಕ್ಕಾದಲ್ಲಿ 1888ರಲ್ಲಿ ಜನಿಸಿದರು. ವಿದ್ಯಾರ್ಥಿಗಳು ಸೃಜನಶೀಲರಾಗಿರಬೇಕು ಮತ್ತು ವಿಭಿನ್ನವಾಗಿ ಯೋಚಿಸಬೇಕು ಎಂದು ಯಾವಾಗಲೂ ಒತ್ತಿ ಹೇಳುತ್ತಿದ್ದರು. ಶಿಕ್ಷಣ ತಜ್ಞರು ವಿದ್ಯಾರ್ಥಿಗಳಿಗೆ ವಿಚಾರಣಾ ಮನೋಭಾವ, ಸೃಜನಶೀಲತೆ, ಉದ್ಯಮಶೀಲತೆ ಮತ್ತು ನೈತಿಕ ನಾಯಕತ್ವವನ್ನು ಕಲಿಸಬೇಕು ಎಂದು ಹೇಳಿದ್ದರು.

ರಾಷ್ಟ್ರದ ಸುಧಾರಣೆಗೆ ಮಹಿಳಾ ಸಬಲೀಕರಣವು ಅವಶ್ಯಕ ಎಂದು ಅವರು ನಂಬಿದ್ದರು. ಈ ಉದ್ದೇಶಕ್ಕಾಗಿ 1949ರಲ್ಲಿ ವಿಧಾನ ಸಭೆಯಲ್ಲಿ ಮಹಿಳೆಯರ ಶಿಕ್ಷಣದ ಬಗ್ಗೆ ಪ್ರಸ್ತಾಪಿಸಿದರು. ಶಿಕ್ಷಣಕ್ಕೆ ಕೊಡುಗೆ ನೀಡುತ್ತಾ ಗ್ರಾಮೀಣ ಉನ್ನತ ಶಿಕ್ಷಣ ಮಂಡಳಿ, ಮೂಲಭೂತ ಶಿಕ್ಷಣಕ್ಕಾಗಿ ರಾಷ್ಟ್ರೀಯ ಸಂಸ್ಥೆಗೆ ಅಡಿಪಾಯವನ್ನು ಹಾಕಿದರು. ಕಲಾಂ ಅವರ ಕೊಡೆಗೆಯು ಶಿಕ್ಷಣ ಕ್ಷೇತ್ರದಲ್ಲಿ ಭಾರತ ಅಭಿವೃದ್ಧಿ ಸಾಧಿಸಲು ಮಹತ್ತರ ಪಾತ್ರವಹಿಸಿದೆ. ಅವರ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯ ನೆನಪಿಗಾಗಿ ಅವರ ಜನ್ಮದಿನದಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ:

Ayurveda Day 2021: ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಿ; ನೀವು ತಿಳಿಯಲೇಬೇಕಾದ ಒಂದಿಷ್ಟು ಮಾಹಿತಿ ಇಲ್ಲಿದೆ

World Vegan Day 2021: ಸಸ್ಯಹಾರದಲ್ಲಿ ಪ್ರೋಟೀನ್ ತುಂಬಿರುವ ಪದಾರ್ಥಗಳು ಯಾವುವು? ತಿಳಿಯಲೇಬೇಕು

Published On - 11:45 am, Thu, 11 November 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?