AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET 2021 Registration: ನೀಟ್ ಪ್ರವೇಶ ಪರೀಕ್ಷೆಗೆ ಹೆಸರು ನೋಂದಾಯಿಸಲು ಇಂದು ಕೊನೆಯ ದಿನ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

NEET 2021 Entrance Exam: ಸೆಪ್ಟೆಂಬರ್ 12ಕ್ಕೆ ನೀಟ್ ಪರೀಕ್ಷೆ ನಡೆಯಲಿದ್ದು, ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ನಾಳೆಯಿಂದ ಆ. 14ರವರೆಗೆ ಅಭ್ಯರ್ಥಿಗಳು ಆನ್​ಲೈನ್​ನಲ್ಲಿ ಸಲ್ಲಿಸಿದ ಅರ್ಜಿಯ ತಿದ್ದುಪಡಿ ಮಾಡಲು ಅವಕಾಶವಿದೆ.

NEET 2021 Registration: ನೀಟ್ ಪ್ರವೇಶ ಪರೀಕ್ಷೆಗೆ ಹೆಸರು ನೋಂದಾಯಿಸಲು ಇಂದು ಕೊನೆಯ ದಿನ; ಅರ್ಜಿ ಸಲ್ಲಿಸಲು ಹೀಗೆ ಮಾಡಿ
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 10, 2021 | 1:29 PM

Share

ನವದೆಹಲಿ: ಎನ್​ಟಿಎ (NTA) ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (NEET UG Exam 2021) ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ನೀಟ್ ಯುಜಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಇಂದು ರಾತ್ರಿ 9.50ರೊಳಗೆ ntaneet.nic.in ವೆಬ್​ಸೈಟ್​ನಲ್ಲಿ ಹೆಸರು ಮತ್ತು ದಾಖಲೆಗಳನ್ನು ನೋಂದಾಯಿಸಬೇಕು. ಸೆಪ್ಟೆಂಬರ್ 12ಕ್ಕೆ ನೀಟ್ ಪರೀಕ್ಷೆ ನಡೆಯಲಿದ್ದು, ನಾಳೆಯಿಂದ ಆ. 14ರವರೆಗೆ ಅಭ್ಯರ್ಥಿಗಳು ಆನ್​ಲೈನ್​ನಲ್ಲಿ ಸಲ್ಲಿಸಿದ ಅರ್ಜಿಯ ತಿದ್ದುಪಡಿ ಮಾಡಲು ಅವಕಾಶ ನೀಡಲಾಗಿದೆ.

ಈ ಬಾರಿ ಇಂಗ್ಲಿಷ್, ಕನ್ನಡ, ಹಿಂದಿ, ಅಸ್ಸಾಮೀಸ್, ಬೆಂಗಾಲಿ, ಗುಜರಾತಿ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಉರ್ದು ಈ 13 ಭಾಷೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ನೀಟ್ ಯುಜಿ ಪ್ರವೇಶ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ntaneet.nic.in ವೆಬ್​ಸೈಟ್​ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಈ ಮೊದಲು ಆಗಸ್ಟ್ 7ಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಬಳಿಕ ಆ ಗಡುವನ್ನು ಆ. 10ಕ್ಕೆ ವಿಸ್ತರಿಸಲಾಗಿತ್ತು.

ಅಭ್ಯರ್ಥಿಗಳು ntaneet.nic.in ವೆಬ್​ಸೈಟ್​ನಲ್ಲಿರುವ ಫಾರ್ಮ್​ನಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ತುಂಬಬೇಕು. ಹಾಗೇ, ನೀಟ್ ಪರೀಕ್ಷೆಯ ಶುಲ್ಕವನ್ನು ಕಟ್ಟಿ, ಅಲ್ಲಿ ಕೇಳಲಾಗಿರುವ ದಾಖಲಾತಿಗಳನ್ನು ಅಪ್​ಲೋಡ್ ಮಾಡಬೇಕು. ಬಳಿಕ ನೀವು ಶುಲ್ಕ ಪಾವತಿಸಿದ ದೃಢೀಕರಣ ಪತ್ರವನ್ನು ಡೌನ್​ಲೋಡ್ ಮಾಡಿಕೊಳ್ಳಿ. ಈ ಬಾರಿ ನೀಟ್ ಪರೀಕ್ಷೆ ಪೇಪರ್ ಮತ್ತು ಪೆನ್​ ಮೋಡ್​ನಲ್ಲಿರಲಿದೆ.

ಎಂಬಿಬಿಎಸ್. ಬಿಡಿಎಸ್, ಬಿಎಎಂಎಸ್, ಬಿಯುಎಂಎಸ್, ಬಿಎಚ್​ಎಂಎಸ್ ಕೋರ್ಸ್​ಗಳ ಪ್ರವೇಶಾತಿಗೆ ನೀಟ್ ಪರೀಕ್ಷೆಯ ಫಲಿತಾಂಶವನ್ನು ಬಳಸಬಹುದು. ಭಾರತದಲ್ಲಿ ಮಾತ್ರವಲ್ಲದೆ ಮಧ್ಯಪ್ರಾಚ್ಯದಲ್ಲಿರುವ ಭಾರತೀಯ ಸಮುದಾಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಈ ಬಾರಿ ಕುವೈತ್​ ಹಾಗೂ ದುಬೈನಲ್ಲಿ ಕೂಡ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಒಟ್ಟು 198 ಕೇಂದ್ರಗಳಲ್ಲಿ ಈ ಬಾರಿ ನೀಟ್ ಪರೀಕ್ಷೆಗಳು ನಡೆಯಲಿದೆ. ಬಿಎಸ್​ಸಿ ನರ್ಸಿಂಗ್ ಕೋರ್ಸ್​ಗಳಿಗೆ ನೀಟ್ ಪರೀಕ್ಷೆಯ ಮೂಲಕ ಸೇರಲಿಚ್ಛಿಸುವ ಅಭ್ಯರ್ಥಿಗಳಿಗೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಬಿಎಸ್​ಸಿ ನರ್ಸಿಂಗ್ ಕೋರ್ಸ್​ಗೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಡಿಸೆಂಬರ್ 31ರ ವೇಳೆಗೆ ಕನಿಷ್ಠ 17 ವರ್ಷ ಪೂರ್ತಿಯಾಗಬೇಕು. ದೇಶದ ನಾನಾ ಕಾಲೇಜುಗಳಲ್ಲಿ ಅಥವಾ ಶಿಕ್ಷಣ ಸಂಸ್ಥೆಗಳಲ್ಲಿ ಬಿಎಸ್​ಸಿ ನರ್ಸಿಂಗ್ ಕೋರ್ಸ್​ಗೆ ದಾಖಲಾತಿ ಪಡೆಯುವ ವಿದ್ಯಾರ್ಥಿಗಳು ಆ ಕಾಲೇಜು/ ವಿಶ್ವವಿದ್ಯಾಲಯ/ ಶಿಕ್ಷಣ ಸಂಸ್ಥೆಗಳಲ್ಲಿನ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿಕೊಳ್ಳಬೇಕು. ಬಿಎಸ್​ಸಿ ನರ್ಸಿಂಗ್​ಗೆ ಸೇರಲಿಚ್ಛಿಸುವ ಅಭ್ಯರ್ಥಿಗಳು ಪಿಸಿಬಿ (ಫಿಸಿಕ್ಸ್, ಕೆಮಿಸ್ಟ್ರಿ, ಬಯಾಲಜಿ) ಹಾಗೂ ಇಂಗ್ಲಿಷ್​ನಲ್ಲಿ ಶೇ. 45 ಅಂಕಗಳನ್ನಾದರೂ ಪಡೆದಿರಬೇಕು. ಪಿಯುಸಿಯಲ್ಲಿ ಪಿಸಿಬಿ ಕಾಂಬಿನೇಷನ್ ಪಡೆದಿರಬೇಕು ಎಂದು ಶೈಕ್ಷಣಿಕ ಅರ್ಹತೆಯ ಬಗ್ಗೆ ಎನ್​ಟಿಎ ತಿಳಿಸಿದೆ.

ಹಾಗೇ, ಎಸ್​ಸಿ/ ಎಸ್​ಟಿ ಅಥವಾ ಒಬಿಸಿ ಸಮುದಾಯಕ್ಕೆ ಸೇರಿರುವ ಅಭ್ಯರ್ಥಿಗಳು ಪಿಯುಸಿಯಲ್ಲಿ ಪಿಸಿಬಿ ಕಾಂಬಿನೇಷನ್ ಪಡೆದು ಶೇ. 40ರಷ್ಟು ಅಂಕವನ್ನು ಗಳಿಸಿರಬೇಕು. ಜನರಲ್ ಕೆಟಗರಿಯವರಾದರೆ ಶೇ. 45ರಷ್ಟು ಅಂಕ ಪಡೆದಿರಬೇಕು. ಹಾಗೇ. ದಿವ್ಯಾಂಗರಿಗೆ ಶೇ. 3ರಷ್ಟು ಮೀಸಲಾತಿ ನೀಡಲಾಗುವುದು. ಅವರಿಗೂ ಶೈಕ್ಷಣಿಕ ಅರ್ಹತೆ ಹಾಗೂ ವಯಸ್ಸಿನ ನಿಯಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಎನ್​ಟಿಎ ಮಾಹಿತಿ ನೀಡಿದೆ.

ಇದನ್ನೂ ಓದಿ: NEET 2021: ನೀಟ್ ಮೂಲಕ BSc ನರ್ಸಿಂಗ್ ಕೋರ್ಸ್​ ಸೇರಲಿಚ್ಛಿಸುವವರ ವಯಸ್ಸು, ಅರ್ಹತೆಯ ಮಾಹಿತಿ ಹೀಗಿದೆ

SSLC Results 2021: ವಿದ್ಯಾರ್ಥಿಗಳೇ, ನಿಮ್ಮ ಎಲ್​ಎಸ್​ಎಲ್​ಸಿ ಫಲಿತಾಂಶ ಇನ್ನೂ ಲಭ್ಯವಾಗಿಲ್ಲವೇ? ಹಾಗಾದರೆ ಹೀಗೆ ಮಾಡಿ

(NEET 2021 Registration Last Day to Apply NTA NEET Entrance Exam is Today Direct Website Link is here

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್