NEET 2021 Results: ನೀಟ್ ಫಲಿತಾಂಶ ಪ್ರಕಟಿಸಲು ಸುಪ್ರೀಂ ಕೋರ್ಟ್ ಅನುಮತಿ; ರಿಸಲ್ಟ್ ನೋಡಲು ಹೀಗೆ ಮಾಡಿ

| Updated By: ಸುಷ್ಮಾ ಚಕ್ರೆ

Updated on: Oct 28, 2021 | 2:34 PM

ನವದೆಹಲಿ: ನೀಟ್- ಪದವಿ ಪ್ರವೇಶ ಪರೀಕ್ಷೆಯ ಫಲಿತಾಂಶ ಘೋಷಣೆಗೆ ಸುಪ್ರೀಂ ಕೋರ್ಟ್​ ಅನುಮತಿ ನೀಡಿದೆ. 16 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ ಇಬ್ಬರು ಅಭ್ಯರ್ಥಿಗಳು ಮರು ಪರೀಕ್ಷೆ ಕೋರಿ ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಬಾಂಬೆ ಹೈಕೋರ್ಟ್ ಫಲಿತಾಂಶ ಘೋಷಿಸದಂತೆ ತಡೆಯಾಜ್ಞೆ ನೀಡಿತ್ತು. ಆದರೆ, ಬಾಂಬೆ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್ ಕೇವಲ ಇಬ್ಬರಿಗಾಗಿ ನೀಟ್ ಪರೀಕ್ಷೆಯ ಫಲಿತಾಂಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ […]

NEET 2021 Results: ನೀಟ್ ಫಲಿತಾಂಶ ಪ್ರಕಟಿಸಲು ಸುಪ್ರೀಂ ಕೋರ್ಟ್ ಅನುಮತಿ; ರಿಸಲ್ಟ್ ನೋಡಲು ಹೀಗೆ ಮಾಡಿ
ನೀಟ್ ಪರೀಕ್ಷೆ
Follow us on

ನವದೆಹಲಿ: ನೀಟ್- ಪದವಿ ಪ್ರವೇಶ ಪರೀಕ್ಷೆಯ ಫಲಿತಾಂಶ ಘೋಷಣೆಗೆ ಸುಪ್ರೀಂ ಕೋರ್ಟ್​ ಅನುಮತಿ ನೀಡಿದೆ. 16 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ ಇಬ್ಬರು ಅಭ್ಯರ್ಥಿಗಳು ಮರು ಪರೀಕ್ಷೆ ಕೋರಿ ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಬಾಂಬೆ ಹೈಕೋರ್ಟ್ ಫಲಿತಾಂಶ ಘೋಷಿಸದಂತೆ ತಡೆಯಾಜ್ಞೆ ನೀಡಿತ್ತು. ಆದರೆ, ಬಾಂಬೆ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್ ಕೇವಲ ಇಬ್ಬರಿಗಾಗಿ ನೀಟ್ ಪರೀಕ್ಷೆಯ ಫಲಿತಾಂಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ 2021ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶ ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್, ಸಂಜೀವ್ ಖನ್ನಾ ಮತ್ತು ಬಿಆರ್ ಗವಾಯಿ ಅವರನ್ನೊಳಗೊಂಡ ಸುಪ್ರೀಂ ಪೀಠ ಇಂದು ಈ ಆದೇಶ ನೀಡಿದೆ.

ಮಹಾರಾಷ್ಟ್ರದ ಇಬ್ಬರು ಪರೀಕ್ಷಾರ್ಥಿಗಳಾದ ವೈಶಾನವಿ ಭೋಪಾಲಿ ಮತ್ತು ಅಭಿಷೇಕ್ ಶಿವಾಜಿ ಮರು ಪರೀಕ್ಷೆ ನಡೆಸುವಂತೆ ಅರ್ಜಿ ಸಲ್ಲಿಸಿದ್ದರು. ಆ ಇಬ್ಬರು ವಿದ್ಯಾರ್ಥಿಗಳ ಬಗ್ಗೆ ದೀಪಾವಳಿ ರಜೆಯ ನಂತರ ತೀರ್ಮಾನಿಸಲಾಗುವುದು. ಈ ಕುರಿತು ಸಂಬಂಧಿಸಿದವರಿಗೆ ಪ್ರತಿಕ್ರಿಯಿಸಲು ನೋಟಿಸ್‌ ಜಾರಿ ಮಾಡುತ್ತೇವೆ. ಆದರೆ, ಆ ಇಬ್ಬರಿಗಾಗಿ ನಾವು 16 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆ ಹಿಡಿಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಹಿನ್ನೆಲೆಯಲ್ಲಿ NEET ಫಲಿತಾಂಶ 2021 ಶೀಘ್ರದಲ್ಲೇ ಪ್ರಕಟವಾಗುವ ನಿರೀಕ್ಷೆಯಿದೆ. ಸೆಪ್ಟೆಂಬರ್ 12ರಂದು ನೀಟ್ ಪರೀಕ್ಷೆ ನಡೆದಿದ್ದು, ಸುಮಾರು 16 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. NEET ಫಲಿತಾಂಶವು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (NTA) ವೆಬ್‌ಸೈಟ್‌ನಲ್ಲಿ nta.ac.in ಮತ್ತು NEET 2021 ಪೋರ್ಟಲ್ ಆಗಿರುವ neet.nta.nic.in ಯಲ್ಲಿ ಲಭ್ಯವಿರುತ್ತದೆ. ಸೆಪ್ಟೆಂಬರ್‌ನಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು, NEET ಫಲಿತಾಂಶವನ್ನು ಪರಿಶೀಲಿಸಬಹುದು. ಫಲಿತಾಂಶ ಪ್ರಕಟವಾದ ನಂತರ ರಿಜಿಸ್ಟರ್ ನಂಬರ್ ಹಾಕಿ ಅಂಕಗಳನ್ನು ಪರಿಶೀಲಿಸಿಕೊಳ್ಳಬಹುದು.

ನೀಟ್ ಫಲಿತಾಂಶವನ್ನು ಡೌನ್‌ಲೋಡ್ ಮಾಡುವುದು ಹೇಗೆ?:

– ನೀಟ್ ಪರೀಕ್ಷೆ ಪರೀಕ್ಷಿಸಲು ಎನ್​ಟಿಎಯ ಅಧಿಕೃತ ವೆಬ್‌ಸೈಟ್ ntaneet.nic.in ಗೆ ಭೇಟಿ ನೀಡಿ.
– ವೆಬ್​ಸೈಟ್​ನ ಹೋಂ ಪೇಜ್​ನಲ್ಲಿ NEET ಫಲಿತಾಂಶದ ಲಿಂಕ್ ಅನ್ನು ಕ್ಲಿಕ್ ಮಾಡಿ.
– ನಿಮ್ಮ ರಿಜಿಸ್ಟರ್ ಸಂಖ್ಯೆ ಮುಂತಾದ ವಿವರಗಳನ್ನು ನಮೂದಿಸಿ, ಲಾಗಿನ್ ಮಾಡಿ.
– ಆಗ ನಿಮ್ಮ ಫಲಿತಾಂಶ ಸ್ಕ್ರೀನ್ ಮೇಲೆ ಗೋಚರಿಸುತ್ತದೆ.
– ಅದನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಇದನ್ನೂ ಓದಿ: NEET-PG Counselling: ನೀಟ್ ಪಿಜಿ ಕೌನ್ಸೆಲಿಂಗ್​ಗೆ ತಡೆ ನೀಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

NEET UG 2021: ಪರೀಕ್ಷೆ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Published On - 2:33 pm, Thu, 28 October 21