AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET 2023 ಕೌನ್ಸೆಲಿಂಗ್: ವೈದ್ಯಕೀಯ ಆಕಾಂಕ್ಷಿಗಳು ತಿಳಿದಿರಬೇಕಾದ ಅಪ್ಡೇಟ್​ಗಳು

NEET 2023 ಫಲಿತಾಂಶಗಳನ್ನು ಜೂನ್ 13 ರಂದು ಪ್ರಕಟಿಸಲಾಗಿದೆ, ಅಭ್ಯರ್ಥಿಗಳು ಕೌನ್ಸೆಲಿಂಗ್ ಪ್ರಕ್ರಿಯೆಯು ಪ್ರಾರಂಭವಾಗಲು ಕುತೂಹಲದಿಂದ ಕಾಯುತ್ತಿದ್ದಾರೆ.

NEET 2023 ಕೌನ್ಸೆಲಿಂಗ್: ವೈದ್ಯಕೀಯ ಆಕಾಂಕ್ಷಿಗಳು ತಿಳಿದಿರಬೇಕಾದ ಅಪ್ಡೇಟ್​ಗಳು
ಸಾಂದರ್ಭಿಕ ಚಿತ್ರ
ನಯನಾ ಎಸ್​ಪಿ
|

Updated on: Jul 14, 2023 | 12:15 PM

Share

NEET 2023 ಫಲಿತಾಂಶಗಳನ್ನು ಜೂನ್ 13 ರಂದು ಪ್ರಕಟಿಸಲಾಗಿದೆ, ಅಭ್ಯರ್ಥಿಗಳು ಕೌನ್ಸೆಲಿಂಗ್ ಪ್ರಕ್ರಿಯೆಯು ಪ್ರಾರಂಭವಾಗಲು ಕುತೂಹಲದಿಂದ ಕಾಯುತ್ತಿದ್ದಾರೆ. ಮೆಡಿಕಲ್ ಕೌನ್ಸಿಲ್ ಸಮಿತಿ (ಎಂಸಿಸಿ) ಶೀಘ್ರದಲ್ಲೇ 15 ಪ್ರತಿಶತ ಅಖಿಲ ಭಾರತ ಕೋಟಾ ಸೀಟುಗಳಿಗೆ NEET ಯುಜಿ ಕೌನ್ಸೆಲಿಂಗ್ ಅನ್ನು ನಡೆಸುತ್ತದೆ. ಆದಾಗ್ಯೂ, ಉಳಿದ 85 ಪ್ರತಿಶತ ಸೀಟುಗಳ ಪ್ರವೇಶವನ್ನು ಆಯಾ ರಾಜ್ಯ ಕೌನ್ಸೆಲಿಂಗ್ ಅಧಿಕಾರಿಗಳು ನಿರ್ವಹಿಸುತ್ತಾರೆ ಎಂಬುದು ಗಮನಿಸಬೇಕಾದ ಅಂಶವಾಗಿದೆ.

NEET ಕೌನ್ಸೆಲಿಂಗ್, ಅರ್ಹತೆ, ಸೀಟ್ ಮ್ಯಾಟ್ರಿಕ್ಸ್ ಮತ್ತು ಹೆಚ್ಚಿನವುಗಳಿಗೆ ಸಂಬಂಧಿಸಿದಂತೆ ಪದೇ ಪದೇ ಕೇಳಲಾಗುವ ಕೆಲವು ಪ್ರಶ್ನೆಗಳು (FAQs) ಇಲ್ಲಿವೆ. ಮೊದಲನೆಯದಾಗಿ, NEET 2023 ಕೌನ್ಸೆಲಿಂಗ್ ಇನ್ನೂ ಪ್ರಾರಂಭವಾಗಿಲ್ಲ ಮತ್ತು ಸಂಪೂರ್ಣ ವೇಳಾಪಟ್ಟಿ ಮತ್ತು ದಿನಾಂಕಗಳನ್ನು MCC ಯಿಂದ ಸರಿಯಾದ ಸಮಯದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಕನಿಷ್ಠ ಕಟ್ಆಫ್ ಅಂಕಗಳನ್ನು ಗಳಿಸಿದ ಅರ್ಹ ಅಭ್ಯರ್ಥಿಗಳು NEET 2023 AIQ ಕೌನ್ಸೆಲಿಂಗ್ ಮತ್ತು ರಾಜ್ಯ ಮಟ್ಟದ NEET 2023 ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಬಹುದು.

ಭಾರತದಾದ್ಯಂತ ಲಭ್ಯವಿರುವ MBBS ಸೀಟುಗಳ ಪ್ರಕಾರ, 1,04,333 ಸೀಟುಗಳೊಂದಿಗೆ ಒಟ್ಟು 681 MBBS ಕಾಲೇಜುಗಳಿವೆ. ಈ ಪೈಕಿ 54,278 ಸೀಟುಗಳು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಮತ್ತು 50,315 ಸೀಟುಗಳು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿವೆ. ಇತ್ತೀಚಿನ ವರ್ಷಗಳಲ್ಲಿ ಸೀಟುಗಳ ಸಂಖ್ಯೆ ಹೆಚ್ಚಿದ್ದು, 29 ಹೊಸ ಎಂಬಿಬಿಎಸ್ ಕಾಲೇಜುಗಳು ಮತ್ತು ಹೆಚ್ಚುವರಿ 3,550 ಸೀಟುಗಳನ್ನು ಸೇರಿಸಲಾಗಿದೆ.

NEET UG ಅನ್ನು ವಾರ್ಷಿಕವಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಭಾರತದಾದ್ಯಂತ ಎಲ್ಲಾ ವೈದ್ಯಕೀಯ ಸಂಸ್ಥೆಗಳಲ್ಲಿ ಪದವಿಪೂರ್ವ ವೈದ್ಯಕೀಯ ಶಿಕ್ಷಣಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿ ನಡೆಸುತ್ತದೆ. NEET ಕೌನ್ಸೆಲಿಂಗ್ ವೇಳಾಪಟ್ಟಿ ಮತ್ತು ಇತರ ಪ್ರಮುಖ ಅಪ್‌ಡೇಟ್‌ಗಳಿಗಾಗಿ ಅಭ್ಯರ್ಥಿಗಳು ಅಧಿಕೃತ MCC ವೆಬ್‌ಸೈಟ್‌ ಪರಿಶೀಲಿಸಲು ಸಲಹೆ ನೀಡಲಾಗುತ್ತದೆ.

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ