AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET Exam: ಕರ್ನಾಟಕದಲ್ಲಿ ಇಂದು ನೀಟ್ ಪರೀಕ್ಷೆ: ಸರ, ಬಳೆ, ಹೈ ಹಿಲ್ಸ್​ ಚಪ್ಪಲಿ ನಿಷೇಧ!

ದೇಶಾದ್ಯಂತ ಇಂದು ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ನೀಟ್ ಪರೀಕ್ಷೆ ನಡೆಯಲಿದೆ. ಅದೇಷ್ಟೊ ಪೋಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಬೇಕು ಮಕ್ಕಳನ್ನ ಡಾಕ್ಟರ್ ಮಾಡಬೇಕು ಸಮಾಜದಲ್ಲಿ ಮಕ್ಕಳಿಗೆ ಉಜ್ವಲ ಭವಿಷ್ಯ ರೂಪಿಸಬೇಲು ಅಂತಾ ಕನಸ್ಸು ಕಂಡಿರ್ತಾರೆ. ಅದಕ್ಕೆ ಅಂತಾನೇ ಸಾಕಷ್ಟು ವಿದ್ಯಾರ್ಥಿಗಳು ಸಂಪೂರ್ಣ ತಯಾರಿ ನಡೆಸಿ ಇಂದಿನ ಪರೀಕ್ಷೆಗೆ ಸಿದ್ಧರಾಗಿದ್ದಾರೆ.

NEET Exam: ಕರ್ನಾಟಕದಲ್ಲಿ ಇಂದು ನೀಟ್ ಪರೀಕ್ಷೆ: ಸರ, ಬಳೆ, ಹೈ ಹಿಲ್ಸ್​ ಚಪ್ಪಲಿ ನಿಷೇಧ!
ಪ್ರಾತಿನಿಧಿಕ ಚಿತ್ರ
Vinay Kashappanavar
| Edited By: |

Updated on:May 04, 2025 | 7:55 AM

Share

ಬೆಂಗಳೂರು, ಮೇ 04: 2025-26ನೇ ಸಾಲಿನ ವೈದ್ಯಕೀಯ ಪ್ರವೇಶಕ್ಕೆ ಇಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎನ್‌ಟಿಎ ವತಿಯಿಂದ ನೀಟ್ (NEET) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ. ದೇಶದಲ್ಲಿ ಏಕಕಾಲಕ್ಕೆ ನಡೆಯುವ ಈ ಪರೀಕ್ಷೆಗೆ ರಾಜ್ಯದಲ್ಲಿ (Karnataka) 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲ್ಲಿದೆ. ರಾಜ್ಯದ 1.49 ಲಕ್ಷ ವಿದ್ಯಾರ್ಥಿಗಳು ನೀಟ್​ ಪರೀಕ್ಷೆ ಬರೆಯಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.

ಇಂದು ನಡೆಯುವ ನೀಟ್ ಪರೀಕ್ಷೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಒಳಗೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್‌ ಕಾರ್ಡ್ ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳ ಸಹಿತ ಹಾಜರಾಗಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದೆ.

ನೀಟ್ ಪರೀಕ್ಷೆಯ ಮಾರ್ಗಸೂಚಿಗಳು ಏನು?

ಇನ್ನು ನೀಟ್ ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎನ್‌ಟಿಎ ಕೆಲವೊಂದು ವಸ್ತ್ರಸಂಹಿತೆಯನ್ನ ನೀಡಿದೆ. ನಕಲು ತಡೆಯುವ ಉದ್ದೇಶದಿಂದ ಪರೀಕ್ಷಾರ್ಥಿಗಳಿಗೆ ಕೆಲವೊಂದು ವಸ್ತ್ರಸಂಹಿತೆಯನ್ನ ಕಡ್ಡಾಯ ಮಾಡಿದೆ. ಆ ಪ್ರಕಾರ ನೀಟ್ ಪರೀಕ್ಷೆಗೆ ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್, ನತ್ತು, ಹೈ ಹಿಲ್ ಚಪ್ಪಲಿ ನಿಷೇಧವಿದೆ. ಹಾಗೂ ಯಾವುದೇ ಲೋಹದ ಉಪಕರಣ ಧರಿಸಲು ಅವಕಾಶವಿಲ್ಲ. ವಿದ್ಯಾರ್ಥಿಗಳು ಪೂರ್ಣ ತೋಳಿರುವ ಮೇಲಂಗಿ ದೊಡ್ಡ ಬಟನ್ ಗಳಿರುವ ಶರ್ಟ್, ಪ್ಯಾಂಟ್, ಶೂ, ಸಾಕ್ಸ್ ಧರಿಸುವಂತಿಲ್ಲ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರಲು ಅಥವಾ ಧರಿಸಲು ಕೂಡ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.

ಇದನ್ನೂ ಓದಿ
Image
CBSE ಫಲಿತಾಂಶ ಪ್ರಕಟಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ಗುಡ್​​​ ನ್ಯೂಸ್​​​!
Image
ಎಂಸಿಹೆಚ್ ಪರೀಕ್ಷೆಯಲ್ಲಿ ದೇಶಕ್ಕೆ‌ 2ನೇ ಟಾಪರ್ ಆದ ತೇರದಾಳದ ಯುವ ವೈದ್ಯ
Image
NEET UG ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ ಅಪ್ಡೇಟ್ಸ್ ಇಲ್ಲಿದೆ
Image
NEET UG ಪರೀಕ್ಷೆ ಯಾವಾಗ? ನೋಂದಣಿ, ಪರೀಕ್ಷಾ ದಿನಾಂಕ, ಪ್ರವೇಶ ಪತ್ರ

ಇದನ್ನೂ ಓದಿ: ಬಾಗಲಕೋಟೆ: ನೀಟ್ ಸೂಪರ್ ಸ್ಪೆಷಾಲಿಟಿ ಪರೀಕ್ಷೆಯಲ್ಲಿ ದೇಶಕ್ಕೆ‌ 2ನೇ ಟಾಪರ್ ಆದ ತೇರದಾಳದ ಯುವ ವೈದ್ಯ

ಒಟ್ಟಿನಲ್ಲಿ ನೀಟ್ ಪರೀಕ್ಷೆ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಂತ ಪ್ರಮುಖವಾಗಿದ್ದು, ನೀಟ್ ಪರೀಕ್ಷೆಯನ್ನು ಕನ್ನಡ, ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮಲಯಾಳಂ, ಮರಾಠಿ, ಒರಿಯಾ, ತಮಿಳು, ತೆಲುಗು, ಉರ್ದು ಮತ್ತು ಪಂಜಾಬಿ ಸೇರಿದಂತೆ ಬಹುಭಾಷೆಗಳಲ್ಲಿ ದೇಶದ್ಯಾಂತ ನಡೆಸಲಾಗುತ್ತಿದೆ. ಇಂದಿನ ಪರೀಕ್ಷೆಗೆ ಸಾಕಷ್ಟು ಮುನ್ನೆಚ್ಚರಿಕೆ ಕೂಡ ವಹಿಸಲಾಗಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:50 am, Sun, 4 May 25

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್