AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್​ ಪರೀಕ್ಷೆ ಅಕ್ರಮ: ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಕಾನೂನು ಜಾರಿ ಮಾಡಿದ ಕೇಂದ್ರ

law against exam malpractices: ಕೇಂದ್ರ ಸರ್ಕಾರ ಒಂದು ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದೆ. ನೀಟ್​ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಈ ಕ್ರಮವನ್ನು ಜಾರಿಗೆ ತರಲಾಗಿದೆ. ಈ ಹಿಂದೆಯೇ ಇದನ್ನು ಸಂಸತ್​​ನಲ್ಲಿ ಮಂಡನೆ ಮಾಡಿ, ಅಂಗೀಕರ ಮಾಡಲಾಗಿತ್ತು. ಇದೀಗ ಈ ಕಾಯಿದೆಯನ್ನು ಕಾನೂನನಾಗಿ ಜಾರಿ ಮಾಡಲಾಗಿದೆ. ಈ ಕಾನೂನಿನಲ್ಲಿ ಏನೆಲ್ಲಾ ಕ್ರಮಗಳು ಇದೆ. ಯಾವೆಲ್ಲ ಪರೀಕ್ಷೆಗಳಿಗೆ ಈ ಕಾನೂನು ಸೂಕ್ತ ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

ನೀಟ್​ ಪರೀಕ್ಷೆ ಅಕ್ರಮ: ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಕಾನೂನು ಜಾರಿ ಮಾಡಿದ ಕೇಂದ್ರ
ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಕಾನೂನು
ಅಕ್ಷಯ್​ ಪಲ್ಲಮಜಲು​​
|

Updated on:Jun 22, 2024 | 4:15 PM

Share

 ನೀಟ್​​ (National Eligibility cum Entrance Test) ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಈಗಾಗಲೇ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಪರೀಕ್ಷೆಯಲ್ಲಿ ನಡೆದ ಅಕ್ರಮದ ಬಗ್ಗೆ ತನಿಖೆ ನಡೆಯುತ್ತಿದೆ. ಇದರ ಮಧ್ಯೆ ಕೇಂದ್ರ ಸರ್ಕಾರ ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವಾಲಯ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆಯನ್ನು ಜಾರಿಗೆ ತಂದು ಅಧಿಸೂಚನೆ ನೀಡಿದೆ. 2024ಕ್ಕೆ ಅನುಗುಣವಾಗಿ ಈ ಕಾಯಿದೆಯನ್ನು ಜಾರಿ ಮಾಡಲಾಗಿದೆ. ಇದು ದೇಶಾದ್ಯಂತ ನಡೆಯುವ ಸಾರ್ವಜನಿಕ ಪರೀಕ್ಷೆಗಳು ಮತ್ತು ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ನಡೆಯುವ ಅನ್ಯಾಯ ಹಾಗೂ ಅಕ್ರಮವನ್ನು ತಡೆಗಟ್ಟು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

NEET ಮತ್ತು UGC NET ಪರೀಕ್ಷೆ ನಡೆದ ಅಕ್ರಮದ ಆರೋಪದ ಬಗ್ಗೆ ಈಗಾಗಲೇ ಭಾರೀ ಚರ್ಚೆಯಾಗುತ್ತಿದೆ. ಇನ್ನು ಕೆಲವರು ಕೇಂದ್ರ ಸರ್ಕಾರವನ್ನು ಟೀಕೆ ಮಾಡಿದ್ದಾರೆ. ಇದೀಗ ಕೇಂದ್ರ ಇದಕ್ಕೆಲ್ಲ ಉತ್ತರ ನೀಡಬೇಕು ಎಂದು ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ ಜಾರಿಗೆ ತಂದಿದೆ.

2024 ಫೆಬ್ರವರಿಯಲ್ಲಿ ನಡೆದ ಸಂಸತ್​​​​​ ಸಭೆಯಲ್ಲಿ ಈ ಕಾನೂನನ್ನು ಅಂಗೀಕರಿಸಲಾಗಿತ್ತು. ಈ ಮೂಲಕ ಸಾರ್ವಜನಿಕ ಪರೀಕ್ಷೆಗಳು ಮತ್ತು ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಮೋಸ, ಅಕ್ರಮ ನಡೆಸುವವರಿಗೆ ಕನಿಷ್ಠ ಮೂರರಿಂದ ಐದು ವರ್ಷಗಳ ಜೈಲು ಶಿಕ್ಷೆ ನೀಡುವ ಬಗ್ಗೆಯೂ ಈ ಕಾನೂನಿನಲ್ಲಿ ಒಳಗೊಂಡಿತ್ತು. ವಂಚನೆ ಏಜೆಂಟ್​​​​​ಗಳ ಜತೆಗೆ ಕೈಜೋಡಿಸಿರುವವರಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ. ದಂಡ ವಿಧಿಸಲಾಗುವುದು ಎಂದು ಈ ಕಾನೂನಿನಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: ನೀಟ್​ ಪರೀಕ್ಷೆ ಅಕ್ರಮ ಪ್ರಕರಣ, ಕೌನ್ಸೆಲಿಂಗ್ ಮುಂದುವರೆಯುತ್ತೆ ಎಂದ ಸುಪ್ರೀಂ, ಎನ್​ಟಿಎಗೆ ನೋಟಿಸ್​ ಜಾರಿ

ಈ ಕಾನೂನಿನಲ್ಲಿ ಒಬ್ಬ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪು ಪರೀಕ್ಷಾ ಪ್ರಾಧಿಕಾರ, ಸೇವಾ ಪೂರೈಕೆದಾರರು ಅಥವಾ ಯಾವುದೇ ಇತರ ಸಂಸ್ಥೆ ಸೇರಿದಂತೆ ಸಂಘಟಿತ ಅಪರಾಧವನ್ನು ಮಾಡಿದರೆ ಅವರಿಗೆ 5ರಿಂದ 10ವರ್ಷದ ವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಹಾಗೂ 1 ಕೋಟಿ ರೂ. ದಂಡ ವಿಧಿಸಲಾಗುವುದು ಎಂದು ಹೇಳಲಾಗಿದೆ. ತರಬೇತಿ ಏಜೆಂಟ್​​​ ಅಥವಾ ಕೋರ್ಸ್​​​ ಸೆಂಟರ್​ಗಳು ಪೇಪರ್ ಸೋರಿಕೆ ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಆ ಸಂಸ್ಥೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಾನೂನು ನಿಬಂಧನೆಗಳನ್ನು ಹೊಂದಿದೆ ಹಾಗೂ ಪರೀಕ್ಷೆಯ ಪ್ರಮಾಣಾನುಗುಣವಾದ ವೆಚ್ಚವನ್ನು ಸಹ ಅದರಿಂದ ವಸೂಲಿ ಮಾಡಲಾಗುತ್ತದೆ ಎಂದು ಈ ಕಾನೂನಿನಲ್ಲಿ ತಿಳಿಸಲಾಗಿದೆ.

ಈ ಕಾನೂನಿನ ಅಡಿಯಲ್ಲಿ ಯಾವುದೆಲ್ಲ ಅಪರಾಧ

1.ಪ್ರಶ್ನೆ ಪತ್ರಿಕೆಗಳು ಅಥವಾ ಉತ್ತರ ಕೀಗಳನ್ನು ಸೋರಿಕೆ ಮಾಡುವುದು.

2. ಅನಧಿಕೃತ ಸಂವಹನದ ಮೂಲಕ ಅಭ್ಯರ್ಥಿಗಳಿಗೆ ಸಹಾಯ ಮಾಡುವುದು.

3.ಕಂಪ್ಯೂಟರ್ ನೆಟ್‌ವರ್ಕ್‌ಗಳು ಅಥವಾ ಸಂಪನ್ಮೂಲಗಳನ್ನು ತಿದ್ದುವುದು

4. ನಕಲಿ ಪರೀಕ್ಷೆಗಳನ್ನು ನಡೆಸುವುದು ಅಥವಾ ನಕಲಿ ದಾಖಲೆಗಳನ್ನು ನೀಡುವುದು

5. ಅರ್ಹತೆಗಾಗಿ ದಾಖಲೆಗಳನ್ನು ತಿದ್ದುವುದು.

ಈ ಕಾನೂನಿನಡಿ ಬರುವ ಅಪರಾಧಗಳು ಜಾಮೀನು ರಹಿತ, ಹಾಗೂ ಉಪ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಯಲ್ಲಿ ಬರುವ ಯಾವುದೇ ಅಧಿಕಾರಿಯು ಕಾಯಿದೆಯ ಅಡಿಯಲ್ಲಿ ಈ ಅಪರಾಧವನ್ನು ತನಿಖೆ ಮಾಡಬಹುದು. ಇನ್ನು ಈ ಕಾನೂನು ಸ್ಪರ್ಧಾತ್ಮಕ ಪರೀಕ್ಷೆಗಳಾದ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC), ಸ್ಟಾಫ್ ಸೆಲೆಕ್ಷನ್ ಕಮಿಷನ್, ರೈಲ್ವೇಸ್, ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳು ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸುವ ಎಲ್ಲಾ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ಒಳಗೊಂಡಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:00 am, Sat, 22 June 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ