NEET MDS Result 2025: NEET MDS ಫಲಿತಾಂಶ ಪ್ರಕಟ, ಪರಿಶೀಲಿಸುವುದು ಹೇಗೆ?
ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿ (NBEMS) ಮೇ 15 ರಂದು NEET MDS ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ರೋಲ್ ನಂಬರ್ ಮತ್ತು ನೋಂದಣಿ ಸಂಖ್ಯೆಯ ಮೂಲಕ ತಮ್ಮ ಅಂಕಪಟ್ಟಿಯನ್ನು ಪರಿಶೀಲಿಸಬಹುದು. ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳು MDS ಪ್ರವೇಶಕ್ಕಾಗಿ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಿಲಿದ್ದು, ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ವರದಿಯಾಗಿದೆ.

ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿ (NBEMS) ಇಂದು ಮೇ 15 ರಂದು NEET MDS 2025ರ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ natboard.edu.in ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ರೋಲ್ ನಂಬರ್ ಮತ್ತು ನೋಂದಣಿ ಸಂಖ್ಯೆಯ ಮೂಲಕ ಅಂಕಪಟ್ಟಿಯನ್ನು ಪರಿಶೀಲಿಸಬಹುದು. ಒಟ್ಟು 30,435 ಅಭ್ಯರ್ಥಿಗಳು ಯಶಸ್ವಿಯಾಗಿದ್ದು, ಇವರು ಮಾಸ್ಟರ್ ಆಫ್ ಡೆಂಟಲ್ ಕೋರ್ಸ್‌ಗೆ ಪ್ರವೇಶ ಪಡೆಯುತ್ತಾರೆ.
NEET MDS ಫಲಿತಾಂಶ ಪರಿಶೀಲಿಸುವುದು ಹೇಗೆ?
- NBEMS ನ ಅಧಿಕೃತ ವೆಬ್‌ಸೈಟ್ natboard.edu.in ಗೆ ಭೇಟಿ ನೀಡಿ.
- NEET MDS 2025 ಫಲಿತಾಂಶ ಲಿಂಕ್ ಅನ್ನು ಇಲ್ಲಿ ಕ್ಲಿಕ್ ಮಾಡಿ.
- ಈಗ ಸ್ಕ್ರೀನ್ ಮೇಲೆ ಒಂದು PDF ಕಾಣಿಸುತ್ತದೆ. ಈಗ ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನೋಂದಣಿ ಸಂಖ್ಯೆ ಇತ್ಯಾದಿಗಳನ್ನು ನಮೂದಿಸಿ ಮತ್ತು ಸಲ್ಲಿಸಿ.
- ಸ್ಕೋರ್‌ಕಾರ್ಡ್ ಪರದೆಯ ಮೇಲೆ ಕಾಣಿಸುತ್ತದೆ. ಈಗ ಪರಿಶೀಲಿಸಿ ಮತ್ತು ಪ್ರಿಂಟ್ ಕಾಪಿ ತೆಗೆದುಕೊಳ್ಳಿ.
ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳು ಈಗ MDS ಪ್ರವೇಶಕ್ಕಾಗಿ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೆ. ಕೌನ್ಸೆಲಿಂಗ್ ಅನ್ನು ಕೌನ್ಸೆಲಿಂಗ್ ಸಮಿತಿ (MCC) ಆಯೋಜಿಸುತ್ತದೆ. ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಇಂಟರ್ನ್‌ಶಿಪ್ ಪೂರ್ಣಗೊಳಿಸಲು ಕಟ್-ಆಫ್ ದಿನಾಂಕ ಜೂನ್ 30 ಎಂದು ಭಾರತೀಯ ದಂತ ಮಂಡಳಿ ಈ ಹಿಂದೆ ದೃಢಪಡಿಸಿತ್ತು. ಫಲಿತಾಂಶದ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಇದನ್ನೂ ಓದಿ: 65 ನೇ ವಯಸ್ಸಿನಲ್ಲಿ ಮೊಮ್ಮಗನೊಂದಿಗೆ 10 ನೇ ತರಗತಿ ಪರೀಕ್ಷೆ ಬರೆದು ಪಾಸ್ ಆದ ಅಜ್ಜಿ
ದಂತ ಶಸ್ತ್ರಚಿಕಿತ್ಸೆಯ ಸ್ನಾತಕೋತ್ತರ ಕೋರ್ಸ್‌ಗೆ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) ಪ್ರತಿ ವರ್ಷ ರಾಷ್ಟ್ರೀಯ ಮಟ್ಟದಲ್ಲಿ NEET MDS ಪರೀಕ್ಷೆಯನ್ನು ನಡೆಸುತ್ತದೆ. ಪರೀಕ್ಷೆಯಲ್ಲಿ ಕಾಣಿಸಿಕೊಳ್ಳಲು, ಅಭ್ಯರ್ಥಿಯು ಬಿಡಿಎಸ್ ಪದವಿಯನ್ನು ಹೊಂದಿರಬೇಕು.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:48 pm, Thu, 15 May 25