AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET PG Exam 2021: ಸೆಪ್ಟೆಂಬರ್ 11ಕ್ಕೆ ನೀಟ್ ಪರೀಕ್ಷೆ: ಕೇಂದ್ರ ಸಚಿವ ಮನ್​ಸುಖ್ ಮಾಂಡವೀಯ

ಈ ವಿಷಯವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್​ಸುಖ್ ಮಾಂಡವೀಯ ಮಂಗಳವಾರ ಟ್ವೀಟ್ ಮೂಲಕ ತಿಳಿಸಿದ್ದಾರೆ.

NEET PG Exam 2021: ಸೆಪ್ಟೆಂಬರ್ 11ಕ್ಕೆ ನೀಟ್ ಪರೀಕ್ಷೆ: ಕೇಂದ್ರ ಸಚಿವ ಮನ್​ಸುಖ್ ಮಾಂಡವೀಯ
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on:Jul 13, 2021 | 6:50 PM

Share

ದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (National Eligibility-cum-Entrance Test – NEET) ಸೆಪ್ಟೆಂಬರ್ 11ರಂದು ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ವಿಷಯವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್​ಸುಖ್ ಮಾಂಡವೀಯ ಮಂಗಳವಾರ ಟ್ವೀಟ್ ಮೂಲಕ ತಿಳಿಸಿದ್ದಾರೆ. ಕೊವಿಡ್ ಶಿಷ್ಟಾಚಾರಗಳನ್ನು ಅನುಸರಿಸಿಯೇ ಸೆಪ್ಟೆಂಬರ್ 12ರಂದು ನೀಟ್ (ಯುಜಿ) ಪರೀಕ್ಷೆ ನಡೆಯಸಲಾಗುವುದು ಎಂದು ಕೇಂದ್ರ ಸರ್ಕಾರ ನಿನ್ನೆಯಷ್ಟೇ (ಜುಲೈ 12) ಪ್ರಕಟಿಸಿತ್ತು.

ಎನ್​ಟಿಎ ವೆಬ್​ಸೈಟ್ ಮೂಲಕ ಇಂದಿನಿಂದಲೇ (ಜುಲೈ 12) ಅರ್ಜಿ ಸಲ್ಲಿಸಬಹುದಾಗಿದೆ. ಈ ಮೊದಲು ಪರೀಕ್ಷಾ ದಿನಾಂಕವನ್ನು 1ನೇ ಆಗಸ್ಟ್​ಗೆ ನಿಗದಿಪಡಿಸಲಾಗಿತ್ತು. ಸಾಮಾಜಿಕ ಅಂತರ ಪಾಲನೆಯನ್ನು ದೃಢಪಡಿಸುವ ಉದ್ದೇಶದಿಂದಾಗಿ ಈ ವರ್ಷ ಪರೀಕ್ಷಾ ನಡೆಯುವ ನಗರಗಳ ಸಂಖ್ಯೆಯನ್ನು 198ಕ್ಕೆ ಹೆಚ್ಚಿಸಲಾಗಿದೆ. ಈ ಮೊದಲು 155 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿತ್ತು ಎಂದು ಕೇಂದ್ರ ಶಿಕ್ಷಣ ಇಲಾಖೆ ತಿಳಿಸಿದೆ.

ಈ ವರ್ಷ ಒಟ್ಟು 3862 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಹಿಂದೆ 2020 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷಾ ಕೇಂದ್ರ ಪ್ರವೇಸಿಸುವ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿಯೇ ಮಾಸ್ಕ್​ ವಿತರಿಸಲಾಗುವುದು ಎಂದು ಶಿಕ್ಷಣ ಸಚಿವಾಲಯ ಹೇಳಿದೆ.

ಎಲ್ಲ ಅಭ್ಯರ್ಥಿಗಳೂ ಒಮ್ಮೆಲೆ ಪ್ರವೇಶ ಮತ್ತು ನಿರ್ಗಮನ ಇರುವುದಿಲ್ಲ. ಪ್ರವೇಶ-ನಿರ್ಗಮನಕ್ಕೂ ಸಮಯವನ್ನು ಮೊದಲೇ ಸೂಚಿಸಲಾಗುತ್ತದೆ. ಯಾವುದೇ ಸಂಪರ್ಕವಿಲ್ಲದ ನೋಂದಣಿ, ಸ್ಯಾನಿಟೈಸೇಶನ್ ಪ್ರಕ್ರಿಯೆ, ಸಾಮಾಜಿಕ ಅಂತರ ನಿಯಮಗಳಿಗೆ ಅನುಗುಣವಾದ ಸೀಟಿಂಗ್ ವ್ಯವಸ್ಥೆ ಇರುತ್ತದೆ.

ಪರೀಕ್ಷೆಗಳು ಆರಂಭವಾಗುವ ಮೊದಲು ಮತ್ತು ಮುಗಿದ ನಂತರ ಸೀಟುಗಳನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಎಲ್ಲ ಪರೀಕ್ಷಾ ಕೊಠಡಿಗಳಲ್ಲಿ ತೆರೆದ ಕಿಟಕಿಗಳು ಮತ್ತು ಸರಿಯಾದ ಕ್ರಮದಲ್ಲಿ ಗಾಳಿಯ ಪರಿಚಲನೆಗೆ ಅನುವು ಮಾಡಿಕೊಡುವ ಫ್ಯಾನ್​ಗಳ ವ್ಯವಸ್ಥೆಯನ್ನು ಹೊಂದಿರುತ್ತದೆ. ಕೊರೊನಾ ನಿರ್ಬಂಧಗಳ ನಡುವೆಯೂ ಕಳೆದ ವರ್ಷ ಸೆಪ್ಟೆಂಬರ್ 13ರಂದು ನೀಟ್ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 13.66 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 7,71,500 ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿದ್ದರು.

ಕಳೆದ ವರ್ಷದಿಂದ ದೇಶದ ವಿವಿಧೆಡೆಯಿರುವ 13 ಏಮ್ಸ್​ ಮತ್ತು ಪುದುಚೇರಿಯ ಜವಾಹರ್​ಲಾಲ್ ವೈದ್ಯಕೀಯ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರಕ್ಕೂ ನೀಟ್ ಮೂಲಕವೇ ಪ್ರವೇಶ ನೀಡಲಾಗುತ್ತಿದೆ. ನೀಟ್ ಪರೀಕ್ಷೆಯನ್ನು 11 ಭಾಷೆಗಳಲ್ಲಿ ಬರೆಯಲು ಅವಕಾಶವಿದೆ. ಕನ್ನಡ, ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಒಡಿಯಾ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ನೀಟ್ ಪರೀಕ್ಷೆ ಬರೆಯಬಹುದಾಗಿದೆ.

(NEET PG  2021 exam to be conducted on 11th september tweets union minister Mansukh Mandaviya)

ಇದನ್ನೂ ಓದಿ: NEET UG 2021 Registration: ನೀಟ್​ ಪರೀಕ್ಷೆಗೆ ನೋಂದಣಿ ಇಂದಿನಿಂದಲೇ ಪ್ರಾರಂಭ; ಸಿಂಪಲ್​ ಆಗಿ ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ..

ಇದನ್ನೂ ಓದಿ: NEET Exam 2021: ವಿದ್ಯಾರ್ಥಿಗಳೇ ಗಮನಿಸಿ; ನೀಟ್ ಪರೀಕ್ಷೆಯ ದಿನಾಂಕ ಘೋಷಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

Published On - 6:18 pm, Tue, 13 July 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್