NEET PG ಫಲಿತಾಂಶ ಪ್ರಕಟ; ರಿಸಲ್ಟ್ ಪರಿಶೀಲಿಸಲು ಇಲ್ಲಿದೆ ಲಿಂಕ್

ದೇಶಾದ್ಯಂತ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟವಾಗಿದೆ. ಅಭ್ಯರ್ಥಿಗಳು ತಮ್ಮ ಅಂಕಗಳನ್ನು natboard.edu.in ನಲ್ಲಿ ಪರಿಶೀಲಿಸಬಹುದು.ಅಕ್ಟೋಬರ್ 1 ರೊಳಗೆ ಉತ್ತರ ಕೀಲಿ ಬಿಡುಗಡೆಯಾಗಲಿದೆ. ಫಲಿತಾಂಶ ಪರಿಶೀಲಿಸಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಲಾಗಿನ್ ವಿವರಗಳನ್ನು ನಮೂದಿಸಿ.

NEET PG ಫಲಿತಾಂಶ ಪ್ರಕಟ; ರಿಸಲ್ಟ್ ಪರಿಶೀಲಿಸಲು ಇಲ್ಲಿದೆ ಲಿಂಕ್
ನೀಟ್ ಪಿಜಿ ಫಲಿತಾಂಶ ಬಿಡುಗಡೆ

Updated on: Sep 24, 2026 | 3:42 PM

ರಾಷ್ಟ್ರೀಯ ವೈದ್ಯಕೀಯ ವಿಜ್ಞಾನಗಳ ಪರೀಕ್ಷಾ ಮಂಡಳಿಯು (NBEMS) ದೇಶಾದ್ಯಂತ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET PG 2026) ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದ್ದು, ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ತಮ್ಮ ಅಂಕಗಳನ್ನು NBEMS ನ ಅಧಿಕೃತ ವೆಬ್‌ಸೈಟ್‌ಗಳಾದ natboard.edu.in ಮತ್ತು nbe.edu.in ನಲ್ಲಿ ಪರಿಶೀಲಿಸಬಹುದು.

ಅಂಕಗಳ ಪ್ರಕಟಣೆ:

ಈ ಬಾರಿಯ NEET PG ಫಲಿತಾಂಶದಲ್ಲಿ ಒಂದು ಪ್ರಮುಖ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ, NBEMS ಅಭ್ಯರ್ಥಿಗಳ ಕಚ್ಚಾ ಅಂಕಗಳನ್ನು (Raw Marks) ಮತ್ತು ಒಟ್ಟಾರೆ ಶ್ರೇಯಾಂಕಗಳನ್ನು (Ranks) ಫಲಿತಾಂಶದ ಜೊತೆಯಲ್ಲೇ ಬಿಡುಗಡೆ ಮಾಡಿದೆ. ಈ ಕ್ರಮವು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆಯನ್ನು ತರುವ ನಿರೀಕ್ಷೆಯಿದೆ.

ಶೀಘ್ರದಲ್ಲೇ ಉತ್ತರ ಕೀಲಿ ಬಿಡುಗಡೆ:

ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ, ವಿದ್ಯಾರ್ಥಿಗಳು ಉತ್ತರ ಕೀಲಿಗಾಗಿ (Answer Key) ಎದುರು ನೋಡುತ್ತಿದ್ದಾರೆ. NBEMS ಮಾಹಿತಿಯ ಪ್ರಕಾರ, ಪರೀಕ್ಷೆಯ ಅಧಿಕೃತ ಉತ್ತರ ಕೀಲಿಯನ್ನು ಅಕ್ಟೋಬರ್ 1 ರೊಳಗೆ ಪ್ರಕಟಿಸಲಾಗುವುದು. ಉತ್ತರ ಕೀಲಿಯು ಅಭ್ಯರ್ಥಿಗಳಿಗೆ ತಮ್ಮ ಕಾರ್ಯಕ್ಷಮತೆಯನ್ನು ವಿಶ್ಲೇಷಿಸಲು ಮತ್ತು ಅಂಕಗಳ ಲೆಕ್ಕಾಚಾರವನ್ನು ದೃಢೀಕರಿಸಲು ಸಹಾಯ ಮಾಡಲಿದೆ.

ಇದನ್ನೂ ಓದಿ: ಕಾಲೇಜಿನಲ್ಲಿ ರಾತ್ರಿ ಕಾವಲುಗಾರನ ಕೆಲಸ ಮಾಡುತ್ತಲೇ ಓದಿ ಸತತ 3 ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಸಾಧಕ!

ಫಲಿತಾಂಶ ಪರಿಶೀಲಿಸುವುದು ಹೇಗೆ?

ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪಡೆಯಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಲ್ಲಿ ಲಭ್ಯವಿರುವ ‘NEET PG 2026 Result’ ಲಿಂಕ್ ಅನ್ನು ಕ್ಲಿಕ್ ಮಾಡಬೇಕು. ನಂತರ, ತಮ್ಮ ನೋಂದಣಿ ಸಂಖ್ಯೆ ಮತ್ತು ಇತರ ಅಗತ್ಯ ಲಾಗಿನ್ ವಿವರಗಳನ್ನು ನಮೂದಿಸುವ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು. ಭವಿಷ್ಯದ ಪ್ರವೇಶ ಪ್ರಕ್ರಿಯೆಗಳಿಗಾಗಿ ಫಲಿತಾಂಶದ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ಸುರಕ್ಷಿತವಾಗಿ ಇಟ್ಟುಕೊಳ್ಳಲು ಸೂಚಿಸಲಾಗಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us