NEET UG Result 2024 : ನೀಟ್‌ ಮೊದಲ ರ‍್ಯಾಂಕ್​ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್‌

NEET UG result 2024: ನೀಟ್‌ ಯುಜಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌ ಆಗಿ ಹೊರಹೊಮ್ಮಿದ್ದಾರೆ.

NEET UG Result 2024 : ನೀಟ್‌ ಮೊದಲ ರ‍್ಯಾಂಕ್​ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್‌
ಪ್ರಾತಿನಿಧಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Jun 04, 2024 | 9:05 PM

ಬೆಂಗಳೂರು, (ಜೂನ್ 04): ಕಳೆದ ತಿಂಗಳು ಮೇ 5ರಂದು ನಡೆದಿದ್ದ ನೀಟ್‌ ಪರೀಕ್ಷೆಯ (NEET UG 2024) ಫಲಿತಾಂಶ ಜೂ.4ರಂದು ಪ್ರಕಟವಾಗಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ದೇಶದಲ್ಲಿ ಮೊದಲ ರ‍್ಯಾಂಕ್‌ ಪಡೆದ ಟಾಪ್ 100 ವಿದ್ಯಾರ್ಥಿಗಳ ಪೈಕಿ 6 ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆದಿದ್ದಾರೆ.

ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್ ಶ್ರೇಯಸ್ ಜೋಸೆಫ್‌, ಅರ್ಜುನ್ ಕಿಶೋರ್, ಪದ್ಮನಾಭ್ ಮೆನನ್, ಪ್ರಜ್ಞಾ ಪಿ.ಶೆಟ್ಟಿ, ಖುಷಿ ಮಗನೂರ್ ಎಂಬ ವಿದ್ಯಾರ್ಥಿಗಳು ಶೇ.99.98 ಅಂಕಗಳನ್ನು ಗಳಿಸುವ ಮೂಲಕ ಮೊದಲ ರ‍್ಯಾಂಕ್‌ ಪಡೆದಿದ್ದಾರೆ.

ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಉತ್ತರ ಪತ್ರಿಕೆಗಳ ಮರುಪರಿಶೀಲನೆ ಅಥವಾ ಮರುಮೌಲ್ಯಮಾಪನಕ್ಕೆ ಅವಕಾಶವಿಲ್ಲ ಎನ್ನಲಾಗಿದೆ. ಇನ್ನೂ ನೀಟ್‌ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಮೇ 29 ರಂದು ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ಬಳಿಕ ಅಂತಿಮ ಕೀ ಉತ್ತರಗಳನ್ನು ಜೂನ್ 3 ರಂದು ಬಿಡುಗಡೆ ಮಾಡಲಾಗಿತ್ತು. ಈಗಾಗಲೇ ಬಿಡುಗಡೆಯಾಗಿರುವ ಅಂತಿಮ ಕೀ ಉತ್ತರಗಳ ಆಧಾರದ ಮೇಲೆ ನೀಟ್ ಯುಜಿ 2024ರ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ರಿಸಲ್ಟ್ ಚೆಕ್ ಮಾಡುವುದೇಗೆ?

  •  ಅಧಿಕೃತ ವೆಬ್‌ಸೈಟ್‌ exams.nta.ac.in/NEET ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಲಭ್ಯವಿರುವ NEET UG ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಲಾಗಿನ್ ವಿವರಗಳನ್ನು ನಮೂದಿಸಿ ಕ್ಲಿಕ್ ಮಾಡಿ.
  • ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣಬಹುದು.
  • ನಂತರ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಅದನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಅಂದಹಾಗೇ, ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ