ನೀಟ್​ ಪರೀಕ್ಷೆ ಅಕ್ರಮ ಪ್ರಕರಣ, ಕೌನ್ಸೆಲಿಂಗ್ ಮುಂದುವರೆಯುತ್ತೆ ಎಂದ ಸುಪ್ರೀಂ, ಎನ್​ಟಿಎಗೆ ನೋಟಿಸ್​ ಜಾರಿ

ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್​ಟಿಎ)ಗೆ ಸುಪ್ರೀಂಕೋರ್ಟ್​ ನೋಟಿಸ್ ನೀಡಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್​-ಯುಜಿ) ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ವರದಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್​ ನಿಲ್ಲಿಸಲು ನಿರಾಕರಿಸಿದೆ. ವಿದ್ಯಾರ್ಥಿಗಳ ಗ್ರೇಸ್​ ಅಂಕಗಳನ್ನು ನೀಡಲಾಗುತ್ತಿದೆ.

ನೀಟ್​ ಪರೀಕ್ಷೆ ಅಕ್ರಮ ಪ್ರಕರಣ, ಕೌನ್ಸೆಲಿಂಗ್ ಮುಂದುವರೆಯುತ್ತೆ ಎಂದ ಸುಪ್ರೀಂ,  ಎನ್​ಟಿಎಗೆ ನೋಟಿಸ್​ ಜಾರಿ
Follow us
|

Updated on: Jun 11, 2024 | 12:27 PM

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್​-ಯುಜಿ) ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ವರದಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್​ ನಿಲ್ಲಿಸಲು ನಿರಾಕರಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್​ಟಿಎ)ಗೆ ನೋಟಿಸ್ ನೀಡಿದೆ. ವಿದ್ಯಾರ್ಥಿಗಳ ಗ್ರೇಸ್​ ಅಂಕಗಳನ್ನು ನೀಡಲಾಗುತ್ತಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್​ ಹಾಗೂ ನ್ಯಾಯಮೂರ್ತಿ ಎ ಅಮಾನುಲ್ಲಾ ಅವರ ಪೀಠವು ಜುಲೈ 8 ರಂದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣಗಳ ಪಟ್ಟಿ ಮಾಡಿದೆ. ಪರೀಕ್ಷೆಯ ಪಾವಿತ್ರ್ಯತೆಯನ್ನು ಪ್ರಶ್ನಿಸಲಾಗಿದೆ ಅದಕ್ಕೆ ನಮಗೆ ಉತ್ತರಗಳು ಬೇಕು ಎಂದು ಹೇಳಿದರು.

2024ನೇ ಸಾಲಿನ ನೀಟ್​-ಯುಜಿ ಪರೀಕ್ಷೆಯನ್ನು ಹೊಸದಾಗಿ ನಡೆಸಬೇಕು ಎಂದು ಕೋರಿ ಹಲವು ಅಭ್ಯರ್ಥಿಗಳು ಸುಪ್ರೀಂಕೋರ್ಟ್​ಗೆ ಮೊರೆಹೋಗಿದ್ದಾರೆ.

ಮತ್ತಷ್ಟು ಓದಿ: NEET UG Result 2024 : ನೀಟ್‌ ಮೊದಲ ರ‍್ಯಾಂಕ್​ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್‌

2024ನೇ ಸಾಲಿನ ನೀಟ್​ ಪರೀಕ್ಷೆಯು ಕಳೆದ ತಿಂಗಳ 5 ರಂದು ನಡೆದಿತ್ತು, ದೇಶದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಹಾಗೂ ಇತರೆ ಕೋರ್ಸ್​ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಈ ಪರೀಕ್ಷೆಯನ್ನು ನಡೆಸಿತ್ತು.

ಜೂನ್​ 4ರಂದು ಪ್ರಕಟವಾದ ನೀಟ್​ ಫಲಿತಾಂಶದ ಆಧಾರದ ಮೇಲೆ ವಿದ್ಯಾರ್ಥಿಗಳ ಕೌನ್ಸೆಲಿಂಗ್​ಗೆ ತಡೆಯಾಜ್ಞೆ ನೀಡಬೇಕು ಮತ್ತು ಹೊಸದಾಗಿ ನೀಟ್​ ಯುಜಿ ಪರೀಕ್ಷೆಯನ್ನು ನಡೆಸಬೇಕು ಎಂದು ಅರ್ಜಿಗಳು ಒತ್ತಾಯಿಸಿದ್ದವು.

ನೀಟ್​ ಪರೀಕ್ಷೆ ಬರೆದ ಆಂಧ್ರಪ್ರದೇಶ ವಿದ್ಯಾರ್ಥಿಯೊಬ್ಬರು ಅರ್ಜಿ ಸಲ್ಲಿಸಿದ್ದು, ಸಮಯದ ನಷ್ಟದ ಆಧಾರದ ಮೇಲೆ 1536 ವಿದ್ಯಾರ್ಥಿಗಳಿಗೆ ಗ್ರೇಸ್​ ಅಂಕಗಳನ್ನು ನೀಡುವ ಎನ್​ಟಿಎ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು