AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET ಪರೀಕ್ಷೆ ಇನ್ಮುಂದೆ ಆನ್‌ಲೈನ್? ಪೆನ್-ಪೇಪರ್ ಬದಲು CBT ಮಾದರಿಗೆ ಬದಲಾಯಿಸಲು ಕೇಂದ್ರ ಸರ್ಕಾರದ ಸಿದ್ಧತೆ!

ಕೇಂದ್ರ ಶಿಕ್ಷಣ ಸಚಿವಾಲಯವು ನೀಟ್ ಯುಜಿ ಪರೀಕ್ಷೆಯನ್ನು ಪೆನ್-ಮತ್ತು-ಪೇಪರ್​​ನಿಂದ ಆನ್‌ಲೈನ್ ಕಂಪ್ಯೂಟರ್ ಆಧಾರಿತ (CBT) ಮಾದರಿಗೆ ಬದಲಾಯಿಸಲು ಯೋಜನೆ ರೂಪಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಮತ್ತು ಗ್ರಾಮೀಣ, ನಗರ ಪ್ರದೇಶಗಳೆರಡರಲ್ಲೂ ಏಕರೂಪದ ಪರೀಕ್ಷಾ ಸೌಲಭ್ಯ ಒದಗಿಸಲು ಅತ್ಯುನ್ನತ ಗುಣಮಟ್ಟದ ಆನ್‌ಲೈನ್ ಮೂಲಸೌಕರ್ಯ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಮಹತ್ವದ ಬದಲಾವಣೆಯ ಅಂತಿಮ ನಿರ್ಧಾರವು ಉನ್ನತ ಮಟ್ಟದ ಕಾರ್ಯಪಡೆಯ ವರದಿ ನಂತರ ಪ್ರಕಟಗೊಳ್ಳಲಿದೆ.

NEET ಪರೀಕ್ಷೆ ಇನ್ಮುಂದೆ ಆನ್‌ಲೈನ್? ಪೆನ್-ಪೇಪರ್ ಬದಲು CBT ಮಾದರಿಗೆ ಬದಲಾಯಿಸಲು ಕೇಂದ್ರ ಸರ್ಕಾರದ ಸಿದ್ಧತೆ!
ನೀಟ್ ಪರೀಕ್ಷೆ
ಅಕ್ಷತಾ ವರ್ಕಾಡಿ
|

Updated on: Sep 30, 2026 | 3:14 PM

Share

ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ನಡೆಸಲಾಗುವ ‘ನೀಟ್ ಯುಜಿ‘ (NEET-UG) ಪರೀಕ್ಷೆಯನ್ನು ಪೆನ್-ಮತ್ತು-ಪೇಪರ್ (ಆಫ್‌ಲೈನ್) ಮಾದರಿಯಿಂದ ಆನ್‌ಲೈನ್ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT – Computer Based Testing) ಮಾದರಿಗೆ ಬದಲಾಯಿಸಲು ಕೇಂದ್ರ ಶಿಕ್ಷಣ ಸಚಿವಾಲಯ ಕಾರ್ಯಯೋಜನೆ ರೂಪಿಸುತ್ತಿದೆ. ಈ ಉದ್ದೇಶಕ್ಕಾಗಿ ದೇಶಾದ್ಯಂತ ಅತ್ಯುನ್ನತ ಗುಣಮಟ್ಟದ ‘ಪರೀಕ್ಷಾ ಗ್ರೇಡ್ ಆನ್‌ಲೈನ್ ಮೂಲಸೌಕರ್ಯ ತಂತ್ರಜ್ಞಾನ’ವನ್ನು (CBT Infrastructure Strategy) ರೂಪಿಸಲಾಗುತ್ತಿದ್ದು, ಶೀಘ್ರದಲ್ಲೇ ಪ್ರವೇಶ ಪರೀಕ್ಷೆಗಳ ಶೈಲಿಯಲ್ಲಿ ಬೃಹತ್ ಬದಲಾವಣೆ ತರಲು ಸರ್ಕಾರ ಯೋಜನೆ ರೂಪಿಸಿದೆ.

ಆನ್‌ಲೈನ್ ಪರೀಕ್ಷೆಗೆ ರಾಷ್ಟ್ರೀಯ ತಂತ್ರಜ್ಞಾನ ರೂಪಿಸಲು ಕ್ರಮ:

ದೇಶದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ನಡುವಿನ ಪರೀಕ್ಷಾ ಕೇಂದ್ರಗಳ ಕೊರತೆಯನ್ನು ನೀಗಿಸಲು ಮತ್ತು ಎಲ್ಲಾ ಕೇಂದ್ರಗಳಲ್ಲಿ ಒಂದೇ ರೀತಿಯ ಮಾನದಂಡಗಳನ್ನು ಕಾಯ್ದುಕೊಳ್ಳಲು ಆನ್‌ಲೈನ್ ಮೂಲಸೌಕರ್ಯ ರೂಪಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಈಗಾಗಲೇ ಜೆಇಇ ಮೈನ್ (JEE-Main), ಸಿಯುಇಟಿ (CUET-UG/PG), ಯುಜಿಸಿ-ನೆಟ್ (UGC-NET) ನಂತಹ ಪ್ರಮುಖ ಪರೀಕ್ಷೆಗಳನ್ನು ಆನ್‌ಲೈನ್ ಕಂಪ್ಯೂಟರ್ ಆಧಾರಿತ ಮಾದರಿಯಲ್ಲೇ ಯಶಸ್ವಿಯಾಗಿ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ನೀಟ್ ಸೇರಿದಂತೆ ಎಲ್ಲಾ ಪ್ರವೇಶ ಪರೀಕ್ಷೆಗಳನ್ನು ಆನ್‌ಲೈನ್ ಮೋಡ್‌ಗೆ ತರುವ ಗುರಿ ಹೊಂದಲಾಗಿದೆ.

ಗ್ರಾಮೀಣ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತರಕ್ಷಣೆ:

ನೀಟ್ ಪರೀಕ್ಷೆಯನ್ನು ಆನ್‌ಲೈನ್ ಶೈಲಿಗೆ ಬದಲಾಯಿಸುವ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು, ಮಹಿಳಾ ಅಭ್ಯರ್ಥಿಗಳು ಹಾಗೂ ಕನಿಷ್ಠ ಇಂಟರ್ನೆಟ್ ಸಂಪರ್ಕ ಹೊಂದಿರುವ ಜಿಲ್ಲೆಗಳ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದಾಗ್ಯೂ, ಈ ಬದಲಾವಣೆಯ ಅಂತಿಮ ರೂಪುರೇಷೆಗಳು ಪರೀಕ್ಷಾ ಸುಧಾರಣೆಗಳ ಉನ್ನತ ಮಟ್ಟದ ಕಾರ್ಯಪಡೆಯ (High-Level Task Force) ಶಿಫಾರಸುಗಳು ಹಾಗೂ ಆರೋಗ್ಯ ಸಚಿವಾಲಯ ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗದ (NMC) ಅನುಮೋದನೆಯ ನಂತರವೇ ಅಂತಿಮಗೊಳ್ಳಲಿವೆ.

ಇದನ್ನೂ ಓದಿ: ಎಸ್‌ಬಿಐ ನೇಮಕಾತಿ: ವಾರ್ಷಿಕ 97 ಲಕ್ಷ ರೂ.ವರೆಗೆ ವೇತನ; 207 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಬಿಗಿ ಕ್ರಮ:

ಈ ಹಿಂದೆ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಘಟನೆಯು ದೇಶಾದ್ಯಂತ ಭಾರಿ ಸದ್ದು ಮಾಡಿತ್ತು ಮತ್ತು ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು. ಘಟನೆಯ ನೈತಿಕ ಹೊಣೆ ಹೊತ್ತು ಆಗಿನ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಡೀ ಪರೀಕ್ಷಾ ವ್ಯವಸ್ಥೆಯನ್ನು ಸೋರಿಕೆ ರಹಿತವಾಗಿಸಲು ಹಾಗೂ ಆಧುನಿಕಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಕಾರ್ಯಪಡೆಯನ್ನು ರಚಿಸಿದ್ದರು.

ಮುಂದಿನ ಹಂತ ಮತ್ತು ಅಂತಿಮ ನಿರ್ಧಾರ:

ಸದ್ಯ ನಂದನ್ ನಿಲೇಕಣಿ ನೇತೃತ್ವದ ಸಮಿತಿಯು ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಯನ್ನು ಸಮಗ್ರವಾಗಿ ಪರಿಶೀಲಿಸುತ್ತಿದ್ದು, ಅವರ ವರದಿ ಬಂದ ನಂತರವೇ ನೀಟ್ ಆನ್‌ಲೈನ್ ಪರೀಕ್ಷೆಯ ದಿನಾಂಕ ಮತ್ತು ಜಾರಿಯ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ