AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಸಿಬಿಐನಿಂದ ಮಹತ್ವದ ಸಾಕ್ಷಿ ಪತ್ತೆ

ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಹೊಸ ಕೊಂಡಿ ಪತ್ತೆಯಾಗಿದೆ. ಸಿಬಿಐ ಕಾರ್ಯಾಚರಣೆ ನಡೆಸಿ ಪ್ರಮುಖ ಶಂಕಿತನನ್ನು ಬಂಧಿಸಿದೆ. ಈತನ ಹಿಂದೆ ದೊಡ್ಡ ಶಿಕ್ಷಣ ಮಾಫಿಯಾ ಇರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ತೀವ್ರಗೊಂಡಿದೆ. ಮೊಬೈಲ್ ದತ್ತಾಂಶಗಳ ಮೂಲಕ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಈ ಹಗರಣದಲ್ಲಿ ಇನ್ನೂ ದೊಡ್ಡ ವ್ಯಕ್ತಿಗಳು ಸಿಲುಕುವ ಸಾಧ್ಯತೆ ಇದೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಸಿಬಿಐನಿಂದ ಮಹತ್ವದ ಸಾಕ್ಷಿ ಪತ್ತೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: May 12, 2026 | 3:18 PM

Share

ದೆಹಲಿ, ಮೇ.12: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಈಗ ಮಹಾರಾಷ್ಟ್ರದ ನಾಸಿಕ್ ನಗರದ ಲಿಂಕ್ ಇರುವುದು ಪತ್ತೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ (CBI) ಅಧಿಕಾರಿಗಳು ನಾಸಿಕ್‌ನಲ್ಲಿ ಕಾರ್ಯಾಚರಣೆ ನಡೆಸಿ ಓರ್ವ ಪ್ರಮುಖ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ.

ರಾಜಸ್ಥಾನ ಮತ್ತು ಬಿಹಾರದಲ್ಲಿ ಈ ಹಿಂದೆ ನಡೆದಿದ್ದ ಬಂಧನಗಳ ಬೆನ್ನಲ್ಲೇ, ತನಿಖಾ ಸಂಸ್ಥೆಗಳಿಗೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಈ ದಂಧೆಯ ಕೊಂಡಿಗಳು ಇರುವುದು ಸಾಬೀತಾಗಿದೆ. ವಶಕ್ಕೆ ಪಡೆದ ಶಂಕಿತ ವ್ಯಕ್ತಿಯು ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ತಲುಪಿಸುವಲ್ಲಿ ಅಥವಾ ಹಣಕಾಸಿನ ವ್ಯವಹಾರ ಕುದುರಿಸುವಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು!

ನಾಸಿಕ್‌ನಲ್ಲಿ ವಶಕ್ಕೆ ಪಡೆದ ವ್ಯಕ್ತಿಯನ್ನು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಈತನ ಹಿಂದೆ ದೊಡ್ಡ ಶಿಕ್ಷಣ ಮಾಫಿಯಾ ಇರುವ ಶಂಕೆ ವ್ಯಕ್ತವಾಗಿದೆ. ಮೇ 3ರಂದು ನಡೆದಿದ್ದ ಪರೀಕ್ಷೆಯ ಪತ್ರಿಕೆಯು ಕೇವಲ ಒಂದು ರಾಜ್ಯಕ್ಕೆ ಸೀಮಿತವಾಗದೆ, ನಾಸಿಕ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಹಂಚಿಕೆಯಾಗಿರುವ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಶಂಕಿತನ ಮೊಬೈಲ್ ಮತ್ತು ಲಾಪ್ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಾಟ್ಸಾಪ್ ಸಂದೇಶಗಳ ಮೂಲಕ ಪತ್ರಿಕೆ ಸೋರಿಕೆಯಾಗಿರುವ ದತ್ತಾಂಶಗಳನ್ನು ಸಿಬಿಐ ಸಂಗ್ರಹಿಸುತ್ತಿದೆ. ಈಗಾಗಲೇ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಈ ಹೊಸ ನಂಟಿನಿಂದಾಗಿ ಇನ್ನಷ್ಟು ದೊಡ್ಡ ವ್ಯಕ್ತಿಗಳು ಸಿಬಿಐ ಬಲೆಗೆ ಬೀಳುವ ಸಾಧ್ಯತೆಯಿದೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ