New Academic Year; 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ ವಿಳಂಬ?

ನಾಳೆಯಿಂದಲೇ ಶೈಕ್ಷಣಿಕೆ ವರ್ಷ ಆರಂಭವಾಗಬೇಕಿತ್ತು. ಆದರೆ ರಾಜ್ಯದಲ್ಲಿ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಅದು ಕಷ್ಟಸಾಧ್ಯವಾಗುತ್ತಿದೆ. ನಾಳೆಯಿಂದ ಶಾಲೆಗೆ ಹಾಜರಾಗಲು ಶಿಕ್ಷಕರಿಗೆ ಹಾಗೂ ಶಾಲೆಯ ಪೂರ್ವ ಚಟುವಟಿಕೆ ತಯಾರಿಗೆ ಕರ್ತವ್ಯಕ್ಕೆ ಹಾಜರಾಗಲು ಇಲಾಖೆ ಈ ಹಿಂದೆಯೇ ಆದೇಶ ಹೊರಡಿಸಿದೆ. ಆದರೆ ರಾಜ್ಯದಲ್ಲಿ ಸಂಪೂರ್ಣ ಅನ್ಲಾಕ್ ಘೋಷಣೆಯಾಗಿಲ್ಲ. ಶಿಕ್ಷಕರು ಶಾಲೆಗಳಿಗೆ ಹೋಗುವುದಕ್ಕೆ ಬಸ್ ಸೌಲಭ್ಯವಿಲ್ಲ.

New Academic Year; 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ ವಿಳಂಬ?
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಮಹಾಮಾರಿ ಕೊರೊನಾದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾದಂತಿದೆ. ಕಳೆದ ಎರಡು ವರ್ಷಗಳಿಂದ ಶಾಲೆ-ಕಾಲೇಜುಗಳ ಬಾಗಿಲು ತೆರೆದೇ ಇಲ್ಲ. ಇನ್ನು ಜೂನ್ 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಬೇಕಿತ್ತು. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ಈ ವರ್ಷ ಹೊಸ ಶೈಕ್ಷಣಿಕ ವರ್ಷ ಆರಂಭವಾಗುವುದು ಸಂಶಯವಾಗಿದೆ. ಕೆಲ ದಿನಗಳ ಹಿಂದೆ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಮಾರ್ಗಸೂಚಿಯನ್ನು ಶಿಕ್ಷಣ ಇಲಾಖೆ ಬಿಡುಗಡೆಗೊಳಿಸಿತ್ತು. 2021ರ ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಶಾಲಾ ಪ್ರವೇಶ, ದಾಖಲಾತಿ, ಆಂದೋಲನ, ಶಾಲಾ ಹಂತದ ವಾರ್ಷಿಕ ಕ್ರಿಯಾ ಯೋಜನೆಗೆ ಪೂರ್ವ ಸಿದ್ಧತೆಗೆ ಸೂಚನೆ ನೀಡಲಾಗಿತ್ತು. ಕೊರೊನಾ ಸಂದರ್ಭ ನೋಡಿಕೊಂಡು ಮುಂದಿನ ದಿನಗಳಲ್ಲಿ ಆಫ್‌ಲೈನ್ ಅಥವಾ ಆನ್‌ಲೈನ್ ತರಗತಿ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ ಕೈಗೊಳ್ಳಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿತ್ತು. ಆದರೆ ಈಗ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ ವಿಳಂಬವಾಗಲಿದೆ.?

ನಾಳೆಯಿಂದಲೇ ಶೈಕ್ಷಣಿಕೆ ವರ್ಷ ಆರಂಭವಾಗಬೇಕಿತ್ತು. ಆದರೆ ರಾಜ್ಯದಲ್ಲಿ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಅದು ಕಷ್ಟಸಾಧ್ಯವಾಗುತ್ತಿದೆ. ನಾಳೆಯಿಂದ ಶಾಲೆಗೆ ಹಾಜರಾಗಲು ಶಿಕ್ಷಕರಿಗೆ ಹಾಗೂ ಶಾಲೆಯ ಪೂರ್ವ ಚಟುವಟಿಕೆ ತಯಾರಿಗೆ ಕರ್ತವ್ಯಕ್ಕೆ ಹಾಜರಾಗಲು ಇಲಾಖೆ ಈ ಹಿಂದೆಯೇ ಆದೇಶ ಹೊರಡಿಸಿದೆ. ಆದರೆ ರಾಜ್ಯದಲ್ಲಿ ಸಂಪೂರ್ಣ ಅನ್ಲಾಕ್ ಘೋಷಣೆಯಾಗಿಲ್ಲ. ಶಿಕ್ಷಕರು ಶಾಲೆಗಳಿಗೆ ಹೋಗುವುದಕ್ಕೆ ಬಸ್ ಸೌಲಭ್ಯವಿಲ್ಲ. ಮಕ್ಕಳು ಕೂಡ ಶಾಲೆಗೆ ಹಾಜರಾಗುವುದಕ್ಕೆ ಸಮಸ್ಯೆ ಉಂಟಾಗಿದೆ. ಹೀಗಾಗಿ ಬಸ್ ಸಂಚಾರ ಆರಂಭವಾಗುವವರೆಗೆ ವರ್ಕ್ ಫ್ರಂ ಹೋಂ ನೀಡಲು ಶಿಕ್ಷಕರ ಸಂಘದಿಂದ ಮನವಿ ಮಾಡಿಕೊಂಡಿದ್ದಾರೆ.

ದಾಖಲಾತಿ ಪ್ರಕ್ರಿಯೆ ದಿನಾಂಕ ಮುಂದೂಡಿಕೆಯಾದರೆ ಶೈಕ್ಷಣಿಕ ವರ್ಷ ಕೂಡ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಜುಲೈ 1ರಿಂದಲೇ ತರಗತಿ ಆರಂಭವಾಗುವುದು ಅನುಮಾನವಾಗಿದೆ. ಈ ಬಗ್ಗೆ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮತ್ತೊಂದು ಆದೇಶ ಹೊರಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: Education Guidelines: ಜುಲೈ 1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ