AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಶಿಕ್ಷಣಕ್ಕೆ ಬಿಗ್ ಬೂಸ್ಟ್: ದೇಶದಲ್ಲಿ 13,186 ಹೊಸ MBBS ಸೀಟ್‌ಗಳಿಗೆ ಅನುಮೋದನೆ; ಕರ್ನಾಟಕಕ್ಕೆ ಸಿಕ್ಕಿತು 1,650 ಸೀಟುಗಳ ಭರ್ಜರಿ ಕೊಡುಗೆ

ಕೇಂದ್ರ ಸರ್ಕಾರವು 2026-27ನೇ ಸಾಲಿಗೆ 13,186 ಹೊಸ ಎಂಬಿಬಿಎಸ್ ಸೀಟುಗಳನ್ನು ಅನುಮೋದಿಸಿದೆ. ಕರ್ನಾಟಕಕ್ಕೆ 1,650 ಸೀಟುಗಳು ಮಂಜೂರಾಗಿ, ರಾಜ್ಯದ ಒಟ್ಟು ಸೀಟುಗಳು 15,745ಕ್ಕೆ ಏರಿವೆ. ಇದರಿಂದ ದೇಶಾದ್ಯಂತ ಒಟ್ಟು ಎಂಬಿಬಿಎಸ್ ಸೀಟುಗಳ ಸಂಖ್ಯೆ 1,40,214ಕ್ಕೇರಿದೆ. ವೈದ್ಯರ ಕೊರತೆ ನೀಗಿಸಿ, ಕೈಗೆಟುಕುವ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣ ಒದಗಿಸಿ ಆರೋಗ್ಯ ವ್ಯವಸ್ಥೆ ಬಲಪಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ವೈದ್ಯಕೀಯ ಶಿಕ್ಷಣಕ್ಕೆ ಬಿಗ್ ಬೂಸ್ಟ್: ದೇಶದಲ್ಲಿ 13,186 ಹೊಸ MBBS ಸೀಟ್‌ಗಳಿಗೆ ಅನುಮೋದನೆ; ಕರ್ನಾಟಕಕ್ಕೆ ಸಿಕ್ಕಿತು 1,650 ಸೀಟುಗಳ ಭರ್ಜರಿ ಕೊಡುಗೆ
ಸಾಂದರ್ಭಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on:Sep 29, 2026 | 5:33 PM

Share

ಮುಖ್ಯಾಂಶಗಳು

  • ಕೇಂದ್ರ ಸರ್ಕಾರ ದೊಡ್ಡ ಮಟ್ಟದ ಹೆಜ್ಜೆ
  • 2026-27ನೇ ಶೈಕ್ಷಣಿಕ ಸಾಲಿಗೆ ದೇಶಾದ್ಯಂತ ಎಂ.ಬಿ.ಬಿ.ಎಸ್ ಸೀಟುಗಳಿಗೆ ಅನುಮೋದನೆ
  • ಕರ್ನಾಟಕದಲ್ಲಿ ಹೊಸದಾಗಿ 1,650 ಸೀಟುಗಳು ಮಂಜೂರಾಗಿದ್ದು

ಬೆಂಗಳೂರು, ಸೆ.29: ದೇಶದಲ್ಲಿ ವೈದ್ಯಕೀಯ ಶಿಕ್ಷಣವನ್ನು ಮತ್ತಷ್ಟು ವಿಸ್ತರಿಸಲು ಮತ್ತು ಆರೋಗ್ಯ ಕ್ಷೇತ್ರದಲ್ಲಿ ವೈದ್ಯರ ಅಭಾವವನ್ನು ನೀಗಿಸಲು ಕೇಂದ್ರ ಸರ್ಕಾರ ದೊಡ್ಡ ಮಟ್ಟದ ಹೆಜ್ಜೆ ಇಟ್ಟಿದೆ. 2026-27ನೇ ಶೈಕ್ಷಣಿಕ ಸಾಲಿಗೆ ದೇಶಾದ್ಯಂತ ಒಟ್ಟು 13,186 ಹೊಸ ಎಂ.ಬಿ.ಬಿ.ಎಸ್ (MBBS) ಸೀಟುಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಲ್ಲಿ ಕರ್ನಾಟಕ ರಾಜ್ಯ ಒಂದಕ್ಕೇ 1,650 ಹೊಸ ಸೀಟುಗಳು ಮಂಜೂರಾಗಿವೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ವೈದ್ಯಕೀಯ ಶಿಕ್ಷಣ ಕ್ಷೇತ್ರ ಹೊಸ ಎತ್ತರಕ್ಕೆ ಬೆಳೆಯುತ್ತಿದೆ ಎಂದು ತಿಳಿಸಿದ್ದಾರೆ.

ನೂತನ 13,186 ಸೀಟುಗಳ ಸೇರ್ಪಡೆಯೊಂದಿಗೆ ದೇಶಾದ್ಯಂತ ಒಟ್ಟು ಎಂ.ಬಿ.ಬಿ.ಎಸ್ ಸೀಟುಗಳ ಸಂಖ್ಯೆ 1,40,214ಕ್ಕೆ ಏರಿಕೆಯಾಗಿದೆ. ದೇಶದಾದ್ಯಂತ ಇರುವ ಒಟ್ಟು 836 ಮೆಡಿಕಲ್ ಕಾಲೇಜುಗಳಲ್ಲಿ ಈ 1.40 ಲಕ್ಷಕ್ಕೂ ಅಧಿಕ ಸೀಟುಗಳು ಲಭ್ಯವಿರಲಿವೆ. ಕರ್ನಾಟಕದಲ್ಲಿ ಹೊಸದಾಗಿ 1,650 ಸೀಟುಗಳು ಮಂಜೂರಾಗಿದ್ದು, ರಾಜ್ಯದ ಒಟ್ಟು ಎಂ.ಬಿ.ಬಿ.ಎಸ್ ಸೀಟುಗಳ ಸಂಖ್ಯೆ 15,745ಕ್ಕೆ ಜಿಗಿದಿದೆ.

ಪ್ರತಿವರ್ಷ ಲಕ್ಷಾಂತರ ವಿದ್ಯಾರ್ಥಿಗಳು ನೀಟ್ (NEET) ಪರೀಕ್ಷೆ ಬರೆಯುತ್ತಿದ್ದು, ಸೀಟುಗಳ ಕೊರತೆಯಿಂದ ವಿದೇಶಗಳಿಗೆ ತೆರಳುತ್ತಿದ್ದರು. ಈ ನಿರ್ಧಾರದಿಂದ ದೇಶದಲ್ಲೇ ಕೈಗೆಟುಕುವ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಯುವಜನತೆಗೆ ಹೆಚ್ಚಿನ ಅವಕಾಶ ಸಿಗಲಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವೈದ್ಯರ ಲಭ್ಯತೆಯನ್ನು ಹೆಚ್ಚಿಸುವ ಮೂಲಕ ಬಲಿಷ್ಠ ಮತ್ತು ಸುಸಜ್ಜಿತ ಆರೋಗ್ಯ ವ್ಯವಸ್ಥೆಯನ್ನು ನಿರ್ಮಿಸುವುದು ಕೇಂದ್ರ ಸರ್ಕಾರದ ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ: ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಯ್ದುಕೊಳ್ಳಲು ಮೋದಿ ಸರ್ಕಾರ ಬದ್ಧ ಎಂದ ಪ್ರಲ್ಹಾದ್ ಜೋಶಿ: ಸಮಸ್ಯೆಗಳ ಬಗ್ಗೆ ಚರ್ಚೆಗೆ ಆಹ್ವಾನ

ವೈದ್ಯಕೀಯ ಶಿಕ್ಷಣದ ಹಬ್ ಆಗಿರುವ ಕರ್ನಾಟಕಕ್ಕೆ 1,650 ಹೊಸ ಸೀಟುಗಳು ಸಿಕ್ಕಿರುವುದು ರಾಜ್ಯದ ವಿದ್ಯಾರ್ಥಿಗಳಿಗೆ ಹಾಗೂ ವೈದ್ಯಕೀಯ ಕಾಲೇಜುಗಳ ಸಾಮರ್ಥ್ಯ ವಿಸ್ತರಣೆಗೆ ಅತ್ಯಂತ ಮಹತ್ವದ ಕೊಡುಗೆಯಾಗಿದೆ. “ವೈದ್ಯಕೀಯ ಶಿಕ್ಷಣ ಕ್ಷೇತ್ರವನ್ನು ವಿಸ್ತರಿಸುವ ಮೂಲಕ ದೇಶದ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಶ್ರಮಿಸುತ್ತಿದೆ.” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Tue, 29 September 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ