NEP: ಏಡ್ಸ್, ಕ್ಯಾನ್ಸರ್​ಗೆ ಸ್ವಮೂತ್ರ ಪಾನವೇ ಮದ್ದು; ವಿವಾದದ ಸುಳಿಯಲ್ಲಿ ವೈದ್ಯಕೀಯ ಸಮಾಜಶಾಸ್ತ್ರದ ಪಠ್ಯ

ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಮಾರಕ ಕಾಯಿಲೆಗೆ ಸ್ವಮೂತ್ರ ಪಾನವೇ ಮದ್ದು ಎಂಬ ವಿಷಯ ಉಲ್ಲೇಖದ ಬಗ್ಗೆ ವಿದ್ಯಾರ್ಥೀ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗುತ್ತಿದ್ದು, ಸರ್ಕಾರದ ಮಧ್ಯಪ್ರವೇಶಕ್ಕೆ ಆಗ್ರಹಿಸಲಾಗುತ್ತಿದೆ.

NEP: ಏಡ್ಸ್, ಕ್ಯಾನ್ಸರ್​ಗೆ ಸ್ವಮೂತ್ರ ಪಾನವೇ ಮದ್ದು; ವಿವಾದದ ಸುಳಿಯಲ್ಲಿ ವೈದ್ಯಕೀಯ ಸಮಾಜಶಾಸ್ತ್ರದ ಪಠ್ಯ
ಏಡ್ಸ್, ಕ್ಯಾನ್ಸರ್​ಗೆ ಸ್ವಮೂತ್ರ ಪಾನವೇ ಮದ್ದು; ವಿವಾದದ ಸಳಿಯಲ್ಲಿ ವೈದ್ಯಕೀಯ ಸಮಾಜಶಾಸ್ತ್ರದ ಪಠ್ಯ
Follow us
| Updated By: Rakesh Nayak Manchi

Updated on:Nov 18, 2022 | 11:22 AM

ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (New National Education Policy) ಒಂದಲ್ಲಾ ಒಂದು ರೀತಿಯಲ್ಲಿ ವಿವಾದ (Controversy)ಕ್ಕೆ, ಟೀಕೆಗೆ, ವಿರೊಧಕ್ಕೆ ಕಾರಣವಾಗುತ್ತಿದೆ. ದೇಶದಲ್ಲಿ ಜಾರಿಗೆ ಭಾರೀ ವಿರೋಧಕ್ಕೆ ಕಾರಣವಾಗಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಅನ್ವಯ ಮೈಸೂರು ವಿಶ್ವವಿದ್ಯಾನಿಲಯ (Mysore University)ದ ಪಠ್ಯಕ್ರಮದಲ್ಲಿ, ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್ ಹಾಗೂ ಕ್ಯಾನ್ಸರ್ (AIDS and Cancer)​ಗೆ ಸ್ವಮೂತ್ರ (Urine) ಪಾನವೇ ಮದ್ದು ಎಂಬುದನ್ನು ಉಲ್ಲೇಖಿಸಲಾಗಿದೆ. ಸದ್ಯ ಇದು ವಿವಾದ ಪಡೆದುಕೊಂಡಿದ್ದು, ವಿದ್ಯಾರ್ಥಿ ಸಂಘಟನೆಗಳು ಅವೈಜ್ಞಾನಿಕ ಪಠ್ಯಕ್ರಮದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ವಿದ್ಯಾರ್ಥಿ ಸಂಘಟನೆಗಳಿಂದ ವಿವಾದಾತ್ಮಕ ಪಠ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್, ಕ್ಯಾನ್ಸರ್​ಗೆ ಸ್ವಮೂತ್ರ ಪಾನವೇ ಮದ್ದು ಎಂದು ಹೇಳಿರುವುದು ಅತ್ಯಂತ ಅವೈಜ್ಞಾನಿಕ ಮತ್ತು ಮೂರ್ಖತನದ ಪರಮಾವಧಿ ಎಂದು ಟೀಕೆ ಮಾಡಲಾಗುತ್ತಿದೆ. ಮೂತ್ರ ಚಿಕಿತ್ಸೆಯು ಪ್ರಕೃತಿ ಚಿಕಿತ್ಸೆಯ ಒಂದು ಭಾಗ, ಮೂತ್ರ ಸ್ವಪಾನದಿಂದ ಏಡ್ಸ್, ಕ್ಯಾನ್ಸರ್, ಕಣ್ಣು, ಕಿವಿ, ಹಲ್ಲು ಹಾಗೂ ಚರ್ಮರೋಗಗಳನ್ನು ನಿಯಂತ್ರಿಸಬಹುದು ಎಂಬ ಅವೈಜ್ಞಾನಿಕವಾದ ಅಂಶಗಳನ್ನು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಅಳವಡಿಸಿರುವುದು ದುರಂತವೇ ಸರಿ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ: ಶಾಲೆಗಳಲ್ಲಿ Meditation ಕಲಿಕೆ: ಟೀಕೆಗಳ ನಡುವೆ ಮಕ್ಕಳಿಗೆ ಧ್ಯಾನ ಕಲಿಸಲು ರೆಡಿಯಾಗುತ್ತಿರುವ ಶಿಕ್ಷಣ ಇಲಾಖೆ

ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ವೈಜ್ಞಾನಿಕವಾಗಿ ಸಾಬೀತಾಗಿರುವ ಅಂಶಗಳನ್ನು ಸೇರಿಸಬೇಕೆ ಹೊರತು ಕೇವಲ ಪ್ರಾಚೀನ ಗ್ರಂಥಗಳನ್ನು ಉಲ್ಲೇಖ ಮಾಡಿ ಈ ರೀತಿ ಪಠ್ಯಗಳನ್ನು ರಚಿಸಬಾರದು. ಈ ಕೂಡಲೇ ಪಠ್ಯವನ್ನು ಹಿಂಪಡೆಯಬೇಕು ಎಂದು AIDSO ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ. ಅಲ್ಲದೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ವೈಜ್ಞಾನಿಕ, ಪ್ರಜಾತಂತ್ರ, ಧರ್ಮ ನಿರಪೇಕ್ಷತ ಶಿಕ್ಷಣವನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು ಎಂದು ಹೇಳಿದ್ದಾರೆ.

ಅವೈಜ್ಞಾನಿಕ ಪಠ್ಯ ಹಿಂಪಡೆಗೆ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ವಿಶ್ವವಿದ್ಯಾನಿಲಯದ ಪದಾಧಿಕಾರಿಗಳು ಹಾಗೂ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಅವೈಜ್ಞಾನಿಕ ಪಠ್ಯಕ್ರಮವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಬೃಹತ್ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಅವೈಜ್ಞಾನಿಕ ಶಿಕ್ಷಣ ಪದ್ಧತಿಯನ್ನು ರೂಪಿಸುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:21 am, Fri, 18 November 22

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್