AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CUET 2022: ಎಲ್ಲ ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಒಂದೇ ಪ್ರವೇಶ ಪರೀಕ್ಷೆ, ಪ್ರತ್ಯೇಕ ಕೌನ್ಸಲಿಂಗ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (National Testing Agency - NTA) CUET ಅಧಿಸೂಚನೆಯನ್ನು ಅಧಿಕೃತ ವೆಬ್​ಸೈಟ್​ನಲ್ಲಿ ಇಂದು (ಮಾರ್ಚ್ 22) ಪ್ರಕಟಿಸಲಿದೆ.

CUET 2022: ಎಲ್ಲ ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಒಂದೇ ಪ್ರವೇಶ ಪರೀಕ್ಷೆ, ಪ್ರತ್ಯೇಕ ಕೌನ್ಸಲಿಂಗ್
ಯುಜಿಸಿ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Mar 22, 2022 | 3:17 PM

Share

ದೆಹಲಿ: ಎಲ್ಲ ಕೇಂದ್ರೀಯ ವಿಶ್ವವಿದ್ಯಾಲಯಗಳೂ ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆಗಳ (Common University Entrance Test – CUET) ಅಂಕಗಳನ್ನೇ ಪರಿಗಣಿಸಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬೇಕು ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗದ (University Grants Commission – UGC) ಅಧ್ಯಕ್ಷ ಎಂ.ಜಗದೀಶ್ ಕುಮಾರ್ ಹೇಳಿದರು. ಕೇಂದ್ರೀಯ ವಿಶ್ವವಿದ್ಯಾಲಯಗಳು 12ನೇ ತರಗತಿ (ಪಿಯುಸಿ) ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳಬಾರದು ಎಂದು ಸೂಚಿಸಿದರು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (National Testing Agency – NTA) CUET ಅಧಿಸೂಚನೆಯನ್ನು ಅಧಿಕೃತ ವೆಬ್​ಸೈಟ್​ನಲ್ಲಿ ಇಂದು (ಮಾರ್ಚ್ 22) ಪ್ರಕಟಿಸಲಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗಾಗಿ CUET ಪರೀಕ್ಷೆಯನ್ನೂ NTA ನಿರ್ವಹಿಸಲಿದೆ ಎಂದು ತಿಳಿಸಿದರು.

ಕನ್ನಡ, ಹಿಂದಿ, ಒಡಿಯಾ, ತಮಿಳು, ತೆಲುಗು, ಉರ್ದು, ಮಲಯಾಳಂ, ಅಸ್ಸಾಮಿ, ಪಂಜಾಬಿ, ಬೆಂಗಾಳಿ, ಮರಾಠಿ, ಇಂಗ್ಲಿಷ್ ಮತ್ತು ಗುಜರಾತಿ ಸೇರಿದಂತೆ 13 ಭಾಷೆಗಳಲ್ಲಿ CUET ಪರೀಕ್ಷೆ ನಡೆಯಲಿದೆ. ಈ ಅಂಕಗಳನ್ನು ಆಧರಿಸಿ ದೇಶದ ವಿವಿಧೆಡೆ ಇರುವ 45 ಕೇಂದ್ರೀಯ ವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸುತ್ತವೆ. ಏಪ್ರಿಲ್ ಮೊದಲ ವಾರದಲ್ಲಿ CUET ಪರೀಕ್ಷೆಯ ಅರ್ಜಿ ನಮೂನೆಗಳನ್ನು ಬಿಡುಗಡೆ ಮಾಡಲಾಗುವುದು. ಜುಲೈ ಮೊದಲ ವಾರದಲ್ಲಿ ಪರೀಕ್ಷೆಗಳು ನಡೆಯುವ ನಿರೀಕ್ಷೆಯಿದೆ.

ವಿಶ್ವವಿದ್ಯಾಲಯಗಳು ಅನುಸರಿಸುತ್ತಿರುವ ಮೀಸಲಾತಿ ನಿಯಮಗಳು CUETಗೆ ಬಾಧಕವಲ್ಲ. ಸಾಮಾನ್ಯ ಸೀಟುಗಳು ಮತ್ತು ಮೀಸಲಾತಿ ಆಧರಿತ ಸೀಟುಗಳಿಗೆ CUET ಅಂಕಗಳ ಆಧಾರದ ಮೇಲೆಯೇ ಪ್ರವೇಶ ಇರುತ್ತದೆ. ಹಾಲಿ ಅಸ್ತಿತ್ವದಲ್ಲಿರುವ ಪ್ರವೇಶ ಮತ್ತು ಮೀಸಲಾತಿ ಸೌಲಭ್ಯಕ್ಕೆ ಇದರಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ಯುಜಿಸಿ ಅಧ್ಯಕ್ಷರು ಹೇಳಿದರು. ಯಾವುದೇ ವಿಶ್ವವಿದ್ಯಾಲಯವು ಸ್ಥಳೀಯ ವಿದ್ಯಾರ್ಥಿಗಳಿಗೆ ಒಂದಿಷ್ಟು ಸ್ಥಾನಗಳನ್ನು ಮೀಸಲಿರಿಸಿದ್ದರೆ ಆ ನಿಯಮಗಳನ್ನು ಇನ್ನು ಮುಂದೆಯೂ ಪಾಲಿಸಬಹುದಾಗಿದೆ. ಆದರೆ ಈ ವಿದ್ಯಾರ್ಥಿಗಳು ಸಹ CUET ಮಾರ್ಗದಲ್ಲಿಯೇ ಪ್ರವೇಶ ಪಡೆಯಬೇಕಾಗುತ್ತದೆ.

CUETಗಾಗಿ ಕೇಂದ್ರೀಯ ಕೌನ್ಸೆಲೆಂಗ್ ಇರುವುದಿಲ್ಲ. ವಿಶ್ವವಿದ್ಯಾಲಯಗಳು ತಮ್ಮ ಪ್ರವೇಶದ ಅವಶ್ಯಕತೆಗೆ ತಕ್ಕಂತೆ ಸ್ಥಳೀಯವಾಗಿಯೇ ಕೌನ್ಸಲಿಂಗ್ ನಡೆಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿ (National Education Policy 2020 – NEP) ಅನ್ವಯ CUET ನಿಯಮಗಳನ್ನು ಎಲ್ಲ ಕೇಂದ್ರೀಯ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ಜಾರಿಗಳಿಸಲಾಗಿದೆ. ಕಳೆದ ವರ್ಷವೂ ಯುಜಿಸಿ ಎಲ್ಲ 45 ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಒಂದೇ ಪ್ರವೇಶ ಪರೀಕ್ಷೆ ನಡೆಸಲು ಉದ್ದೇಶಿಸಿತ್ತು. ಆದರೆ ನಂತರದ ದಿನಗಳಲ್ಲಿ ಈ ನಿರ್ಧಾರವನ್ನು ಒಂದು ವರ್ಷದ ಅವಧಿಗೆ ಮುಂದೂಡಲಾಯಿತು.

ಇದನ್ನೂ ಓದಿ: National Education Policy: ಕೇಂದ್ರೀಯ ವಿ.ವಿ. ನೇಮಕಾತಿಯಲ್ಲಿ ಬದಲಾವಣೆ; ವೃತ್ತಿಪರರು, ಕೈಗಾರಿಕೆ ಪರಿಣತರಿಂದಲೂ ಪಾಠ

ಇದನ್ನೂ ಓದಿ: ದೆಹಲಿ ಜವಾಹರ್​ ಲಾಲ್​ ನೆಹರೂ ವಿಶ್ವವಿದ್ಯಾಲಯಕ್ಕೆ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಉಪಕುಲಪತಿ; ಜೆಎನ್​​ಯುದ ಮೊದಲ ಮಹಿಳಾ ವೈಸ್ ಚಾನ್ಸಲರ್ ಇವರು !

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ