AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಹಿಜಾಬ್​ ಬಗ್ಗೆ ಸಚಿವರು ಹೇಳಿದ್ದಿಷ್ಟು..!

ಕಳೆದ ಸಾಲಿನ SSLC ಫಲಿತಾಂಶ ಕುಸಿದ ಬೆನ್ನಲ್ಲೇ ಸಾಕಷ್ಟು ಟೀಕೆಗೆ ಶಿಕ್ಷಣ ಇಲಾಖೆ ಗುರಿಯಾಗಿತ್ತು. ವೆಬ್ ಕಾಸ್ಟಿಂಗ್ ಇತರ ಕಠಿಣ ನಿಯಮದ ಎಫೆಕ್ಟ್ ಫಲಿತಾಂಶ ಕುಸಿತ ಆಯ್ತು ಎನ್ನುವ ಟೀಕೆಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಈ ವರ್ಷದ ಪ್ರಸಕ್ತ ಸಾಲಿನ ರಾಜ್ಯ ಪಠ್ಯಕ್ರಮ ಅನುಸರಿಸುವ ವಿದ್ಯಾರ್ಥಿಗಳ SSLC ಫಲಿತಾಂಶ ಹೆಚ್ಚು ಮಾಡಲು ಶಿಕ್ಷಣ ಇಲಾಖೆ ನಾನಾ ಸರ್ಕಸ್ ಮಾಡುತ್ತಿದೆ . ಅದರ ಭಾಗವಾಗಿ ಇಂದು ಶಿಕ್ಷಣ ಸಚಿವರು ವಾರ್ಷಿಕ ಪರೀಕ್ಷೆ ತಯಾರಿ ಎಂದು ವಿದ್ಯಾರ್ಥಿಗಳು ಹಾಗೂ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಹಲವಾರು ವಿಚಾರಗಳ ಬಗ್ಗೆ ಹೇಳಿದ್ದಾರೆ. ಇನ್ನು ಈ ವರ್ಷ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ಇಲ್ಲ ಎಂದಿದ್ದಾರೆ.

ಈ ಬಾರಿ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಹಿಜಾಬ್​ ಬಗ್ಗೆ ಸಚಿವರು ಹೇಳಿದ್ದಿಷ್ಟು..!
Madhu Bangarappa
Vinay Kashappanavar
| Edited By: |

Updated on:Feb 03, 2025 | 9:30 PM

Share

ಬೆಂಗಳೂರು, (ಫೆಬ್ರವರಿ 03): ಎಸ್​ಎಸ್​ಎಲ್​ಸಿ ( SSLC) ಮುಖ್ಯ ಪರೀಕ್ಷೆಗೆ ಮತಷ್ಟು ಕಠಿಣ ರೂಲ್ಸ್ ಗೆ ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ವೆಬ್ ಕಾಸ್ಟಿಂಗ್ ಹಾಗೂ ಸಿಸಿಟಿವಿ ಮತಷ್ಟು ಕಠಿಣ ಪ್ರಯೋಗಕ್ಕೆ ಇಲಾಖೆ ಮುಂದಾಗಿದೆ. ಹೌದು 2024-25 ನೇ ಸಾಲಿನ SSLC ಪರೀಕ್ಷೆಗೆ ಕೌಂಟ್ ಡೌನ್ ಶುರುವಾಗಿದೆ. ಈ ಹಿನ್ನಲೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು (ಫೆಬ್ರವರಿ 03) ಬನಶಂಕರಿಯ ಡಿಸಿಇಆರ್ ಟಿಯಲ್ಲಿ ಮಕ್ಕಳ ಜೊತೆ ಹಾಗೂ ಶಿಕ್ಷಕರು ಜೊತೆ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಬಳಿಕ ಸುದ್ಧಿಗೋಷ್ಠಿ ನಡೆಸಿ ಈ ವರ್ಷದ ಪರೀಕ್ಷೆಗಳ ಕುರಿತು ಕೆಲವು ಟಫ್ಸ್ ರೂಲ್ಸ್ ಬಗ್ಗೆ ಕೂಡಾ ಮಾಹಿತಿ ಹಂಚಿಕೊಂಡರು.

ಈ ವರ್ಷ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್​ ಇಲ್ಲ

ಕಳೆದ ವರ್ಷ SSLC ಎಕ್ಸಾಂನಲ್ಲಿ ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ಕೊಟ್ಟು ವಿವಾದಕ್ಕೀಡಾಗಿದ್ದ ಶಿಕ್ಷಣ ಇಲಾಖೆ, ಈ ವರ್ಷ ಮಾರ್ಕ್ಸ್ ರದ್ದು ಮಾಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಕಳೆದ ವರ್ಷ ವೆಬ್‌ಕಾಸ್ಟ್ ಮಾಡುವುದರಿಂದ ಕಡಿಮೆ ಫಲಿತಾಂಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಫಲಿತಾಂಶ ವೃದ್ಧಿಗೆ ಏನು ಮಾಡಬೇಕು ಅಂತ ಇಂದು ಚರ್ಚೆ ಮಾಡಿದ್ವಿ. ಈ ನಿಟ್ಟಿನಲ್ಲಿ ಇಲಾಖೆ ಕೆಲಸ ಮಾಡಿದೆ. ಪ್ರತಿ ಜಿಲ್ಲೆಯ ಸಿಇಒಗಳು ಈ ಬಾರಿ ನಮಗೆ ಹೆಚ್ಚು ಸಹಕಾರ ಕೊಟ್ಟಿದ್ದಾರೆ. ಮಕ್ಕಳಿಗೆ ಪರೀಕ್ಷಾ ಸಿದ್ಧತೆಗೆ ನಾವು ಮಾರ್ಗೋಪಾಯಗಳನ್ನ ಸಿದ್ಧ ಮಾಡಿದ್ದೇವೆ ಎಂದರು.

ಇದನ್ನೂ ಓದಿ: SSLC And PUC Exam Time Table: ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಎಕ್ಸಾಂ ಪದ್ಧತಿ ಈಗ ಮಕ್ಕಳಿಗೆ ಅರ್ಥವಾಗಿದೆ. ಒಂದು ವೇಳೆ ಫೇಲ್ ಆದರೆ ಮತ್ತೆ ಶಾಲೆಗೆ ಸೇರುವ ವ್ಯವಸ್ಥೆಯೂ ಕೂಡಾ ಈಗ ಮಕ್ಕಳಿಗೆ ಅರ್ಥವಾಗಿದೆ. ವಿದ್ಯಾರ್ಥಿಗಳಿಗೆ ಇರುವ ಸಮಸ್ಯೆ ಬಗ್ಗೆ ಇವತ್ತು ರಿವ್ಯೂ ಮೀಟಿಂಗ್ ಮಾಡಿದ್ದೇವೆ. ಎಲ್ಲಾ ಜಿಲ್ಲೆಯ ಡಿಸಿ, ಸಿಇಓಗಳ ಜೊತೆ ಚರ್ಚೆ ಮಾಡಿದ್ದೇವೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಜಾಸ್ತಿ ಆಗಲಿದೆ. ಮಕ್ಕಳಿಗೆ ಒತ್ತಡ ಹಾಕಬಾರದು ಅಂತ ಸೂಚನೆ ನೀಡಿದ್ದೇನೆ. ಸಿಎಂ ಅವರು ಸಭೆಯಲ್ಲಿ ಗರಂ ಆಗಿದ್ರು. ಗ್ರೇಸ್ ಅಂಕ ಕೊಡಬಾರದಿತ್ತು ಅಂತ ಹೇಳಿದ್ರು. ಹೀಗಾಗಿ ಈ ಬಾರಿ ಯಾವುದೇ ಕಾರಣಕ್ಕೂ ಗ್ರೇಸ್ ಅಂಕ ಕೊಡುವುದಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಕೊಟ್ಟಿದ್ದ 10% ಗ್ರೇಸ್ ಅಂಕದ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಆದರೆ ನಾವು ಕಳೆದ ಬಾರಿ ವೆಬ್‌ಕಾಸ್ಟಿಂಗ್ ಹಿನ್ನೆಲೆಯಲ್ಲಿ ಕೊಟ್ಟಿದ್ದ 10% ಗ್ರೇಸ್ ಅಂಕ ಈ ಬಾರಿ ನೀಡಲ್ಲ ಎಂದು ಸ್ಪಷ್ಟಪಡಿಸಿದರು.

ಫಲಿತಾಂಶ ವೃದ್ಧಿಗೆ ನಾನಾ ಕಾರ್ಯಕ್ರಮಗಳು

ಇನ್ನು ಎಸ್‌ಎಸ್‌ಎಲ್‌ಸಿ ಫಲಿತಾಂಶ ವೃದ್ಧಿಗೆ ಶಿಕ್ಷಣ ಇಲಾಖೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಒಂದು ದಿನಕ್ಕೆ ಒಂದು ಅಂಕ ಎಂಬ ಕಾರ್ಯಕ್ರಮ ಶುರು ಮಾಡಿದೆ. ಮಕ್ಕಳಿಗೆ ಬೆಳಗ್ಗೆ ಫೋನ್ ಮಾಡಿ ಎಬ್ಬಿಸಿ ಓದಿಸುವ ಕಾರ್ಯಕ್ರಮ. ವಿಶೇಷ ತರಗತಿಗಳನ್ನ ಮಾಡುವ ಮೂಲಕ ಅಭ್ಯಾಸ ಮಾಡುವ ಕಾರ್ಯಕ್ರಮ ಮಾಡಲಾಗುತ್ತಿದೆ. ಕಿರು ಪರೀಕ್ಷೆಗಳು, ಪೂರ್ವ ಸಿದ್ಧತಾ ಪರೀಕ್ಷೆಗಳು ಮಾಡುವ ಕೆಲಸ ಮಾಡಿದ್ದಾರೆ. ಸಿಇಒಗಳೇ ಪ್ರಶ್ನೆ ಪತ್ರಿಕೆ ಸಿದ್ಧ ಮಾಡಿ ಪರೀಕ್ಷೆ ಮಾಡಿದ್ದಾರೆ. 2-3 ಶಾಲೆಗಳಿಗೆ ಒಬ್ಬ ಅಧಿಕಾರಿಗಳ ನೇತೃತ್ವಗಳನ್ನ ನೇಮಕ ಮಾಡಿ ಕಲಿಕೆ ಅಭಿವೃದ್ಧಿ ಮಾಡುವ ಕೆಲಸ ಮಾಡಿದ್ದೇವೆ. ಗ್ರೂಪ್ ಸ್ಟಡಿ ಮಾಡೋ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಕಳೆದ ಬಾರಿ 10% ಗ್ರೇಸ್ ಅಂಕ ಶಿಕ್ಷಣ ಇಲಾಖೆ ಕೊಟ್ಟಿತ್ತು. ಕೋವಿಡ್ ಹಿನ್ನೆಲೆ ಮೊದಲೇ 10% ಗ್ರೇಸ್ ಅಂಕ ಇತ್ತು. ಅದರ ಜೊತೆಗೆ ಮತ್ತೆ 10% ಗ್ರೇಸ್ ಅಂಕ ಕೊಡಲಾಗಿತ್ತು. ಒಟ್ಟು 20% ಗ್ರೇಸ್ ಅಂಕ ಕೊಟ್ಟಿದ್ದು ಬಾರಿ ವಿವಾದ ಆಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕೊಟ್ಟಿದ್ದ 10% ಗ್ರೇಸ್ ಅಂಕ ರದ್ದು ಮಾಡಿದ್ದೇವೆ ಎಂದು ಸಚಿವರು ಹೇಳಿದ್ರು.. ಮಕ್ಕಳು ಸ್ಮಾರ್ಟ್ ಕ್ಲಾಸ್ ಬೇಕು ಎಂದು ಕೇಳ್ತಿದ್ದಾರೆ. ಇಂಟರ್ನೆಟ್ ವ್ಯವಸ್ಥೆ ಬೇಕು ಅಂತ ವಿದ್ಯಾರ್ಥಿಗಳು ಕೇಳಿದ್ದಾರೆ. ಇದರ ವ್ಯವಸ್ಥೆ ಶಿಕ್ಷಣ ಇಲಾಖೆ ಮಾಡಲಿದೆ. ಸ್ಕಿಲ್ ವಿಷಯಗಳನ್ನು ಕಲಿಸುವ ಕಾರ್ಯಕ್ರಮ ಶೀಘ್ರವೇ ಪ್ರಾರಂಭ ಮಾಡಲಿದ್ದೇವೆ ಎಂದರು.

ಅನಧಿಕೃತ ಶಾಲೆಗಳ ಬಗ್ಗೆ ಹೇಳಿದ್ದಿಷ್ಟು

ಇನ್ನು ಅನಧಿಕೃತ ಶಾಲೆಗಳ ಪಟ್ಟಿ ಸಿದ್ಧವಾಗುತ್ತಿದೆ. ಶಾಲೆ ಮಾನ್ಯತೆ ನವೀಕರಣ ವಿಚಾರದಲ್ಲಿ ನಿಯಮಗಳ ಸಡಿಲದ ಬಗ್ಗೆ ಚರ್ಚೆ ಮಾಡ್ತಿದ್ದೇವೆ. ಕಟ್ಟಡ ಕನ್ವರ್ಷನ್, ನವೀಕರಣ, ಅಗ್ನಿಶಾಮಕ ಸೇರಿ ಇರುವ ಗೊಂದಲ ನಿವಾರಣೆಗೆ ಸೂಚನೆ ನೀಡಿದ್ದೇನೆ. ನಮ್ಮ ಶಾಲೆ ಜಮೀನಿನಲ್ಲಿ ಮನೆ ಕಟ್ಟುಕೊಂಡಿದ್ದರೆ ಏನ್ ಮಾಡಬೇಕು ಎಂದು ಚರ್ಚೆ ಆಗುತ್ತಿದೆ. ಅನಧಿಕೃತ ಶಾಲೆ ವಿಚಾರದಲ್ಲಿ ಏಕಾಏಕಿ ನಿರ್ಧಾರ ಮಾಡಿದ್ರೆ ಮಕ್ಕಳ ಮೇಲೆ ಪರಿಣಾಮ ಆಗುತ್ತದೆ. ದೊಡ್ಡ ದೊಡ್ಡ ಶಾಲೆಗಳೇ ತಪ್ಪು ಮಾಡಿವೆ. ಅವುಗಳನ್ನು ಸರಿ ಮಾಡೋ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಹಿಜಾಬ್​ ಬಗ್ಗೆ ಸಚಿವರು ಹೇಳಿದ್ದೇನು?

ಇನ್ನು ಎಸ್ಎಸ್ ಎಲ್ ಸಿ ಪರೀಕ್ಷೆ ವೇಳೆ ಹಿಜಾಬ್​ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ ಈ ವಿಷಯ ಕೋರ್ಟ್‌ನಲ್ಲಿದೆ. ಈ ಬಗ್ಗೆ ಮಾತನಾಡುವುದಿಲ್ಲ. ಅನುಮತಿ ಕೊಡುವ ಬಗ್ಗೆ ಗೃಹ ಸಚಿವರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹಾರಿಕೆ ಉತ್ತರ ನೀಡಿ ನುಣುಚಿಕೊಂಡರು.

ಒಟ್ಟನಲ್ಲಿ ಶಿಕ್ಷಣ ಇಲಾಖೆ ಒಂದು ಕಡೆ ಫಲಿತಾಂಶ ಸುಧಾರಣಗೆ ಕಸರತ್ತು ಮಾಡುತ್ತಿದ್ದು, ಮತ್ತೊಂದಡೆ ಗುಣಮಟ್ಟ ಸುಧಾರಣೆಗೆ ಠಫ್ ರೂಲ್ಸ್ ಜಾರಿಗೆ ತರುತ್ತಿದೆ.

Published On - 9:27 pm, Mon, 3 February 25

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ