College Transfer: ಇನ್ಮುಂದೆ ಕರ್ನಾಟಕದಲ್ಲಿ ಬೆಸ ಸೆಮಿಸ್ಟರ್‌ಗಳಲ್ಲಿ ವಿದ್ಯಾರ್ಥಿಗಳು ಬೇರೆ ಕಾಲೇಜಿಗೆ ವರ್ಗ ಆಗಬಹುದು!

National Education Policy: ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಬೆಸ ಸೆಮಿಸ್ಟರ್‌ಗಳ ಆರಂಭದಲ್ಲಿ ವಿದ್ಯಾರ್ಥಿಗಳನ್ನು ಒಂದು ಕಾಲೇಜಿನಿಂದ ಇನ್ನೊಂದು ಕಾಲೇಜಿಗೆ ವರ್ಗಾಯಿಸಲು ಅನುಕೂಲವಾಗುವಂತೆ ಸರ್ಕಾರ ನಿನ್ನೆ ಬುಧವಾರ ಆದೇಶ ಹೊರಡಿಸಿದೆ.

College Transfer: ಇನ್ಮುಂದೆ ಕರ್ನಾಟಕದಲ್ಲಿ ಬೆಸ ಸೆಮಿಸ್ಟರ್‌ಗಳಲ್ಲಿ ವಿದ್ಯಾರ್ಥಿಗಳು ಬೇರೆ ಕಾಲೇಜಿಗೆ ವರ್ಗ ಆಗಬಹುದು!
ಕರ್ನಾಟಕದಲ್ಲಿನ್ನು ಬೆಸ ಸೆಮಿಸ್ಟರ್‌ಗಳಲ್ಲಿ ವಿದ್ಯಾರ್ಥಿಗಳು ಕಾಲೇಜನ್ನು ಬದಲಾಯಿಸಬಹುದು!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Mar 02, 2023 | 11:48 AM

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ (National Education Policy) ಬೆಸ ಸೆಮಿಸ್ಟರ್‌ಗಳ (semesters) ಆರಂಭದಲ್ಲಿ ವಿದ್ಯಾರ್ಥಿಗಳನ್ನು ಒಂದು ಕಾಲೇಜಿನಿಂದ ಇನ್ನೊಂದು ಕಾಲೇಜಿಗೆ ವರ್ಗಾಯಿಸಲು ಅನುಕೂಲವಾಗುವಂತೆ ಸರ್ಕಾರ ನಿನ್ನೆ ಬುಧವಾರ ಆದೇಶ ಹೊರಡಿಸಿದೆ. ಒಂದೇ ವಿಶ್ವವಿದ್ಯಾನಿಲಯದಲ್ಲಿ ಅಥವಾ ಬೇರೆ ಯಾವುದಾದರೂ ಒಂದು ಸಂಯೋಜಿತ ಕಾಲೇಜಿನಿಂದ ಇನ್ನೊಂದಕ್ಕೆ ಬದಲಾಯಿಸಲು ಬಯಸುವ ವಿದ್ಯಾರ್ಥಿಗಳು (students) ಈ ಅವಕಾಶವನ್ನು ಬಳಸಿಕೊಳ್ಳಬಹುದು. ಎರಡೂ ಸಂದರ್ಭಗಳಲ್ಲಿ, ವಿದ್ಯಾರ್ಥಿಯ ಅನುತ್ತೀರ್ಣ ವಿಷಯಗಳನ್ನು ಹೊಸ ಕಾಲೇಜಿಗೆ ವರ್ಗಾಯಿಸಲಾಗುತ್ತದೆ.

ಬೆಸ ಸೆಮಿಸ್ಟರ್‌ಗಳಿಗೆ (1, 3, 5 ಅಥವಾ 7) ಅನ್ವಯವಾಗುವ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ವಿದ್ಯಾರ್ಥಿಗಳಿಗೆ ಯುಯುಸಿಎಂಎಸ್ (ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ವೇದಿಕೆಯ ಮೂಲಕ ವರ್ಗಾವಣೆಯನ್ನು ಒದಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವಥ್ ನಾರಾಯಣ್ (CN Ashwath Narayan) ಹೇಳಿದ್ದಾರೆ.

ಇದನ್ನೂ ಓದಿ:

ಬೆಂಗಳೂರು: ತಾಯಿ‌ ಶವದೊಂದಿಗೆ 2 ದಿನ ಕಳೆದ ಬಾಲಕ, ಅಪ್ಪನ ಸ್ನೇಹಿತರು ಮನೆಗೆ ಬಂದಾಗ ಘಟನೆ ಬಯಲು

ವಿದ್ಯಾರ್ಥಿಗಳಿಗೆ ಮಲ್ಟಿ-ಎಂಟ್ರಿ ಮತ್ತು ಮಲ್ಟಿ-ಎಕ್ಸಿಟ್ ಆಯ್ಕೆಗಳನ್ನು ಒದಗಿಸಲು ವಿಶ್ವವಿದ್ಯಾಲಯಗಳಿಗೆ ಈ ಸೂಚನೆ ನೀಡಲಾಗಿದೆ. ಈ ಸೌಲಭ್ಯದ ಪ್ರಕಾರ, ಎರಡು ಸೆಮಿಸ್ಟರ್‌ಗಳನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಬೇಕು. ನಾಲ್ಕು ಸೆಮಿಸ್ಟರ್‌ಗಳನ್ನು ಪೂರ್ಣಗೊಳಿಸಿದವರಿಗೆ ಡಿಪ್ಲೊಮಾ ನೀಡಬೇಕು. ಆರು ಸೆಮಿಸ್ಟರ್‌ಗಳನ್ನು ಪೂರ್ಣಗೊಳಿಸಿದ ನಂತರ, ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರವನ್ನು ನೀಡಬೇಕು ಮತ್ತು ಎಂಟು ಸೆಮಿಸ್ಟರ್‌ಗಳನ್ನು ಪೂರ್ಣಗೊಳಿಸಿದ ನಂತರ ಅವರಿಗೆ ಪದವಿ (ಗೌರವ) ಪ್ರಮಾಣಪತ್ರವನ್ನು ನೀಡಲಾಗುತ್ತದೆ.

ಮಧ್ಯದಲ್ಲಿ ಕೋರ್ಸ್‌ನಿಂದ ನಿರ್ಗಮಿಸಿದವರು ಏಳು ವರ್ಷಗಳಲ್ಲಿ (ಮೊದಲ ಸೆಮಿಸ್ಟರ್‌ಗೆ ಪ್ರವೇಶದ ದಿನಾಂಕದಿಂದ) ಮರು ಪ್ರವೇಶ ಪಡೆಯಬಹುದು ಮತ್ತು ಹೆಚ್ಚಿನ ಅಧ್ಯಯನವನ್ನು ಮುಂದುವರಿಸಬಹುದು. ವಿದ್ಯಾರ್ಥಿಗಳು ಗಳಿಸಿದ ಕ್ರೆಡಿಟ್ ಪಾಯಿಂಟ್‌ಗಳನ್ನು ‘ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್’ಗೆ ಸೇರಿಸಲಾಗುತ್ತದೆ ಮತ್ತು ಆಯಾ ಪ್ರಮಾಣ ಪತ್ರವನ್ನು ನೀಡುವಾಗ ಪರಿಗಣಿಸಲಾಗುತ್ತದೆ.

ರಾಷ್ಟ್ರೀಯ ಶಿಕ್ಷಣ ನೀತಿ -National Education Policy ಕುರಿತಾದ ಹೆಚ್ಚಿನ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ