Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟೆ ಸೇವನೆ ಮಕ್ಕಳ ಮೂಳೆಗಳ ಬೆಳವಣಿಗೆಗೆ ಪೂರಕ; ಡಾ ಕೀರ್ತಿ

ಮಕ್ಕಳಿಗೆ ಅರ್ಧಂಬರ್ಧ ಬೇಯಿಸಿದ ಮೊಟ್ಟೆ ಸೇವನೆ ಮಕ್ಕಳ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಪೌಷ್ಟಿಕಾಂಶ ತಜ್ಞರು ಹೇಳಿದ್ದಾರೆ.

ಮೊಟ್ಟೆ ಸೇವನೆ ಮಕ್ಕಳ ಮೂಳೆಗಳ ಬೆಳವಣಿಗೆಗೆ ಪೂರಕ; ಡಾ ಕೀರ್ತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 14, 2022 | 2:52 PM

ಬೆಂಗಳೂರು: ನೂತನ ಶಿಕ್ಷಣ ನೀತಿ (New Education Policy – NEP) ಸಮಿತಿಯು ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ನೀಡಬಾರದೆಂದು ಶಿಫಾರಸು ಮಾಡಿರುವುದು ಕರ್ನಾಟಕದಲ್ಲಿ ದೊಡ್ಡ ಚರ್ಚೆಯನ್ನೇ ಹುಟ್ಟುಹಾಕಿದೆ. ಶಿಫಾರಿಸು ವಿರೋಧಿಸಿ ಸಾಹಿತಿಗಳು, ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಟ್ಟೆ ಹಾಗೂ ಮಾಂಸದಿಂದ ಹಲವು ರೋಗಗಳು ಬರುತ್ತವೆ. ಹೀಗಾಗಿ ಸಾತ್ವಿಕ ಆಹಾರ ಪದ್ಧತಿ ಅನುಸರಿಸಬೇಕೆಂದು ಸಮಿತಿ ಅಭಿಪ್ರಾಯಪಟ್ಟಿದೆ.

ಮೊಟ್ಟೆ ನೀಡಬಾರದು ಎಂದು ಎನ್​ಇಪಿ ಸಮಿತಿ ಶಿಫಾರಸು ಮಾಡಿದ್ದರೂ, ಬೆಂಗಳೂರಿನ ಪೋಷಕಾಂಶ ತಜ್ಞರು ಅದರಿಂದ ಹಲವು ಅನುಕೂಲಗಳಿವೆ ಎಂದೇ ವಾದಿಸುತ್ತಿದ್ದಾರೆ. ‘ಮಕ್ಕಳಿಗೆ ದಿನಕ್ಕೆ ಒಂದು ಮೊಟ್ಟೆ ನೀಡುವುದು ಒಳ್ಳೆಯದು. ಅದರಿಂದ ಅಪೌಷ್ಟಿಕತೆಯ ಕೊರತೆ ದೂರವಾಗುತ್ತದೆ. ಮೊಟ್ಟೆ ತಿನ್ನುವುದರಿಂದ ಮಕ್ಕಳಲ್ಲಿ ಕ್ಯಾಲ್ಸಿಯಂ ಮಟ್ಟವು ಸುಧಾರಿಸುತ್ತದೆ. ಮೂಳೆಗಳು ಸದೃಢವಾಗುತ್ತವೆ. ಆದರೆ ಮೊಟ್ಟೆಯನ್ನು ಸಂಪೂರ್ಣವಾಗಿ ಬೇಯಿಸಿಯೇ ಕೊಡಬೇಕು. ಅರ್ಧಂಬರ್ಧ ಬೇಯಿಸಿದ ಮೊಟ್ಟೆ ಸೇವನೆ ಮಕ್ಕಳ ಆರೋಗ್ಯಕ್ಕೆ ಒಳ್ಳೆಯದಲ್ಲ’ ಎಂದು ಅವರು ಹೇಳಿದ್ದಾರೆ.

ಪುಟ್ಟಣ್ಣ ವಿರೋಧ

ಸಮಿತಿಯ ಶಿಫಾರಸಿಗೆ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ‘ಮೊಟ್ಟೆ ಹಾಗೂ ಮಾಂಸ ದೇಹಕ್ಕೆ ಅತ್ಯಗತ್ಯವಾಗಿರುವ ಪೋಷಕಾಂಶಗಳನ್ನು ಒದಗಿಸುತ್ತವೆ. ಮಿದುಳಿನ ಬೆಳವಣಿಗೆಗೂ ಅದು ಸಹಾಯ ಮಾಡುತ್ತದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ. ಹೀಗಾಗಿಯೇ ಸರ್ಕಾರವು ಮೊಟ್ಟೆಯನ್ನು ಬಿಸಿಯೂಟದಲ್ಲಿ ಸೇರಿಸಿತ್ತು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡದಂತೆ ಶಿಕ್ಷಣ ಇಲಾಖೆಗೆ ಶಿಫಾರಸ್ಸು! ಎನ್ಇಪಿ ಸಮಿತಿ ವಿರುದ್ಧ ತೀವ್ರ ಆಕ್ರೋಶ

ಇದೀಗ ನೂತನ ಶಿಕ್ಷಣ ನೀತಿ ಸಮಿತಿಯು ಮೊಟ್ಟೆ ಬೇಡ ಎಂದು ಶಿಫಾರಸ್ಸು ಮಾಡಿರುವುದು ಅವೈಜ್ಞಾನಿಕವಾಗಿದೆ. ಜನರ ಊಟದ ಪದ್ಧತಿ ಹೀಗೆಯೇ ಇರಬೇಕು ಎಂದು ಹೇರಲು ಸಮಿತಿಯು ಮುಂದಾಗಿದೆ. ನಮ್ಮ ದೇಶದಲ್ಲಿ ಅರ್ಧದಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಎನ್​ಇಪಿ ಸಮಿತಿಯ ಈ ಶಿಫಾರಸು ವಾಸ್ತವವನ್ನು ಅಣಕಿಸಿದಂತಿದೆ ಎಂದು ಹೇಳಿದ್ದಾರೆ. ಸಮಿತಿಯ ಶಿಫಾರಸಿನ ಬಗ್ಗೆ ನನ್ನ ಆಕ್ಷೇಪವನ್ನು ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಬರೆದು ಗಮನ ಸೆಳೆಯುತ್ತೇನೆ ಎಂದು ಹೇಳಿದರು.

Published On - 2:52 pm, Thu, 14 July 22

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್