ಸಾರ್ವಜನಿಕರು, ಪೋಷಕರ ವ್ಯಾಪಕ ವಿರೋಧ: 100 ರೂ. ದೇಣಿಗೆ ಸಂಗ್ರಹ ಸುತ್ತೋಲೆ ಹಿಂಪಡೆದ ಶಿಕ್ಷಣ ಇಲಾಖೆ

ಸಾರ್ವಜನಿಕರು, ಪೋಷಕರ ವಿರೋಧ ಹಿನ್ನೆಲೆ ಶಾಲಾ ಶ್ರೇಯೋಭಿವೃದ್ಧಿಗೆ ಪೋಷಕರಿಂದ 100 ರೂ. ದೇಣಿಗೆ ಸಂಗ್ರಹ ಆದೇಶವನ್ನು ಶಿಕ್ಷಣ ಇಲಾಖೆ ವಾಪಸ್ ಪಡೆದಿದೆ.

ಸಾರ್ವಜನಿಕರು, ಪೋಷಕರ ವ್ಯಾಪಕ ವಿರೋಧ: 100 ರೂ. ದೇಣಿಗೆ ಸಂಗ್ರಹ ಸುತ್ತೋಲೆ ಹಿಂಪಡೆದ ಶಿಕ್ಷಣ ಇಲಾಖೆ
ಶಿಕ್ಷಣ ಇಲಾಖೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 22, 2022 | 6:54 PM

ಬೆಂಗಳೂರು: ಸಾರ್ವಜನಿಕರು, ಪೋಷಕರ ವಿರೋಧ ಹಿನ್ನೆಲೆ ಶಾಲಾ ಶ್ರೇಯೋಭಿವೃದ್ಧಿಗೆ ಪೋಷಕರಿಂದ 100 ರೂ. ದೇಣಿಗೆ (Donation) ಸಂಗ್ರಹ ಆದೇಶವನ್ನು ಶಿಕ್ಷಣ ಇಲಾಖೆ ವಾಪಸ್ ಪಡೆದಿದೆ. ಶಿಕ್ಷಣ ಸಚಿವರ ಸೂಚನೆ ಮೇರೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹಿಂಪಡೆಯಲಾಗಿದೆ. ಶಾಲೆಯ ಅಭಿವೃದ್ಧಿಗಾಗಿ ದಾನ, ದೇಣಿಗೆಗಳನ್ನು ಸ್ವೀಕರಿಸುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ (Education Department) ಮಹತ್ವದ ಸುತ್ತೋಲೆ ಹೊರಡಿಸಿತ್ತು. ಸರ್ಕಾರಿ ಶಾಲೆಗಳ ಶೌಚಾಲಯ, ವಿದ್ಯುತ್ ಬಿಲ್, ಕಡಿಯುವ ನೀರು ನಿರ್ವಹಣೆಗೆ ಮಾಸಿಕ ವಿದ್ಯಾರ್ಥಿಗಳ ಪೋಷಕರಿಂದ 100 ರೂಪಾಯಿ ದೇಣಿಗೆ ರೂಪದಲ್ಲಿ ಪಡೆಯಲು ಎಸ್​ಡಿಎಮ್​ಸಿಗಳಿಗೆ ಅವಕಾಶ ನೀಡಲಾಗಿತ್ತು. ಇದರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೆ ದಕ್ಕೆ ತರೋಕೆ ಶಿಕ್ಷಣ ಸಚಿವರು ಹೊರಟ್ಟಿದ್ದಾರೆ. ಮೂರು ತಿಂಗಳಿಗೊಮ್ಮೆ ಪೋಷಕರು ಸಭೆಗೆ ಸಹ ಬರೋದಿಲ್ಲ. ಬಡ ವಿದ್ಯಾರ್ಥಿಗಳು ಉಚಿತ ಶಿಕ್ಷಣ ಅಂತ ಪೋಷಕರ ಮಕ್ಕಳನ್ನ ತಂದು ಸರ್ಕಾರಿ ಶಾಲೆಗೆ ಬಿಡುತ್ತಾರೆ. ಇದೀಗ ಸರ್ಕಾರ ವಸೂಲಿಗೆ ಮುಂದಾದ್ರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009ರ ಸ್ಪಷ್ಟ ಉಲ್ಲಂಘನೆಯಿದೆ ಎಂದು ಕಿಡಿ ಕಾರಿದ್ದಾರೆ.

ವ್ಯಾಪಕ ಆಕ್ರೋಶ:

ಶಿಕ್ಷಣ ಇಲಾಖೆಯ ಸುತ್ತೋಲೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಶಿಕ್ಷಣ ಇಲಾಖೆ ನಡೆಗೆ ಪೋಷಕರು ಹಾಗೂ ಖಾಸಗಿ ಶಾಲಾ ಸಂಘಟನೆಗಳಿಂದಲೂ ವಿರೋಧ ಕೇಳಿಬರುತ್ತಿದೆ. ಶಾಲೆಗಳ ಖಾಸಗಿರಣದ ಹುನ್ನಾರ ಎಂದು ಪೋಷಕರು ಕಿಡಿಕಾರಿದ್ದಾರೆ. ಮಕ್ಕಳ ಮೂಲಭೂತ ಶಿಕ್ಷಣ ಹಕ್ಕನ್ನು ಶಿಕ್ಷಣ ಇಲಾಖೆ ಕಿತ್ತುಕೊಳ್ಳಲು ಮುಂದಾಗಿದ್ದು, ಮಕ್ಕಳನ್ನ ಶಾಲೆಯಿಂದ ಹೊರ ಹಾಕುವ ಹುನ್ನಾರ ಇದು ಎಂದಿದ್ದಾರೆ. ಕರ್ನಾಟಕದ್ಯಾಂತ ಮುಂದಿನ ದಿನಗಳಲ್ಲಿ ಪೋಷಕರಿಂದ ಹೋರಾಟ ಮಾಡುತ್ತೇವೆ ಎಂದು ಪೋಷಕರ ಸಂಘಟನೆಯಿಂದ ಆಕ್ರೋಶ ವ್ಯಕ್ತಪಡಿಸಲಾಗಿದೆ.

ರಾಜ್ಯ ಸರ್ಕಾರ ಸುತ್ತೋಲೆ ವಾಪಸ್ ಪಡೆಯಬೇಕು: ಹೆಚ್​.ವಿಶ್ವನಾಥ್

ಇನ್ನು ಈ ವಿಚಾರವಾಗಿ ಮೈಸೂರಿನಲ್ಲಿ ಬಿಜೆಪಿ ಎಂಎಲ್​ಸಿ ಹೆಚ್​.ವಿಶ್ವನಾಥ್ ಪ್ರತಿಕ್ರಿಯೆ ನೀಡುದ್ದು, ಸರ್ಕಾರಿ ಶಾಲೆಗಳ ನಿರ್ವಹಣೆಗೆ 100 ರೂಪಾಯಿ ಶುಲ್ಕ ಯಾಕೆ? ರಾಜ್ಯ ಸರ್ಕಾರ ತಕ್ಷಣ ಈ ಸುತ್ತೋಲೆ ವಾಪಸ್ ಪಡೆಯಬೇಕು ಎಂದರು. ಸರ್ಕಾರಿ ಶಾಲೆಯಲ್ಲಿ ಓದೋರು ಆರ್ಥಿಕವಾಗಿ ಹಿಂದುಳಿದವರು. ಇವತ್ತು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ತಂದಿದ್ದಾರೆ. ಕನ್ನಡ ಶಾಲೆ ಮುಚ್ಚಲು ಏನು ಹುನ್ನಾರ ಆಗಬೇಕೋ ಅದು ಆಗುತ್ತಿದೆ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:48 pm, Sat, 22 October 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ