AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pariksha Pe Charcha 2025: ಹೊಸ ಆಯಾಮದಲ್ಲಿ ಪರೀಕ್ಷಾ ಪೆ ಚರ್ಚಾ, ಮೋದಿ ಜತೆ ಇರಲಿದ್ದಾರೆ ದೀಪಿಕಾ ಪಡುಕೋಣೆ, ಸದ್ಗುರು

ಪರೀಕ್ಷಾ ಪೆ ಚರ್ಚಾ 2025 ಕಾರ್ಯಕ್ರಮವನ್ನು ಫೆಬ್ರವರಿ 10 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು 3.6 ಕೋಟಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ನೋಂದಾಯಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ, ಪ್ರಧಾನಿ ಮೋದಿ ಅವರೊಂದಿಗೆ, ಆಧ್ಯಾತ್ಮಿಕ ಗುರು ಸದ್ಗುರು, ನಟಿ ದೀಪಿಕಾ ಪಡುಕೋಣೆ, ಮೇರಿ ಕೋಮ್ ಮತ್ತು ಅವನಿ ಲೇಖರಾ ಅವರು ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಮತ್ತು ಒತ್ತಡ ಕಡಿಮೆ ಮಾಡುವ ಬಗ್ಗೆ ಸಲಹೆಗಳನ್ನು ನೀಡಲಿದ್ದಾರೆ.

ನಯನಾ ರಾಜೀವ್
| Updated By: Digi Tech Desk|

Updated on:Feb 10, 2025 | 9:09 AM

Share

ಪರೀಕ್ಷೆಯ ಒತ್ತಡವನ್ನು ನಿವಾರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ನಡೆಸುವ ವಾರ್ಷಿಕ ಸಂವಾದ ‘ಪರೀಕ್ಷಾ ಪೆ ಚರ್ಚಾ’ಗೆ ಈ ಬಾರಿ ಹೊಸ ಆಯಾಮ ದೊರೆತಿದೆ. ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಲಿದ್ದು, ವಿವಿಧ ಕ್ಷೇತ್ರಗಳ ಏಳು ಸೆಲೆಬ್ರಿಟಿಗಳು ಪರೀಕ್ಷೆಯ ಸಮಯದಲ್ಲಾಗುವ ಒತ್ತಡವನ್ನು ನಿವಾರಿಸುವ ಕುರಿತು ಸಲಹೆ ನೀಡಲಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ಫೆಬ್ರವರಿ 10ರಂದು ನವದೆಹಲಿಯಲ್ಲಿರುವ ಭಾರತ್ ಮಂಟಪದಲ್ಲಿ ನಡೆಯುತ್ತಿದೆ. ಈ ಮೊದಲು ಕೇವಲ ಪ್ರಧಾನಿಯೊಂದಿಗೆ ಮಾತ್ರ ಸಂವಾದ ನಡೆಯುತ್ತಿತ್ತು ಆದರೆ ಈಗ ಸೆಲೆಬ್ರಿಟಿಗಳು ಕೂಡ ಇದರ ಭಾಗವಾಗಿರಲಿದ್ದಾರೆ.

ಸದ್ಗುರು, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಮೇರಿ ಕೋಮ್ ಮತ್ತು ಅವನಿ ಲೇಖರಾ ಸಲಹೆಗಳನ್ನು ನೀಡಲಿದ್ದಾರೆ. ಈ ಕಾರ್ಯಕ್ರಮದ ಪ್ರಮುಖ ಅಂಶವೆಂದರೆ ಪ್ರಧಾನಿ ಮೋದಿಯವರು ವಿದ್ಯಾರ್ಥಿಗಳೊಂದಿಗೆ ನಡೆಸುವ ವಿಶೇಷ ಸಂವಾದ, ಇದರಲ್ಲಿ ಅವರು ಅವರ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ ಮತ್ತು ಶೈಕ್ಷಣಿಕ ಮತ್ತು ಜೀವನದ ಸವಾಲುಗಳನ್ನು ಹೇಗೆ ಎದುರಿಸುವುದು ಎಂಬುದರ ಕುರಿತು ಮಾರ್ಗದರ್ಶನ ನೀಡುತ್ತಾರೆ.

ಪರೀಕ್ಷಾ ಪೆ ಚರ್ಚಾದಲ್ಲಿ ಪ್ರಧಾನಿ ನರೇಂದ್ರ ಮೋದಿ 35 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿರುತ್ತಾರೆ. 50-60 ವಿದ್ಯಾರ್ಥಿಗಳು ಮತ್ತು ಇತರೆ ಪ್ರಮುಖರು ಪಾಲ್ಗೊಳ್ಳಿಲಿದ್ದಾರೆ. ಈ ಬಾರಿ ಸುಮಾರು ಆರುನೂರು ವಿದ್ಯಾರ್ಥಿಗಳು ಈ ಚರ್ಚೆಯಲ್ಲಿ ನೇರವಾಗಿ ಭಾಗವಹಿಸಿದ್ದಾರೆ.

ಮತ್ತಷ್ಟು ಓದಿ:ಪರೀಕ್ಷಾ ಪೆ ಚರ್ಚಾ 2024 ನಾಳೆ ನಡೆಯಲಿದೆ: ಸಮಯ, ಎಲ್ಲಿ ವೀಕ್ಷಿಸಬೇಕು ಮತ್ತು ಇತರ ವಿವರಗಳನ್ನು ಇಲ್ಲಿ ಪರಿಶೀಲಿಸಿ

ಆದಾಗ್ಯೂ, ಈ ಬಾರಿ ಪ್ರಧಾನಿ ಮೋದಿಯವರೊಂದಿಗಿನ ಈ ಚರ್ಚೆಗಾಗಿ ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದ ದಾಖಲೆಯ 3.5 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ನೋಂದಾಯಿಸಿಕೊಂಡಿದ್ದಾರೆ. ಅವರೆಲ್ಲರೂ ಈಗ ಫೆಬ್ರವರಿ 10 ರಂದು ಈ ಚರ್ಚೆಯನ್ನು ಕೇಳಲು ಸಾಧ್ಯವಾಗುತ್ತದೆ ಮತ್ತು ಅವರ ಪ್ರಶ್ನೆಗಳಿಗೆ ಉತ್ತರಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದ ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 14, 2024 ರಿಂದ ಪ್ರಾರಂಭವಾಗಿ ಜನವರಿ 14, 2025 ರವರೆಗೆ ನಡೆಯಿತು. ಒಟ್ಟು 2,500 ಆಯ್ದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅವರ ಕಲಿಕಾ ಅನುಭವವನ್ನು ಹೆಚ್ಚಿಸಲು ಶಿಕ್ಷಣ ಸಚಿವಾಲಯದಿಂದ ಪಿಪಿಸಿ ಕಿಟ್‌ಗಳನ್ನು ಸ್ವೀಕರಿಸಲಿದ್ದಾರೆ.

ಪರೀಕ್ಷಾ ಪೆ ಚರ್ಚಾದಲ್ಲಿ ವಿದ್ಯಾರ್ಥಿಗಳು ಕೇಳಬಹುದಾದ ಪ್ರಶ್ನೆಗಳಿವು

  • ದೀರ್ಘ ಸಮಯದ ಅಧ್ಯಯನ, ಅತಿಯಾಗಿ ಸ್ಕ್ರೀನ್ ನೋಡುವುದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ತಿಗಳು ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯಾವ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬಹುದು?
  • ಶಾಲೆ, ಟ್ಯೂಷನ್, ಸ್ವ-ಅಧ್ಯಯನ ಮತ್ತು ವೈಯಕ್ತಿಕ ಸಮಯದ ನಡುವೆ ಸಮತೋಲನ ಸಾಧಿಸುವುದು ವಿದ್ಯಾರ್ಥಿಗಳಿಗೆ ಸವಾಲಾಗಿ ಪರಿಣಮಿಸಿದೆ. ಸಮಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ದೈನಂದಿನ ದಿನಚರಿಯನ್ನು ರೂಪಿಸಲು ಕೆಲವು ಪ್ರಾಯೋಗಿಕ ತಂತ್ರಗಳನ್ನು ಹಂಚಿಕೊಳ್ಳಬಹುದೇ?
  • ತಾವು ಅನುತ್ತೀರ್ಣರಾಗುತ್ತೇವೆ ಎಂಬ ಭಯವು ವಿದ್ಯಾರ್ಥಿಗಳನ್ನು ದಿಟ್ಟ ಹೆಜ್ಜೆಗಳನ್ನು ಇಡದಂತೆ ತಡೆಯುತ್ತದೆ. ಈ ಭಯವನ್ನು ನಿವಾರಿಸಿಕೊಂಡು ಆತ್ಮವಿಶ್ವಾಸದ ಹಾಗೂ ಅಪಾಯವನ್ನು ಎದುರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳುವುದು ಹೇಗೆ?
  • ಅತ್ಯುತ್ತಮ ಪ್ರಯತ್ನ ಮಾಡಿದರೂ ಎಲ್ಲಾ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಗಳಿಸಲು ಸಾಧ್ಯವಿಲ್ಲ, ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಹೇಗಿದೆಯೋ ಹಾಗೆ ಸ್ವೀಕರಿಸುವುದು, ಭವಿಷ್ಯದ ಸವಾಲುಗಳಿಗೆ ತಮ್ಮನನ್ನು ಸಿದ್ಧಪಡಿಸಿಕೊಳ್ಳುವುದು ಹೇಗೆ?

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:51 am, Thu, 6 February 25

ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ