ನೀಟ್ ಪರೀಕ್ಷೆ ಮುಂದೂಡಿಕೆ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾ

NEET 2021: ಈಮೊದಲು ಏಪ್ರಿಲ್ 18ಕ್ಕೆ ನಿಗದಿಯಾಗಿದ್ದ ನೀಟ್ ಪರೀಕ್ಷೆಯನ್ನು ಕೊವಿಡ್ ಕಾರಣಕ್ಕೆ ಮುಂದೂಡಲು ಕೇಂದ್ರ ತೀರ್ಮಾನಿಸಿತ್ತು. ಕೇಂದ್ರ ಸರ್ಕಾರದ ಈ ತೀರ್ಮಾನವನ್ನು ಪ್ರಶ್ನಿಸಿ ಜಿ.ಬಿ.ಕುಲಕರ್ಣಿ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಸಲ್ಲಿಸಿತ್ತು. ಆದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ವಜಾಗೊಳಿಸಿರುವ ಹೈಕೋರ್ಟ್, ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದೆ.

ನೀಟ್ ಪರೀಕ್ಷೆ ಮುಂದೂಡಿಕೆ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಮೆಡಿಕಲ್ ಪಿಜಿ ನೀಟ್ ಪರೀಕ್ಷೆ ಮುಂದೂಡಿಕೆ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್)  ಹೈಕೋರ್ಟ್ ವಜಾಗೊಳಿಸಿದೆ. ಕೊವಿಡ್ ಹಿನ್ನೆಲೆಯಲ್ಲಿ ನೀಟ್ ಮುಂದೂಡಲಾಗಿದೆ. ನೀಟ್ ಪರೀಕ್ಷೆ ರದ್ದುಪಡಿಸಿಲ್ಲ ಎಂದು ಕೇಂದ್ರ ಸರ್ಕಾರದ ವಾದವನ್ನು ಒಪ್ಪಿದ ಹೈಕೋರ್ಟ್, ಪರೀಕ್ಷೆ ಮುಂದೂಡಿಕೆ ನಿರ್ಧಾರದಲ್ಲಿ ಯಾವುದೇ ತಪ್ಪು ಕಾಣುತ್ತಿಲ್ಲ. ಹೀಗಾಗಿ ಮಧ್ಯ ಪ್ರವೇಶಿಸುವುದಿಲ್ಲವೆಂದು ಅಭಿಪ್ರಾಯಪಟ್ಟಿದೆ.

ಈಮೊದಲು ಏಪ್ರಿಲ್ 18ಕ್ಕೆ ನಿಗದಿಯಾಗಿದ್ದ ನೀಟ್ ಪರೀಕ್ಷೆಯನ್ನು ಕೊವಿಡ್ ಕಾರಣಕ್ಕೆ ಮುಂದೂಡಲು ಕೇಂದ್ರ ತೀರ್ಮಾನಿಸಿತ್ತು. ಕೇಂದ್ರ ಸರ್ಕಾರದ ಈ ತೀರ್ಮಾನವನ್ನು ಪ್ರಶ್ನಿಸಿ ಜಿ.ಬಿ.ಕುಲಕರ್ಣಿ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಸಲ್ಲಿಸಿತ್ತು. ಆದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ವಜಾಗೊಳಿಸಿರುವ ಹೈಕೋರ್ಟ್, ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದೆ.

ಕೊವಿಡ್ ಹೆಚ್ಚಳದ ಕಾರಣದಿಂದ ವೈದ್ಯಕೀಯ ಸ್ನಾತಕೋತ್ತರ ಪದವಿ ಪ್ರವೇಶದ ನೀಟ್ ಪಿಜಿ ಪರೀಕ್ಷೆಗಳನ್ನು ಕನಿಷ್ಠ ನಾಲ್ಕು ತಿಂಗಳವರೆಗೆ ಮುಂದೂಡಲಾಗುವುದು ಎಂದು ಪ್ರಧಾನಮಂತ್ರಿಗಳ ಕಚೇರಿ ಪ್ರಕಟಿಸಿತ್ತು. ಕೊವಿಡ್ 19 ಪರಿಸ್ಥಿತಿಯ ವಿರುದ್ಧ ಹೋರಾಡಲು ವೈದ್ಯಕೀಯ ಸಿಬ್ಬಂದಿಗಳ ಲಭ್ಯತೆಯನ್ನು ಹೆಚ್ಚಿಸುವ ಪ್ರಮುಖ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅಧಿಕೃತಗೊಳಿಸಿದ್ದು, ನೀಟ್ ಮತ್ತು ಸ್ನಾತಕೋತ್ತರ ಪರೀಕ್ಷೆಯನ್ನು ಕನಿಷ್ಠ 4 ತಿಂಗಳವರೆಗೆ ಮುಂದೂಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿತ್ತು.

100 ದಿನಗಳ ಕೊವಿಡ್ ಕರ್ತವ್ಯಗಳನ್ನು ಪೂರೈಸಿದ ವೈದ್ಯಕೀಯ ಸಿಬ್ಬಂದಿಗೆ ಮುಂಬರುವ ನಿಯಮಿತ ಸರ್ಕಾರಿ ನೇಮಕಾತಿಗಳಲ್ಲಿ ಆದ್ಯತೆ ನೀಡಲಾಗುವುದು. ಅಲ್ಲದೇ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೊವಿಡ್ ನಿರ್ವಹಣಾ ಕೆಲಸಕ್ಕೆ ನಿಯೋಜನೆ ಮಾಡಲಾಗುತ್ತದೆ ಎಂದು ಪ್ರಧಾನಿ ಕಚೇರಿ ತಿಳಿಸಿತ್ತು.

ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಕೂಡ ಕೊವಿಡ್ ನಿಯಂತ್ರಣ ಕೆಲಸಕ್ಕೆ ಒಬ್ಬರು ಹಿರಿಯ ಸಿಬ್ಬಂದಿಯ ಅಡಿಯಲ್ಲಿ ಕೆಲಸಕ್ಕೆ ನಿಯೋಜನೆ ಮಾಡಲಾಗುತ್ತದೆ. ಅಲ್ಲದೇ ಬಿಎಸ್​ಸಿ ಅಥವಾ ಜಿಎನ್​ಎಮ್​ ಪದವೀದರ ನರ್ಸ್​ಗಳನ್ನು ಪೂರ್ಣ ಕೊವಿಡ್ ಕರ್ತವ್ಯಕ್ಕೆ ಹಿರಿಯ ವೈದ್ಯರು ಅಥವಾ ನರ್ಸ್​ಗಳ ಜಿತೆ ಬಳಸಿಕೊಳ್ಳಲಾಗುತ್ತದೆ ಎಂದು ಪ್ರಧಾನಿ ಕಚೇರಿ ತಿಳಿಸಿತ್ತು.

ಇದನ್ನೂ ಓದಿ: Work From Home: ತನ್ನ ಉದ್ಯೋಗಿಗಳಿಗೆ ಶಾಶ್ವತವಾಗಿ ವರ್ಕ್ ಫ್ರಂ ಹೋಂ ಅವಕಾಶ ನೀಡಿದ ಫೇಸ್​ಬುಕ್

ಕೊವಿಡ್ ಮಾರ್ಗಸೂಚಿ ಪುನರ್​ಪರಿಶೀಲಿಸಿದ ಡಿಜಿಎಚ್ಎಸ್: 5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ

(PIL dismissed against questioning of NEET 2021 postponement decision in Karnataka High Court)