Second PUC Exam 2022 Time Table: ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಘೋಷಣೆ
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2022 ವೇಳಾಪಟ್ಟಿ: ಏಪ್ರಿಲ್ 18 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ ನಡೆಯಲಿದೆ. ಏಪ್ರಿಲ್ 20 ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ, ಏಪ್ರಿಲ್ 22 ರಂದು ತರ್ಕಶಾಸ್ತ್ರ ಪರೀಕ್ಷೆ, ಏಪ್ರಿಲ್ 23 ರಂದು ಮನಃಶಾಸ್ತ್ರ, ಕೆಮಿಸ್ಟ್ರಿ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ.
ಬೆಂಗಳೂರು: ಏಪ್ರಿಲ್ 16 ರಿಂದ ಮೇ 6ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿರುವ ಬಗ್ಗೆ ಘೋಷಣೆ ಮಾಡಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ದಿನಾಂಕ ಘೋಷಣೆ ಮಾಡಲಾಗಿದೆ. ಪ್ರಕಟಣೆಯಂತೆ ಏಪ್ರಿಲ್ 16 ರಂದು ಗಣಿತ ವಿಷಯದ ಪರೀಕ್ಷೆ, ಏಪ್ರಿಲ್ 18 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ ನಡೆಯಲಿದೆ. ಏಪ್ರಿಲ್ 20 ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ, ಏಪ್ರಿಲ್ 22 ರಂದು ತರ್ಕಶಾಸ್ತ್ರ ಪರೀಕ್ಷೆ, ಏಪ್ರಿಲ್ 23 ರಂದು ಮನಃಶಾಸ್ತ್ರ, ಕೆಮಿಸ್ಟ್ರಿ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ.
ಏಪ್ರಿಲ್ 25 ರಂದು ಅರ್ಥಶಾಸ್ತ್ರ ಪರೀಕ್ಷೆ, ಏಪ್ರಿಲ್ 26 ರಂದು ಹಿಂದಿ ಭಾಷಾ ಪರೀಕ್ಷೆ, ಏಪ್ರಿಲ್ 28 ರಂದು ಕನ್ನಡ ಭಾಷಾ ಪರೀಕ್ಷೆ, ಏಪ್ರಿಲ್ 30 ರಂದು ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್ ಪರೀಕ್ಷೆ ನಡೆಯಲಿದೆ. ಮೇ 2 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ, ಮೇ 4 ರಂದು ಇಂಗ್ಲಿಷ್ ಭಾಷಾ ಪರೀಕ್ಷೆ, ಮೇ 6 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ ಪರೀಕ್ಷೆ ನಡೆಯಲಿದೆ. ಏಪ್ರಿಲ್ 16 ರಿಂದ ಮೇ 6ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಪ್ರಕಟ ಮಾಡಲಾಗಿದೆ.
ಪರೀಕ್ಷಾ ವೇಳಾಪಟ್ಟಿ ಹೀಗಿದೆ:
- ಏಪ್ರಿಲ್ 16 ರಂದು ಗಣಿತ ವಿಷಯ
- ಏಪ್ರಿಲ್ 18 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
- ಏಪ್ರಿಲ್ 20 ರಂದು ಇತಿಹಾಸ, ಭೌತಶಾಸ್ತ್ರ
- ಏಪ್ರಿಲ್ 22 ರಂದು ತರ್ಕಶಾಸ್ತ್ರ
- ಏಪ್ರಿಲ್ 23 ರಂದು ಮನಃಶಾಸ್ತ್ರ, ಕೆಮಿಸ್ಟ್ರಿ
- ಏಪ್ರಿಲ್ 25 ರಂದು ಅರ್ಥಶಾಸ್ತ್ರ
- ಏಪ್ರಿಲ್ 26 ರಂದು ಹಿಂದಿ ಭಾಷಾ ಪರೀಕ್ಷೆ
- ಏಪ್ರಿಲ್ 28 ರಂದು ಕನ್ನಡ ಭಾಷಾ ಪರೀಕ್ಷೆ
- ಏಪ್ರಿಲ್ 30 ರಂದು ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್
- ಮೇ 2 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
- ಮೇ 4 ರಂದು ಇಂಗ್ಲಿಷ್ ಭಾಷಾ ಪರೀಕ್ಷೆ
- ಮೇ 6 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ ಪರೀಕ್ಷೆ
ಇದನ್ನೂ ಓದಿ: ಅಲ್ಸೋಮ್ ದ್ವೀಪದ ಮೇಲೆ ಸತತವಾಗಿ ಕ್ಷಿಪಣಿ ಪರೀಕ್ಷೆ ನಡೆಸಿದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್
ಇದನ್ನೂ ಓದಿ: NEET: 18 ವರ್ಷದ ಮಗಳೊಂದಿಗೆ ನೀಟ್ ಪರೀಕ್ಷೆ ಬರೆದು ಎಂಬಿಬಿಎಸ್ ಸೀಟು ಗಿಟ್ಟಿಸಿಕೊಂಡ ಅಪ್ಪ
Published On - 2:38 pm, Tue, 8 February 22