ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ (Bhagavad Gita) ಬೋಧನೆ ಮಾಡಲು ಶಿಕ್ಷಣ ಇಲಾಖೆ (Education Department) ನಿರ್ಧರಿಸಿದ್ದು, ಶಿಕ್ಷಣ ಇಲಾಖೆಯ ಈ ನಿರ್ಧಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ಕಿಡಿಕಾರಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಭಗವದ್ಗೀತೆ ಜೊತೆಗೆ ರಾಮಾಯಣ, ಮಹಾಭಾರತ ಬೋಧನೆಗೂ ನಿರ್ಧರಿಸಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಖಾಸಗಿ ಶಾಲೆಗಳ ಒಕ್ಕೂಟ, ಎಲ್ಲರಿಗೂ ಕಡ್ಡಾಯವಾಗಿ ಭಗವದ್ಗೀತೆ ಕಲಿಕೆಯಲು ಒತ್ತಾಯಿಸಬಾರದು ಎಂದು ಆಕ್ರೋಶ ಹೊರಹಾಕಿದೆ.
ಭಗವದ್ಗೀತೆ ಜೊತೆಗೆ ಬೈಬಲ್, ಕುರಾನ್ಗೂ ಅವಕಾಶ ನೀಡಲಿ. ಕುರಾನ್, ಬೈಬಲ್ಗೆ ಯಾಕೆ ಅವಕಾಶವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಗುಜರಾತ್ ಮಾದರಿಯಲ್ಲಿ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ಈಗಾಗಲೇ ನಿರ್ಧಾರವಾಗಿದ್ದು, ಖಾಸಗಿ ಶಾಲೆಗಳ ಒಕ್ಕೂಟ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.
ಸರ್ಕಾರ ಈಗಾಗಲೇ ಭಗವದ್ಗೀತೆಯ ಬೋಧನೆಗೆ ಸಂಬಂಧ ಸಮಿತಿ ರಚನೆ ಮಾಡಿದೆ. ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು ಯಾವ ತರಗತಿಯಿಂದ ಯಾವ ತರಗತಿಗಳಿಗೆ ಯಾವ ಮಾದರಿಯಲ್ಲಿ ಭಗವದ್ಗೀತೆ ಭೋದನೆ ಮಾಡಬೇಕು? ಯಾವ ರೀತಿಯಲ್ಲಿ ನೈತಿಕ ಶಿಕ್ಷಣ ನೀಡಬೇಕು ಅಂತಾ ಸಮಿತಿ ಮಾಹಿತಿ ನೀಡಲಿದೆ. ಪ್ರತ್ಯೇಕವಾದ ಪಠ್ಯ ರಚನೆಯ ಮೂಲಕ ಮಕ್ಕಳಿಗೆ ಗೀತೆ ಭೋದನೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.
Sanatana Dharma Hindu Religion and Ethics ಬುಕ್ ಮಾಡಲ್ ಅಧ್ಯಯನಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಳ್ಳೂತ್ತಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ 6-12 ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಭೋದನೆಗೆ ಪ್ಲಾನ್ ಮಾಡಿದೆ.
ಇದನ್ನೂ ಓದಿ
ಒಂದೇ ಒಂದು ಫೋಟೋದಿಂದ ರಮ್ಯಾ ಅಭಿಮಾನಿಗಳ ಮನಸ್ಸಿನಲ್ಲಿ ಕೊರೆಯುತ್ತಿದೆ ಹತ್ತು ಹಲವು ಪ್ರಶ್ನೆ
Petrol Price Today: ಇಂದೂ ಕೂಡಾ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ ನೋಡಿ
Published On - 10:00 am, Mon, 9 May 22