ಸರಳೀಕೃತ ಪಿಯು ಪರೀಕ್ಷೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಚಿಂತನೆ
ಕೊರೊನಾ ಹಿನ್ನೆಲೆಯಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಂಪೂರ್ಣ ಪಠ್ಯ ಬೋಧನೆ ಸರಿಯಾಗಿ ನಡೆದಿಲ್ಲ. ಹೀಗಾಗಿ ಸರಳೀಕೃತ ಪರೀಕ್ಷೆಗೆ ಹೆಚ್ಚಿನ ಆದ್ಯತೆ ನೀಡಲು ಶಿಕ್ಷಣ ಇಲಾಖೆ ಯೋಜನೆ ರೂಪಿಸಿದೆ.
ರಾಜ್ಯದಲ್ಲಿ ಕೋವಿಡ್ ಆರ್ಭಟ ಹಿನ್ನೆಲೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸರಳೀಕೃತ ಪಿಯು ಪರೀಕ್ಷೆ ನಡೆಸಲು ಮುಂದಾಗಿದೆ. ವಿದ್ಯಾರ್ಥಿಗಳಿಗೆ ಪಿಯು ಬೋರ್ಡ್ನಿಂದ ಕೊಂಚ ರಿಲೀಫ್ ಸಿಕ್ಕಂತ್ತಾಗಿದೆ. ನಿನ್ನೆಯಷ್ಟೇ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯೂ ವಿದ್ಯಾರ್ಥಿಗಳ ಅನಕೂಲ ದೃಷ್ಟಿಯಿಂದ ಸರಳ ಮಾದರಿಯಲ್ಲಿ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ.
ಕೊರೊನಾ ಹಿನ್ನೆಲೆಯಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಂಪೂರ್ಣ ಪಠ್ಯ ಬೋಧನೆ ಸರಿಯಾಗಿ ನಡೆದಿಲ್ಲ. ಹೀಗಾಗಿ ಸರಳೀಕೃತ ಪರೀಕ್ಷೆಗೆ ಹೆಚ್ಚಿನ ಆದ್ಯತೆ ನೀಡಲು ಶಿಕ್ಷಣ ಇಲಾಖೆ ಯೋಜನೆ ರೂಪಿಸಿದೆ. ಪಿಯು ಪರೀಕ್ಷಾ ವಿಧಾನದಲ್ಲಿ ಬದಲಾವಣೆ ಮಾಡಲು ಮುಂದಾಗಿರುವ ಪದವಿಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಅನುಕೂಲ ದೃಷ್ಟಿಯಿಂದ ಹೆಚ್ಚಾಗಿ ಬಹುಆಯ್ಕೆಯ ಪ್ರಶ್ನೆಗಳು ನೀಡಲು ಚಿಂತನೆ ನಡೆಸಿದೆ.
ಇನ್ನೂ ಪಿಯು ಪ್ರಥಮ ಹಾಗೂ ದ್ವಿತೀಯ ಪರೀಕ್ಷಾ ಪಠ್ಯದಲ್ಲಿಯೂ ಕಡಿತ ಮಾಡಿರೊ ಬೋರ್ಡ್ ಭಾಷಾ ವಿಷಯದಲ್ಲಿ ಶೇ 30ರಷ್ಟು ಪರೀಕ್ಷಾ ಪಠ್ಯ ಕಡಿತಗೊಳಿಸಿದ್ದು, ಕೇವಲ 70% ರಷ್ಟು ಪಠಕ್ಕೆ ಮಾತ್ರ ಪಿಯು ಪ್ರಥಮ ಹಾಗೂ ದ್ವೀತಿಯ ಪರೀಕ್ಷೆ ನಡೆಯಲಿದೆ.
ಇನ್ನೂ ನಿನ್ನೆಯಷ್ಟೇ ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯೂ ಬಿಡುಗಡೆ ಮಾಡಿದೆ. ಆ ಪ್ರಕಾರ ಏಪ್ರಿಲ್ 16ರಿಂದ ಮೇ 4ರವರೆ ಪಿಯು ವಾಷಿರ್ಕ ಪರೀಕ್ಷೆ ನಡೆಯಲಿದೆ. ಏಪ್ರಿಲ್ 14 ಗಣಿತ, ಏಪ್ರಿಲ್ 18 ರಾಜ್ಯಶಾಸ್ತ್ರ, ಸಂಖಾಶಾಸ್ತ್ರ, ಏ.20ರಂದು ಇತಿಹಾಸ, ಭೌತಶಾಸ್ತ್ರ, ಏ22 ತರ್ಕಶಾಸ್ತ್ರ, ಏ23ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಏ.25 ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದೆ.
ಇನ್ನೂ ಏ.26ರಂದು ಹಿಂದಿ, ಏ.28 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಏ.29 ಕನ್ನಡ, ಏ.30ರಂದು ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಮೇ 2ರಂದು ಭೂಗೋಳಶಾಸ್ತ್ರ ಹಾಗೂ ಜೀವಶಾಸ್ತ್ರ, ಮೇ 4ರಂದು ಇಂಗ್ಲೀಷ್ ವಿಷಯದ ಪರೀಕ್ಷೆ ನಡೆಯಲಿದೆ.
ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಜ.6 ಸಂಜೆ ಪ್ರಕಟಿಸಿತ್ತು. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ / ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ.
ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯಕ್ಕೂ ಪ್ರಶ್ನಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ. ವೇಳಾಪಟ್ಟಿಗೆ ಅಭ್ಯರ್ಥಿಗಳು / ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್ಸೈಟ್ನಲ್ಲಿ ಸಲ್ಲಿಸಬಹುದು.
ಇದನ್ನೂ ಓದಿ: