ಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 17 ಆರೋಪಿಗಗಳು ಖುಲಾಸೆ
ಭಾರೀ ಸದ್ದು ಮಾಡಿದ್ದ 2015-16ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಆರೋಪಿಗಳು ಖುಲಾಸೆಗೊಂಡಿದ್ದಾರೆ. ಈ ಪ್ರಕರಣ ನಡೆದಿದ್ಯಾವಾಗ? ಹಿನ್ನೆಲೆ ಈ ಕೆಳಗಿನಂತಿದೆ.
ಬೆಂಗಳೂರು, (ಏಪ್ರಿಲ್ 26): 2015-16ನೇ ಸಾಲಿನ ಪಿಯು ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ(PUC Chemistry question paper leaked case) ಸಂಬಂಧಿಸಿದಂತೆ 17 ಆರೋಪಿಗಳನ್ನು ಖುಲಾಸೆಗೊಳಿಸಿ ಬೆಂಗಳೂರು ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. 2016ರ ಮಾರ್ಚ್ 21ರಂದು ದ್ವಿತೀಯ ಪಿಯು ರಸಾಯನಶಾಸ್ತ್ರ ಪರೀಕ್ಷೆ ನಡೆದಿತ್ತು. ಅದೇ ದಿನ ದಿನ ಬೆಳಗ್ಗೆ 7.30ಕ್ಕೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿತ್ತು. ಈ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಪ್ರಕರಣ ಸಿಐಡಿಗೆ ವರ್ಗಾವಣೆಗೊಂಡಿತ್ತು. ಈ ಪ್ರಕರಣವನ್ನು ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಒಟ್ಟು 18 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಆದ್ರೆ, ವಿಚಾರಣಾ ಹಂತದಲ್ಲಿಯೇ ಓರ್ವ ಆರೋಪಿ ಸಾವನ್ನಪ್ಪಿದ್ದ. ಇನ್ನುಳಿದ ಆರೋಪಿಗಳನ್ನು ಇದೀಗ ನ್ಯಾಯಾಲಯದ ಇಂದು(ಏಪ್ರಿಲ್ 25) ಖುಲಾಸೆಗೊಳಿಸಿದೆ.
ದ್ವೀತಿಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ವಿಧಾನ ಸಭೆಯ ಉಭಯ ಸದನಗಳಲ್ಲಿ ಮಂಗಳವಾರ ಪ್ರತಿಧ್ವನಿಸಿತ್ತು. ಸರಕಾರ ವಿಧಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದರು. ಕಾಂಗ್ರೆಸ್ ಶಾಸಕ ರಫೀಕ್ ಅಹಮದ್ ವಿಷಯ ಪ್ರಸ್ತಾಪಿಸಿದ್ದರು. ಅದಕ್ಕೆ ಧ್ವನಿಗೂಡಿಸಿದ್ದ ಬಿಜೆಪಿಯ ಸದಸ್ಯರಾದ ಸುರೇಶ್‌ಕುಮಾರ್ ಹಾಗೂ ಸಿಟಿ ರವಿ ‘‘ಸರಕಾರ ಏನು ಮಾಡುತ್ತಿದೆ? ಪ್ರತಿವರ್ಷ ಈ ರೀತಿ ಪ್ರಶ್ನೆ ಪತ್ರಿಕೆ ಪ್ರಕರಣಗಳು ನಡೆಯುತ್ತಲೇ ಇವೆ. ಆದರೂ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿಲ್ಲ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಕಾರ್ಯವೈಖರಿಯೇ ಸಂಶಯಾಸ್ಪದವಾಗಿದೆ ಎಂದು ದೂರಿದ್ದರು.
ಇದನ್ನೂ ಓದಿ: CET Exam: ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆ: ಕಂಗಾಲಾದ ವಿದ್ಯಾರ್ಥಿಗಳು, ಪೋಷಕರು
ಆರು ತಿಂಗಳಲ್ಲಿ ಮೂವರು ಪದವಿ ಪೂರ್ವ ಶಿಕ್ಷಣ ಇಲಾಖೆ ಆಯುಕ್ತರು ಬದಲಾಗಿದ್ದಾರೆ. ನೀವು ಯಾರ ಮೇಲೆ ಹೊಣೆ ಹೊರಿಸುತ್ತೀರಾ? ಪ್ರಶ್ನೆ ಪತ್ರಿಕೆ ಸೋರಿಕೆಗೆ ಪಿಯು ಮಂಡಳಿ ಅಧಿಕಾರಿಗಳೇ ಕಾರಣ. ಅವರು ಶಾಮೀಲಾಗದಿದ್ದರೆ ಪ್ರಶ್ನೆ ಪತ್ರಿಕೆ ಸೋರಿಕೆ ಆಗ್ತಾ ಇರಲಿಲ್ಲ. ಒಂದೋ ಇದಕ್ಕೆ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕು, ಇಲ್ಲವೇ ಸಚಿವ ಕಿಮ್ಮನೆ ರತ್ನಾಕರ ಅವರೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ