Sign In

By signing in or creating an account, you agree with Associated Broadcasting Company's Terms & Conditions and Privacy Policy.

Puc Exam-3 Results: ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ-03 ಫಲಿತಾಂಶ, ಚೆಕ್‌ ಮಾಡುವ ವಿಧಾನ, ಲಿಂಕ್ ಇಲ್ಲಿದೆ

2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-03 ಫಲಿತಾಂಶವನ್ನು ಜುಲೈ 16ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಲಿದೆ. ಇಲಾಖೆ ವೆಬ್​ಸೈಟ್ http//karresults.nic.in ನಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಲಭ್ಯವಿರಲಿದೆ. ಜೂನ್ 24ರಿಂದ ಜುಲೈ 5ರವರೆಗೆ ಪರೀಕ್ಷೆ-03 ನಡೆದಿತ್ತು.

Puc Exam-3 Results: ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ-03 ಫಲಿತಾಂಶ, ಚೆಕ್‌ ಮಾಡುವ ವಿಧಾನ, ಲಿಂಕ್ ಇಲ್ಲಿದೆ
ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ-03 ಫಲಿತಾಂಶ, ಚೆಕ್‌ ಮಾಡಲು ವಿಧಾನ, ಲಿಂಕ್ ಇಲ್ಲಿದೆ
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on:Jul 15, 2024 | 6:19 PM

ಬೆಂಗಳೂರು, ಜುಲೈ 15: ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯನಿರ್ಣಯ ಮಂಡಳಿ ನಡೆಸಿದ್ದ 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 03 ಫಲಿತಾಂಶವನ್ನು (Puc Exam-3 Results) ನಾಳೆ ಪ್ರಕಟಿಸಲಿದೆ. ಜುಲೈ 16ರ ಮಧ್ಯಾಹ್ನ 3 ಗಂಟೆಗೆ ಅಧಿಕೃತ http//karresults.nic.in ವೆಬ್​​ ಸೈಟ್​ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷೆ ಐಎಎಸ್​ ಅಧಿಕಾರಿ ಎನ್​ ಮಂಜುಶ್ರೀ ತಿಳಿಸಿದ್ದಾರೆ.

ಜೂನ್​ 24ರಿಂದ ಜುಲೈ 05ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-03 ನಡೆಸಲಾಗಿತ್ತು. ಕರ್ನಾಟಕದ ನಾನಾ ಜಿಲ್ಲೆ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಬಳಿಕ ಮೌಲ್ಯಮಾಪನವೂ ಮಾಡಲಾಗಿತ್ತು ಇದೀಗ ನಾಳೆ ಫಲಿತಾಂಶ ಪ್ರಕಟಿಸಲಾಗುತ್ತಿದೆ.

ಫಲಿತಾಂಶ ನೋಡುವುದು ಹೇಗೆ?

  • ಮೊದಲು, ಅಧಿಕೃತ ಕೆಎಸ್​​​​ಇಎಬಿ (KSEAB) ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಇತ್ತೀಚಿನ ಸುದ್ದಿ ವಿಭಾಗದಲ್ಲಿ 2ನೇ ಪಿಯುಸಿ ಪರೀಕ್ಷೆ 3 ಫಲಿತಾಂಶ ಲಿಂಕ್ ಮೇಲೆ  ಕ್ಲಿಕ್​ ಮಾಡಿ.
  • ನೋಂದಣಿ ಸಂಖ್ಯೆ ಅಥವಾ ಜನ್ಮದಿನಾಂಕ ಮೂಲಕ ಪೋರ್ಟಲ್‌ಗೆ ಲಾಗ್ ಇನ್ ಮಾಡಿ.
  • ಒಮ್ಮೆ ನೀವು ವಿವರಗಳನ್ನು ಸಲ್ಲಿಸಿದ ಬಳಿಕ ಕ್ಯಾಪ್ಚಾವನ್ನು ನಮೂದಿಸಿ ಸಬ್​​ಮಿಟ್​​ ಬಟನ್ ಅನ್ನು ಕ್ಲಿಕ್​ ಮಾಡಿ.
  • ನಿಮ್ಮ 2ನೇ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶಗಳು ನಿಮ್ಮ ಪರದೆಯ ಮೇಲೆ ಗೋಚರಿಸುತ್ತದೆ.
  • ವೆಬ್‌ಸೈಟ್‌ನಿಂದ ತಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಕೊಳ್ಳಿ.

ಇದನ್ನೂ ಓದಿ: Karnataka SSLC Exam Result-2: SSLC ಪರೀಕ್ಷೆ-2 ಫಲಿತಾಂಶ ಇಂದು ಪ್ರಕಟ, ರಿಸಲ್ಟ್​ ನೋಡವುದು ಹೇಗೆ? ಇಲ್ಲಿದೆ ವಿವರ

ತಮ್ಮ ಬಂದ ಅಂಕಗಳಿಂದ ಅತೃಪ್ತರಾದ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಕಬಹುದಾಗಿದೆ. ಆದರೆ ಅದಕ್ಕೂ ಮೊದಲು ಅರ್ಜಿ ಸಲ್ಲಿಸಬೇಕು. ಮರುಮೌಲ್ಯಮಾಪನ ಮತ್ತು ಮರು ಮೊತ್ತವನ್ನು ಮೇ 22 ರಿಂದ 25 ರವರೆಗೆ ಅವಕಾಶ ನೀಡಲಾಗಿತ್ತು.

ಇದನ್ನೂ ಓದಿ: Karnataka SSLC Exam Result-2: ಎಸ್​ಎಸ್​ಎಲ್​ಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

ಅರ್ಜಿಯೊಂದಿಗೆ ವಿದ್ಯಾರ್ಥಿಗಳು ಒಂದು ವಿಷಯಕ್ಕೆ 140 ರೂ. ಎರಡು ವಿಷಯಗಳಿಗೆ ರೂ. 270 ಮತ್ತು ಮೂರು ಅಥವಾ ಹೆಚ್ಚಿನ ವಿಷಯಗಳಿಗೆ 400. ಆದಾಗ್ಯೂ, ನಿಯಮಿತ ಮತ್ತು ಖಾಸಗಿ ನೋಂದಾಯಿತ ಎಸ್​​ಸಿ, ಎಸ್​ಟಿ ಮತ್ತು ಸಿ-1 ವಿದ್ಯಾರ್ಥಿಗಳು ಕೇವಲ 1 ರೂ ಪಾವತಿಸಬೇಕಾಗಿತ್ತು. ಒಂದು ವಿಷಯಕ್ಕೆ ಮೊದಲ ಬಾರಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಶುಲ್ಕ 175 ರೂ. ವಿಧಿಸಲಾಗಿತ್ತು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:43 pm, Mon, 15 July 24

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು