PUC Exam Time Table: ದ್ವೀತಿಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ; ಏಪ್ರಿಲ್ 16ರಿಂದ ಮೇ 4ರವರೆಗೆ ಪಿಯು ವಾರ್ಷಿಕ ಪರೀಕ್ಷೆ
ಏಪ್ರಿಲ್ 14 ಗಣಿತ, ಏಪ್ರಿಲ್ 18 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಏ.20ರಂದು ಇತಿಹಾಸ, ಭೌತಶಾಸ್ತ್ರ, ಏಪ್ರಿಲ್ 22 ತರ್ಕಶಾಸ್ತ್ರ, ಏ.23ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಏ.25 ಅರ್ಥಶಾಸ್ತ್ರ, ಏ.26ರಂದು ಹಿಂದಿ, ಏಪ್ರಿಲ್ 28 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಏ.29 ಕನ್ನಡ, ಏ.30ರಂದು ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಮೇ 2ರಂದು ಭೂಗೋಳ ಶಾಸ್ತ್ರ ಹಾಗೂ ಜೀವಶಾಸ್ತ್ರ ಪರೀಕ್ಷೆ, ಮೇ 4ರಂದು ಇಂಗ್ಲಿಷ್ ವಿಷಯದ ಪರೀಕ್ಷೆ ನಡೆಯಲಿದೆ.
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ (PUC Board) 2021-22 ನೇ ಸಾಲಿನ ದ್ವೀತಿಯ ಪಿಯುಸಿ (Second PUC)ಯ ತಾತ್ಕಾಲಿಕ ವೇಳಾಪಟ್ಟಿ (Exam Timetable) ಬಿಡುಗಡೆ ಮಾಡಿದೆ. ಆ ಪ್ರಕಾರ ಏಪ್ರಿಲ್ 16ರಿಂದ ಮೇ 4ರವರೆಗೆ ಪಿಯು ವಾರ್ಷಿಕ ಪರೀಕ್ಷೆ ನಡೆಯಲಿದೆ. ಏಪ್ರಿಲ್ 14 ಗಣಿತ, ಏಪ್ರಿಲ್ 18 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಏ.20ರಂದು ಇತಿಹಾಸ, ಭೌತಶಾಸ್ತ್ರ, ಏಪ್ರಿಲ್ 22 ತರ್ಕಶಾಸ್ತ್ರ, ಏ.23ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಏ.25 ಅರ್ಥಶಾಸ್ತ್ರ ಪರೀಕ್ಷೆ ನಡೆಲಿದೆ.
ಇನ್ನೂ ಏ.26ರಂದು ಹಿಂದಿ, ಏಪ್ರಿಲ್ 28 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಏ.29 ಕನ್ನಡ, ಏ.30ರಂದು ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಮೇ 2ರಂದು ಭೂಗೋಳ ಶಾಸ್ತ್ರ ಹಾಗೂ ಜೀವಶಾಸ್ತ್ರ ಪರೀಕ್ಷೆ, ಮೇ 4ರಂದು ಇಂಗ್ಲಿಷ್ ವಿಷಯದ ಪರೀಕ್ಷೆ ನಡೆಯಲಿದೆ.
ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಜ.6 ಸಂಜೆ ಪ್ರಕಟಿಸಿತ್ತು. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ / ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ.
ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯಕ್ಕೂ ಪ್ರಶ್ನಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ. ವೇಳಾಪಟ್ಟಿಗೆ ಅಭ್ಯರ್ಥಿಗಳು / ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್ಸೈಟ್ನಲ್ಲಿ ಸಲ್ಲಿಸಬಹುದು.
ಇದನ್ನೂ ಓದಿ: ICAI CA January Exam: ಐಸಿಎಐ ಸಿಎ ಜನವರಿಯ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕಡೆಯ ದಿನ; ಸಂಪೂರ್ಣ ಮಾಹಿತಿ ಇಲ್ಲಿದೆ
SSLC Exam Time Table: ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ, ಪೋಷಕರ ಆಕ್ಷೇಪಕ್ಕೆ ಅವಕಾಶ
Published On - 7:58 pm, Tue, 18 January 22