ಕರ್ನಾಟಕಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರು, ಈ ಶೈಕ್ಷಣಿಕ ವರ್ಷದಲ್ಲೇ ತರಗತಿ ಆರಂಭ

ಕರ್ನಾಟಕಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರಾಗಿದ್ದು, ಈ ಶೈಕ್ಷಣಿಕ ವರ್ಷದಲ್ಲೇ ತರಗತಿ ಆರಂಭವಾಗಲಿವೆ. ಈ ಬಗ್ಗೆ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದು, ಅದು ಈ ಕೆಳಗಿನಂತಿದೆ.

ಕರ್ನಾಟಕಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರು, ಈ ಶೈಕ್ಷಣಿಕ ವರ್ಷದಲ್ಲೇ ತರಗತಿ ಆರಂಭ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
ರಮೇಶ್ ಬಿ. ಜವಳಗೇರಾ
|

Updated on:Feb 28, 2023 | 3:05 PM

ಬೆಂಗಳೂರು: ಕರ್ನಾಟಕಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ(Rashtriya Raksha University) ಮಂಜೂರಾಗಿದ್ದು, ಶಿವಮೊಗ್ಗದಲ್ಲಿ (Shivamogga) ರಕ್ಷಾ  ವಿಶ್ವವಿದ್ಯಾಲಯ ಆರಂಭವಾಗಲಿದೆ.  ಸದ್ಯಕ್ಕೆ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ಈ ಶೈಕ್ಷಣಿಕ ವರ್ಷದದಿಂದಲೇ ತರಗತಿ ಆರಂಭಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (araga jnanendra) ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Exam Stress: ಪರೀಕ್ಷೆಯ ಒತ್ತಡವನ್ನು ನಿವಾರಿಸುವುದು ಹೇಗೆ? ಇಲ್ಲಿದೆ ಸಖತ್ ಟಿಪ್ಸ್

ಈ ಬಗ್ಗೆ ಇಂದು (ಫೆ.28) ಮಾಹಿತಿ ನೀಡಿರುವ ಆರಗ ಜ್ಞಾನೇಂದ್ರ, ಕರ್ನಾಟಕಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರಾಗಿದೆ. 2 ತಿಂಗಳ ಹಿಂದೆ ಎಸಿಎಸ್ ಅಹಮದಾಬಾದ್ ವಿವಿಗೆ ತೆರಳಿದ್ದೆವು. ನೀವು ಅಪೇಕ್ಷೆಪಟ್ಟರೆ ವಿವಿ ಆರಂಭಿಸುವುದಾಗಿ ಅವರು ಹೇಳಿದ್ದರು. ಅದರಂತೆ ಶಿವಮೊಗ್ಗದಲ್ಲಿ ವಿಶ್ವವಿದ್ಯಾಲಯ ಆರಂಭವಾಗಲಿದೆ ಎಂದರು.

ಈ ಶೈಕ್ಷಣಿಕ ವರ್ಷದಲ್ಲೇ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ತರಗತಿ ಆರಂಭಿಸಲಾಗುವುದು. ಕ್ಯಾಂಪಸ್​ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ನವಿಲೆ ಬಳಿ 8 ಎಕರೆ ಜಮೀನು ಮಂಜೂರು ಮಾಡಿಕೊಟ್ಟಿದ್ದಾರೆ. ಡಿಪ್ಲೊಮಾ, ಡಿಗ್ರಿಗೆ ಪಿಯುಸಿ ಅರ್ಹತೆ ಹೊಂದಿರಬೇಕು. ಇನ್ನು ಪಿಜಿಗೆ ಡಿಗ್ರಿ ಪಡೆದಿರಬೇಕು. ಮಿಲಿಟರಿ, ಆಂತರಿಕ ಭದ್ರತಾ ವಿಭಾಗದ ಕೆಲಸದ ಬಗ್ಗೆ ಬೋಧನೆ ಮಾಡಲಾಗುತ್ತದೆ. ಮೆರಿಟ್ ಆಧಾರದ ಮೇಲೆ ಇಲ್ಲಿ ಪ್ರವೇಶಾತಿ ನಡೆಯಲಿದೆ ಎಂದು ವಿವರಿಸಿದರು.

ಯಾವೆಲ್ಲಾ ಕೋರ್ಸ್​ಗಳು ಲಭ್ಯ?

  • ಡಿಪ್ಲೋಮಾ ಇನ್ ಸೈನ್ಸ್
  • ಕಾರ್ಪೊರೇಟ್ ಸೆಕ್ಯೂರಿಟಿ ಮ್ಯಾನೇಜ್ಮೆಂಟ್
  • ಡಿಪ್ಲೋಮಾ ಇನ್ ಕ್ರಿಮಿನಲ್ ಇನ್ವೆಸ್ಟಿಗೇಶನ್
  • ಪಿಜಿ ಡಿಪ್ಲೋಮಾ ಸೈಬರ್ ಸೆಕ್ಯೂರಿಟಿ, ಸೈಬರ್ ಲಾ
  • ರೋಡ್ ಟ್ರಾಫಿಕ್ ಸೇಫ್ಟಿ ಮ್ಯಾನೇಜ್ಮೆಂಟ್
  • ಫಿಜಿಕಲ್​ ಫಿಟ್​ನೆಸ್ ಮ್ಯಾನೇಜ್ಮೆಂಟ್

ಪೊಲೀಸ್ ಇಲಾಖೆ ಹಾಗೂ ಸಶಸ್ತ್ರ ಪಡೆಗಳ ತರಬೇತಿ ಮತ್ತು ಕರ್ನಾಟಕ ಪೊಲೀಸ್ , ಸರ್ಕಾರಿ ಸಂಶೋಧನೆ ವಿಭಾಗಕ್ಕೆ ಸೇರಲು ಬೇಕಾದ ತರಬೇತಿಯನ್ನು ಯುವಕರಿಗೆ ನೀಡಲಾಗುತ್ತದೆ.

ರಕ್ಷಣಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಮಾಡಲು ಬಯಸುವ ಯುವಕರಿಗೆ ಇದು ಉತ್ತಮವಾಗಿದೆ.

ಇನ್ನಷ್ಟು ಎಜುಕೇಶನ್ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:59 pm, Tue, 28 February 23

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್