ಬೆಂಗಳೂರು: ಕರ್ನಾಟಕಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ(Rashtriya Raksha University) ಮಂಜೂರಾಗಿದ್ದು, ಶಿವಮೊಗ್ಗದಲ್ಲಿ (Shivamogga) ರಕ್ಷಾ ವಿಶ್ವವಿದ್ಯಾಲಯ ಆರಂಭವಾಗಲಿದೆ. ಸದ್ಯಕ್ಕೆ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ಈ ಶೈಕ್ಷಣಿಕ ವರ್ಷದದಿಂದಲೇ ತರಗತಿ ಆರಂಭಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (araga jnanendra) ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Exam Stress: ಪರೀಕ್ಷೆಯ ಒತ್ತಡವನ್ನು ನಿವಾರಿಸುವುದು ಹೇಗೆ? ಇಲ್ಲಿದೆ ಸಖತ್ ಟಿಪ್ಸ್
ಈ ಬಗ್ಗೆ ಇಂದು (ಫೆ.28) ಮಾಹಿತಿ ನೀಡಿರುವ ಆರಗ ಜ್ಞಾನೇಂದ್ರ, ಕರ್ನಾಟಕಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರಾಗಿದೆ. 2 ತಿಂಗಳ ಹಿಂದೆ ಎಸಿಎಸ್ ಅಹಮದಾಬಾದ್ ವಿವಿಗೆ ತೆರಳಿದ್ದೆವು. ನೀವು ಅಪೇಕ್ಷೆಪಟ್ಟರೆ ವಿವಿ ಆರಂಭಿಸುವುದಾಗಿ ಅವರು ಹೇಳಿದ್ದರು. ಅದರಂತೆ ಶಿವಮೊಗ್ಗದಲ್ಲಿ ವಿಶ್ವವಿದ್ಯಾಲಯ ಆರಂಭವಾಗಲಿದೆ ಎಂದರು.
ಈ ಶೈಕ್ಷಣಿಕ ವರ್ಷದಲ್ಲೇ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ತರಗತಿ ಆರಂಭಿಸಲಾಗುವುದು. ಕ್ಯಾಂಪಸ್ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ನವಿಲೆ ಬಳಿ 8 ಎಕರೆ ಜಮೀನು ಮಂಜೂರು ಮಾಡಿಕೊಟ್ಟಿದ್ದಾರೆ. ಡಿಪ್ಲೊಮಾ, ಡಿಗ್ರಿಗೆ ಪಿಯುಸಿ ಅರ್ಹತೆ ಹೊಂದಿರಬೇಕು. ಇನ್ನು ಪಿಜಿಗೆ ಡಿಗ್ರಿ ಪಡೆದಿರಬೇಕು. ಮಿಲಿಟರಿ, ಆಂತರಿಕ ಭದ್ರತಾ ವಿಭಾಗದ ಕೆಲಸದ ಬಗ್ಗೆ ಬೋಧನೆ ಮಾಡಲಾಗುತ್ತದೆ. ಮೆರಿಟ್ ಆಧಾರದ ಮೇಲೆ ಇಲ್ಲಿ ಪ್ರವೇಶಾತಿ ನಡೆಯಲಿದೆ ಎಂದು ವಿವರಿಸಿದರು.
ಪೊಲೀಸ್ ಇಲಾಖೆ ಹಾಗೂ ಸಶಸ್ತ್ರ ಪಡೆಗಳ ತರಬೇತಿ ಮತ್ತು ಕರ್ನಾಟಕ ಪೊಲೀಸ್ , ಸರ್ಕಾರಿ ಸಂಶೋಧನೆ ವಿಭಾಗಕ್ಕೆ ಸೇರಲು ಬೇಕಾದ ತರಬೇತಿಯನ್ನು ಯುವಕರಿಗೆ ನೀಡಲಾಗುತ್ತದೆ.
ರಕ್ಷಣಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಮಾಡಲು ಬಯಸುವ ಯುವಕರಿಗೆ ಇದು ಉತ್ತಮವಾಗಿದೆ.
ಇನ್ನಷ್ಟು ಎಜುಕೇಶನ್ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 2:59 pm, Tue, 28 February 23