4 ವರ್ಷಗಳ ನಂತರ ಪ್ರೌಢಶಾಲೆಗಳ ಖಾಲಿ ಪಿಸಿಎಂ ಹುದ್ದೆಗಳಿಗೆ ಮರು ಹೊಂದಾಣಿಕೆ

ಎಂಟನೇ ತರಗತಿ ಬೋಧನೆಗಾಗಿ ಹೊಸದಾಗಿ ನೇಮಕ ಮಾಡಿಕೊಂಡ 13,151 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹುದ್ದೆ ನಿಯೋಜಿಸಬೇಕಿರುವ ಹಿನ್ನೆಲೆಯಲ್ಲಿ ಪದವೀಧರ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ

4 ವರ್ಷಗಳ ನಂತರ ಪ್ರೌಢಶಾಲೆಗಳ ಖಾಲಿ ಪಿಸಿಎಂ ಹುದ್ದೆಗಳಿಗೆ ಮರು ಹೊಂದಾಣಿಕೆ
ಸಾಂದರ್ಭಿಕ ಚಿತ್ರImage Credit source: Teachers Magazine
Follow us
TV9 Web
| Updated By: ನಯನಾ ಎಸ್​ಪಿ

Updated on: Apr 28, 2023 | 1:36 PM

ಬೆಂಗಳೂರು: 4 ವರ್ಷಗಳ ನಂತರ ಪ್ರೌಢಶಾಲೆಗಳ (High School) ಖಾಲಿ ಪಿಸಿಎಂ (PCM) ಹುದ್ದೆಗಳಿಗೆ ಮರು ಹೊಂದಾಣಿಕೆ ಆರಂಭವಾಗಲಿದೆ. ಶಿಕ್ಷಣ ಇಲಾಖೆಯಿಂದ (Education Board) ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ (Higher Primary School) ಕಾರ್ಯನಿರ್ವಹಿಸುತ್ತಿರುವ ಪ್ರೌಢಶಾಲೆ ಸಹ ಶಿಕ್ಷಕರ (Teachers) ವೃಂದದ ತರಬೇತಿ ಹೊಂದಿದ ಪದವೀಧರ ಶಿಕ್ಷಕರ ಮರು ಹೊಂದಾಣಿಕೆಗೆ ಸೂಚನೆ ನೀಡಲಾಗಿದೆ. ಪದವೀಧರ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ.

4 ವರ್ಷಗಳಿಂದ ಶಿಕ್ಷಕರ ನೇಮಕಾತಿಗೆ ಬ್ರೇಕ್ ಬಿದಿದ್ದು ಇದೀಗ ಈ ಪಕ್ರಿಯೆಗೆ ಚಾಲನೆ ದೊರೆತಿದೆ. ಇದರಿಂದಾಗಿ ಎರಡು ಸಾವಿರಕ್ಕೂ ಅಧಿಕ ಶಿಕ್ಷಕರಿಗೆ ಅನುಕೂಲವಾಗುತ್ತದೆ. ಎಂಟನೇ ತರಗತಿಗೆ ಶೂನ್ಯ ದಾಖಲಾತಿ ಇರುವ ಸರ್ಕಾರಿ ಶಾಲೆಗಳ ಪದವೀಧರ ಶಿಕ್ಷಕರನ್ನು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಗಣಿತ ಮತ್ತು ವಿಜ್ಞಾನ ಹುದ್ದೆಗಳಿಗೆ ಮರು ಹೊಂದಾಣಿಕೆ ಮಾಡಿ ಸ್ಥಳ ನಿಯುಕ್ತಿಗೊಳಿಸುವಂತೆ ಪ್ರೌಢಶಿಕ್ಷಣ ಇಲಾಖೆ ವತಿಯಿಂದ ಡಿಡಿಪಿಐಗಳು ಮತ್ತು ಬಿಇಒಗಳಿಗೆ ಸೂಚನೆ ನೀಡಲಾಗಿದೆ.

ಆರರಿಂದ ಎಂಟನೇ ತರಗತಿ ಬೋಧನೆಗಾಗಿ ಹೊಸದಾಗಿ ನೇಮಕ ಮಾಡಿಕೊಂಡ 13,151 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹುದ್ದೆ ನಿಯೋಜಿಸಬೇಕಿರುವ ಹಿನ್ನೆಲೆಯಲ್ಲಿ ಪದವೀಧರ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: NTA ಇಂದು ಸೆಷನ್ 2 ಫಲಿತಾಂಶವನ್ನು ಬಿಡುಗಡೆ ಮಾಡಲಿದೆ; ಇಲ್ಲಿದೆ ಫಲಿತಾಂಶ ಪರಿಶೀಲಿಸಲು ಲಿಂಕ್

2017 ರಲ್ಲಿ ಕೊರತೆ ಇರುವ ಶಿಕ್ಷಕರ ಸಂಖ್ಯೆಗಿಂತಲೂ ಹೆಚ್ಚು ಮಂದಿಯ ನೇಮಕಕ್ಕೆ ಸರಕಾರ ಅನುಮತಿ ನೀಡಿತ್ತು. ರಾಜ್ಯದ ಎಲ್ಲ ಪ್ರೌಢಶಾಲೆಗಳಿಗೆ 1,500 ಮಂದಿ, ಪ್ರಾಥಮಿಕ ಶಾಲೆಗಳಿಗೆ 15,991 ಮಂದಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿರುವ ಸರಕಾರ, ಜಿಲ್ಲೆಯಲ್ಲೂ ಪ್ರಾಥಮಿಕ ಶಾಲೆಗಳಿಗೆ 349 ಮಂದಿ ಹಾಗೂ ಪ್ರೌಢಶಾಲೆಗಳಿಗೆ 51 ಮಂದಿ ಅತಿಥಿ ಶಿಕ್ಷಕರನ್ನು ನಿಯೋಜನೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿತ್ತು. ಪ್ರಾಥಮಿಕ ಶಾಲೆಗಳಿಗೆ ನೇಮಕಕ್ಕೆ ಬಾಗೇಪಲ್ಲಿ ತಾಲೂಕಿಗೆ 160, ಚಿಕ್ಕಬಳ್ಳಾಪುರ ತಾಲೂಕಿಗೆ 42, ಚಿಂತಾಮಣಿ ತಾಲೂಕಿಗೆ 54, ಗೌರಿಬಿದನೂರು ತಾಲೂಕಿಗೆ 4, ಗುಡಿಬಂಡೆ ತಾಲೂಕಿಗೆ 42, ಶಿಡ್ಲಘಟ್ಟ ತಾಲೂಕಿಗೆ 47 ಮಂದಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬಹುದು ಎಂದು ಸರ್ಕಾರ ತಿಳಿಸಿತ್ತು.

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ