GPSTR: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಹೊಸ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಗೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಫೆಬ್ರವರಿ 27ರ ರಾತ್ರಿ 8 ಗಂಟೆಗೆ ಹೊಸ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆಯಾಗಿದೆ. ಆಕ್ಷೇಪಣೆ ಸಲ್ಲಿಸಲು ಮಾರ್ಚ್ 04ರ ವರೆಗೆ ಅವಕಾಶವಿದೆ.

GPSTR: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಹೊಸ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಸಾಂದರ್ಭಿಕ ಚಿತ್ರ
Rakesh Nayak Manchi

Updated on: Feb 27, 2023 | 8:35 PM

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಗೆ (15,000 Graduate Primary School Teachers Recruitment) ಸಂಬಂಧಿಸಿದಂತೆ ಹೊಸ ತಾತ್ಕಾಲಿಕ ಆಯ್ಕೆ ಪಟ್ಟಿ (New Provisional Selection List) ಇಂದು (ಫೆಬ್ರವರಿ 27) ರಾತ್ರಿ 8 ಗಂಟೆಗೆ ಬಿಡುಗಡೆಯಾಗಿದೆ. ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (B.C.Nagesh), “15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ ‘1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಂದು ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ” ಎಂದಿದ್ದಾರೆ.

ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಮಾರ್ಚ್ 04, 2023 ರ ಒಳಗಾಗಿ ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರ ರವರ ಕಛೇರಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಸಲ್ಲಿಸಬೇಕು.

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ (Teachers Recruitment) ಸಂಬಂಧಿಸಿದಂತೆ 1:1 ಅನುಪಾತದಲ್ಲಿ ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಕಳೆದ ನವೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಿತ್ತು. ಆದರೆ ಇತರೆ ಹಿಂದುಳಿದ ವರ್ಗಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಂಬಂಧ ಇಲಾಖೆಯ ನಿಯಮ ಗೊಂದಲಕ್ಕೆ ಕಾರಣವಾಗಿದ್ದ ಹಿನ್ನಲೆ ಒಂದಷ್ಟು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪರಿಣಾಮ, ಜನವರಿ 30ರಂದು ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಲಾಗಿತ್ತು. ಇದೀಗ ಕೋರ್ಟ್ ಆದೇಶದಂತೆ ಹೊಸ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:36 pm, Mon, 27 February 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us