
ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಉತ್ತೇಜಿಸಲು ರಿಲಯನ್ಸ್ ಫೌಂಡೇಶನ್ (Reliance Foundation) 2026-27ನೇ ಶೈಕ್ಷಣಿಕ ಸಾಲಿನ ‘ಯುಜಿ (UG) ವಿದ್ಯಾರ್ಥಿವೇತನ’ಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 5,000 ವಿದ್ಯಾರ್ಥಿಗಳನ್ನು ಈ ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ನಿಗದಿತ ದಿನಾಂಕದೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಆಯ್ಕೆಯಾದ 5,000 ವಿದ್ಯಾರ್ಥಿಗಳಿಗೆ ಅವರ ಪದವಿ ಅಧ್ಯಯನದ ಅವಧಿಯಲ್ಲಿ ಗರಿಷ್ಠ ರೂ. 2 ಲಕ್ಷದವರೆಗೆ ವಿದ್ಯಾರ್ಥಿವೇತನ ಸಹಾಯಧನ ಸಿಗಲಿದೆ. ಈ ಮೊತ್ತವನ್ನು ಕಾಲೇಜು ಶುಲ್ಕ, ಹಾಸ್ಟೆಲ್ ವೆಚ್ಚ, ಪುಸ್ತಕಗಳು ಅಥವಾ ಲ್ಯಾಪ್‌ಟಾಪ್ ಖರೀದಿಯಂತಹ ಶೈಕ್ಷಣಿಕ ಅಗತ್ಯಗಳಿಗೆ ಬಳಸಿಕೊಳ್ಳಬಹುದು.
ಇದನ್ನೂ ಓದಿ: ಕಾಲೇಜಿನಲ್ಲಿ ರಾತ್ರಿ ಕಾವಲುಗಾರನ ಕೆಲಸ ಮಾಡುತ್ತಲೇ ಓದಿ ಸತತ 3 ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಸಾಧಕ!
ಅಭ್ಯರ್ಥಿಗಳ ಆಯ್ಕೆಯನ್ನು ಮುಖ್ಯವಾಗಿ ‘ಮೆರಿಟ್-ಕಮ್-ಮೀನ್ಸ್’ (ಪ್ರತಿಭೆ ಮತ್ತು ಆರ್ಥಿಕ ಸ್ಥಿತಿ) ಆಧಾರದ ಮೇಲೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಆನ್‌ಲೈನ್ ಆಪ್ಟಿಟ್ಯೂಡ್ ಟೆಸ್ಟ್ (Aptitude Test) ಗೆ ಹಾಜರಾಗಬೇಕಿರುತ್ತದೆ. ಆಪ್ಟಿಟ್ಯೂಡ್ ಪರೀಕ್ಷೆಯ ಅಂಕಗಳು, 12ನೇ ತರಗತಿಯ ಸಾಧನೆ ಮತ್ತು ಅರ್ಜಿ ನಮೂನೆಯಲ್ಲಿ ನೀಡಲಾದ ವೈಯಕ್ತಿಕ ವಿವರಗಳನ್ನು ಮೌಲ್ಯಮಾಪನ ಮಾಡಿ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
ಅರ್ಹ ಅಭ್ಯರ್ಥಿಗಳು scholarships.reliancefoundation.org ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನಾಂಕವಾಗಿದೆ. ಆನ್‌ಲೈನ್ ಅರ್ಜಿಯ ಜೊತೆಗೆ ಸಾಮರ್ಥ್ಯ ಪರೀಕ್ಷೆಯನ್ನು (Aptitude Test) ಪೂರ್ಣಗೊಳಿಸಿದರೆ ಮಾತ್ರ ಅರ್ಜಿಯನ್ನು ಸಂಪೂರ್ಣವೆಂದು ಪರಿಗಣಿಸಲಾಗುತ್ತದೆ.
ಶಿಕ್ಷಣಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ