ಸರ್ಕಾರಕ್ಕೆ ರುಪ್ಸಾ ಡೆಡ್ ಲೈನ್: ಆಗಸ್ಟ್ 21ರ ನಂತರ ಖಾಸಗಿ ಶಾಲೆ ಬಂದ್ ಎಚ್ಚರಿಕೆ

ಶಿಕ್ಷಣ ಸಂಸ್ಥೆಗಳ ತೆರಿಗೆ ಬಾಕಿ, ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರ ತಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಖಾಸಗಿ ಶಾಲೆಗಳನ್ನು ಬಂದ್​ ಮಾಡಲು ನಿರ್ಧರಿಸಿವೆ. ಹೀಗಾಗಿ ಸರ್ಕಾರಕ್ಕೆ ರುಪ್ಸಾ 15 ದಿನಗಳ ಕಾಲ ಡೆಡ್ ಲೈನ್​ ನೀಡಿದ್ದು, ಆಗಸ್ಟ್ 21ರ ನಂತರ ಖಾಸಗಿ ಶಾಲೆ ಬಂದ್ ಎಚ್ಚರಿಕೆ ನೀಡಲಾಗಿದೆ.

ಸರ್ಕಾರಕ್ಕೆ ರುಪ್ಸಾ ಡೆಡ್ ಲೈನ್: ಆಗಸ್ಟ್ 21ರ ನಂತರ ಖಾಸಗಿ ಶಾಲೆ ಬಂದ್ ಎಚ್ಚರಿಕೆ
ಸರ್ಕಾರಕ್ಕೆ ರುಪ್ಸಾ ಡೆಡ್ ಲೈನ್: ಆಗಸ್ಟ್ 21ರ ನಂತರ ಖಾಸಗಿ ಶಾಲೆ ಬಂದ್ ಎಚ್ಚರಿಕೆ
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on:Aug 05, 2024 | 4:41 PM

ಬೆಂಗಳೂರು, ಆಗಸ್ಟ್​​ 05: ಶಾಲಾ ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರ ಹಾಗೂ ಖಾಸಗಿ ಶಾಲೆಗಳ ಮೇಲಿನ ಅನ್ಯಾಯ ವಿರೋಧಿಸಿ ರುಪ್ಸಾ (RUPSA) ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ಶಾಲೆಗಳನ್ನ ಬಂದ್ (bandh) ಮಾಡಿ ಪ್ರತಿಭಟನೆ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಇಂದು ರುಪ್ಸಾ (ಖಾಸಗಿ ಶಾಲೆಗಳ ಒಕ್ಕೂಟ) ಕರ್ನಾಟಕ ಅಧ್ಯಕ್ಷ ಲೇಪಾಕ್ಷಿ ಹಾಲನೂರು ಅಧ್ಯಕ್ಷತೆಯಲ್ಲಿ ಪತ್ರಿಕಾಗೋಷ್ಠಿ ಮಾಡಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಾಲಾ ಶಿಕ್ಷಣ ಇಲಾಖೆಗೆ ಮುಂದಿನ ಹದಿನೈದು ದಿನ ಡೆಡ್​ಲೈನ್​ ನೀಡಲಾಗಿದೆ.

ಆಗಸ್ಟ್ 21 ರವರೆಗೆ ಗಡುವು ಎಂದ ಹಾಲನೂರು ಲೇಪಾಕ್ಷಿ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಾಲನೂರು ಲೇಪಾಕ್ಷಿ, 15 ದಿನದಲ್ಲಿ ಇಲಾಖೆ ನಡೆಸುತ್ತಿರುವ ಕ್ರಮಗಳಿಂದ ಹಿಂದೆ ಸರಿಯಬೇಕು. ಶಾಲೆಗಳ ನವೀಕರಣಕ್ಕೆ ಇಲಾಖೆಯ 64 ಅಂಶಗಳನ್ನ ನಿಗದಿಪಡಿಸಿ ದಾಖಲೆ ಪಡೆಯುತ್ತಿದೆ. ಇದರಿಂದ ಶಾಲೆಗಳ ನವೀಕರಣ ಪಡೆಯುವುದು ಕಷ್ಟವಾಗಿದೆ. ಶಾಲಾ ಶಿಕ್ಷಣ ಇಲಾಖೆಯಲ್ಲಿನ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳ ತೆರಿಗೆ ಬಾಕಿ ವಸೂಲಿ ಕೈ ಬಿಡಬೇಕು. ಈ ವಿಚಾರಗಳ ಬಗ್ಗೆ ಹದಿನೈದು ದಿನ ಅಂದರೆ ಆಗಸ್ಟ್ 21 ರವರೆಗೆ ಗಡುವು ನೀಡದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶುಲ್ಕ ವಿವರ ಘೋಷಿಸದೆ ಖಾಸಗಿ ಶಾಲೆಗಳ ಉದ್ಧಟತನ: ಶಿಕ್ಷಣ ಇಲಾಖೆಯ ಆದೇಶಕ್ಕೂ ಡೋಂಟ್ ಕೇರ್

ರುಪ್ಸಾ ಸೇರಿದ್ದಂತೆ ಖಾಸಗಿ ಶಾಲೆಗಳ ಒಕ್ಕೂಟದ ಜೊತೆ ಸರ್ಕಾರ ಸಭೆ ಮಾಡಬೇಕು. ಇಲಾಖೆಯಿಂದ ಆಗುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಬೇಕು. ಸರ್ಕಾರ ಇದಕ್ಕೆಲ್ಲ ಕಡಿವಾಣ ಹಾಕದೆಯಿದ್ದರೆ ಶಾಲೆ ಬಂದ್ ಮಾಡಿ ಬೆಂಗಳೂರು ಚಲೋ ಮಾಡುತ್ತೇವೆ ಅಂತಾ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: 10, 12ನೇ ತರಗತಿಯಲ್ಲಿ ಫೇಲಾದ್ರೂ ಮತ್ತೆ ಶಾಲೆಗೆ ಹೋಗಬಹುದು: ಮಧು ಬಂಗಾರಪ್ಪ

ಕಳೆದ ನಾಲ್ಕು ವರ್ಷಗಳಿಂದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುಲಿಗೆ ಮಾಡುತ್ತಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಶೈಕ್ಷಣಿಕ ಉದ್ದೇಶಕ್ಕೆ ಬಳಸುವ ನಿವೇಶನ ಅಥವಾ ಕಟ್ಟಡಗಳಿಗೆ ಕಾನೂನು ಬಾಹಿರವಾಗಿ ಟ್ಯಾಕ್ಸ್ ವಸೂಲಿ ಮಾಡುತ್ತಿದೆ. ಆರ್​ಆರ್​ ವಿಚಾರದಲ್ಲಿ ಅಧಿಕಾರಿಗಳ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಡೆಸುತ್ತಿರುವ ಸುಲಿಗೆ ಸೇರಿದ್ದಂತೆ ಅನೇಕ ವಿಷಯಗಳಿಗೆ ವಿರೋಧ ವ್ಯಕ್ತಪಡಿಸಲಾಗಿದೆ. ಇನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟಗಳು ಈ ಪ್ರತಿಭಟನೆಗೆ ಸಾಥ್ ನೀಡಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:31 pm, Mon, 5 August 24

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ