AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid19 ನಾಳೆಯಿಂದಲೇ ಖಾಸಗಿ ಶಾಲೆಗಳಲ್ಲಿ ಕೊರೊನಾ ರೂಲ್ಸ್ ಜಾರಿ: ನೆಗಡಿ, ಕೆಮ್ಮು, ಜ್ವರ ಇರುವ ವಿದ್ಯಾರ್ಥಿಗಳಿಗೆ ರಜೆ

ಕೊರೊನಾ ಒಮಿಕ್ರಾನ್ ರೂಪಾಂತರಿ ತಳಿ BF.7 ಭೀತಿ ಹಿನ್ನೆಲೆ ರುಪ್ಸಾ ಖಾಸಗಿ ಶಾಲೆಗಳಿಗೆ ಕೊರೊನಾ ಮಾರ್ಗಸೂಚಿ ಪ್ರಕಟಿಸಿದ್ದು, ನೆಗಡಿ, ಕೆಮ್ಮು, ಜ್ವರ ಇರುವ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಸೂಚಿಸಿದೆ.

Covid19 ನಾಳೆಯಿಂದಲೇ ಖಾಸಗಿ ಶಾಲೆಗಳಲ್ಲಿ ಕೊರೊನಾ ರೂಲ್ಸ್ ಜಾರಿ: ನೆಗಡಿ, ಕೆಮ್ಮು, ಜ್ವರ ಇರುವ ವಿದ್ಯಾರ್ಥಿಗಳಿಗೆ ರಜೆ
ರುಪ್ಸಾ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Dec 23, 2022 | 9:02 PM

Share

ಬೆಂಗಳೂರು: ಕೊರೊನಾ ರೂಪಾಂತರಿ(Coroanvirus)  ಚೀನಾದಲ್ಲಿ ಅಬ್ಬರಿಸುತ್ತಾ ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕಕ್ಕೂ ಲಗ್ಗೆ ಇಡುವ ಆತಂಕ ಶುರುವಾಗಿದೆ. ಹೀಗಾಗಿ ರೂಪ್ಸಾ ತನ್ನ ಅಧೀನದಲ್ಲಿ ಬರುವ ಕರ್ನಾಟಕದ ಖಾಸಗಿ ಶಾಲೆಗಳ ಜೊತೆ ಸಭೆ ಮಾಡಿದ್ದು, ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಖಾಸಗಿ ಶಾಲೆಗಳಲ್ಲಿ ಕೊರೊನಾ ‌ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ಮಾರ್ಗಸೂಚಿ ಬಿಡುಗಡೆ ಮಾಡಿದೆ. ನಾಳೆಯಿಂದಲೇ (ಡಿಸೆಂಬರ್ 24) ಅನ್ವಯವಾಗಲಿದೆ.

ಇದನ್ನೂ ಒದಿ: COVID 19: ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ಪ್ರಯಾಣಿಸುವವರಿಗೆ ಮಾಸ್ಕ್‌ ಕಡ್ಡಾಯ: ಇಲ್ಲದಿದ್ದರೆ ನೋ ಎಂಟ್ರಿ…!

ರುಪ್ಸಾ ಸಂಘಟನೆಗೆ ಒಳಪಡುವ ಶಾಲೆಗಳ ಜೊತೆ ಇಂದು(ಡಿಸೆಂಬರ್ 23) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ದೇಶದಲ್ಲಿ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಶಾಲೆಗಳಲ್ಲಿ ಕೊರೊನಾ ‌ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಖಾಸಗಿ ಶಾಲೆಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಪಬ್ಲಿಕ್ ಪರೀಕ್ಷೆ ಬಿಟ್ಟು ಉಳಿದ ತರಗತಿಗಳ ಪರೀಕ್ಷೆಯನ್ನ ಅವಧಿಗೂ ಮುಂಚೆಯೇ ನಡೆಸುವ ಬಗ್ಗೆ ಚರ್ಚೆ ನಡೆಸಿದರು.

ಪೋಷಕರು ನಿತ್ಯ ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಸಹ ಕಟ್ಟುನಿಟ್ಟಾಗಿ ನಿಯಮ ಅನುಸರಿಸಬೇಕು ಎಂದು ರುಪ್ಸಾ ಹೇಳಿದ್ದು, ಕೊರೊನಾ ಆತಂಕದ ನಡುವೆ 5, 8ನೇ ತರಗತಿ ವಿದ್ಯಾರ್ಥಿಗಳಿಗೆ ‌ಮೌಲ್ಯಂಕನ ಪರೀಕ್ಷೆ ನಡೆಸಲು ಮುಂದಾಗಿರುವ ಶಿಕ್ಷಣ ಇಲಾಖೆ ನಡೆಗೆ ವಿರೋಧ ವ್ಯಕ್ತಪಡಿಸಿದೆ.

ಖಾಸಗಿ ಶಾಲೆಗಳಿಗೆ ಮಾರ್ಗಸೂಚಿ

  1.  ಶಾಲೆಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು
  2.  ನೆಗಡಿ, ಕೆಮ್ಮು, ಜ್ವರ ಲಕ್ಷಣಗಳು ಕಂಡು ಬಂದಲ್ಲಿ ಪೋಷಕರಿಗೆ ಶಿಕ್ಷಕರು ತಕ್ಷಣ ಮಾಹಿತಿ ಕೊಡಬೇಕು
  3.  ನೆಗಡಿ, ಕೆಮ್ಮು, ಜ್ವರ ಇರುವ ವಿದ್ಯಾರ್ಥಿಗಳಿಗೆ ರಜೆ ಕೊಡಬೇಕು
  4.  ಶಾಲಾ ಆವರಣದಲ್ಲಿ ದಿನ ಬಿಟ್ಟು ದಿನ ಸ್ಯಾನಿಟೈಸ್ ಮಾಡಿಸಬೇಕು
  5.  ಶಿಕ್ಷಕರು, ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಬೂಸ್ಟರ್ ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು
  6.  ಪ್ರತಿನಿತ್ಯ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಟೆಪ್ರೆಂಚರ್ ಚೆಕ್ ಮಾಡಬೇಕು
  7.  ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳ ಗುಂಪು ಗೂಡುವುದನ್ನ ತಡೆಗಟ್ಟಬೇಕು
  8.  ಸಾಮಾಜಿಕ ಅಂತರ ಪಾಲನೆ ಮಾಡಬೇಕು.
  9.  ಇತರೆ ವಿದ್ಯಾರ್ಥಿಗಳ ನೀರು, ಆಹಾರ ಶೇರ್ ಮಾಡದಂತೆ ನೋಡಿಕೊಳ್ಳಬೇಕು

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:58 pm, Fri, 23 December 22