AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Recruitment 2026: SBI ನಲ್ಲಿ 7,150 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ

SBI ದೇಶಾದ್ಯಂತ 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಪದವೀಧರ ಅಭ್ಯರ್ಥಿಗಳು ಮೇ 19ರಿಂದ ಜೂನ್ 8ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ಒಂದು ವರ್ಷದ ತರಬೇತಿ ಅವಧಿಯಲ್ಲಿ ತಿಂಗಳಿಗೆ 15,000ರೂ. ಸ್ಟೈಪೆಂಡ್ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್​ನ ಅಧಿಕೃತ ವೆಬ್​ಸೈಟ್​​ಗೆ ಭೇಟಿ ನೀಡಿ.

SBI Recruitment 2026: SBI ನಲ್ಲಿ 7,150 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ
SBI ನಲ್ಲಿ 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jun 04, 2026 | 11:59 AM

Share

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಅವಕಾಶ ನೀಡಿದೆ. SBI ತನ್ನ ಅಪ್ರೆಂಟಿಸ್ ನೇಮಕಾತಿ 2026ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ದೇಶಾದ್ಯಂತ ಒಟ್ಟು 7,150 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಮೇ 19 ರಿಂದ ಜೂನ್ 8, 2026ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪ್ರಾಯೋಗಿಕ ಅನುಭವ ಪಡೆಯಲು ಉತ್ತಮ ಅವಕಾಶವೆಂದು ಪರಿಗಣಿಸಲಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು?

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಸಾಮಾನ್ಯವಾಗಿ 20 ರಿಂದ 28 ವರ್ಷ ವಯೋಮಿತಿಯೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಲಭ್ಯವಿರುತ್ತದೆ.

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

ಅಭ್ಯರ್ಥಿಗಳ ಆಯ್ಕೆಗಾಗಿ ಆನ್‌ಲೈನ್ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಸ್ಥಳೀಯ ಭಾಷಾ ಪರೀಕ್ಷೆ (Local Language Test) ಹಾಗೂ ಅಗತ್ಯವಿರುವ ಇತರೆ ಹಂತಗಳನ್ನು ಪೂರ್ಣಗೊಳಿಸಬೇಕಾಗುತ್ತದೆ.

ಇದನ್ನೂ ಓದಿ: Kerala: ನಿವೃತ್ತಿಯಾಗುವ ವಯಸ್ಸಲ್ಲಿ ಸಿಕ್ತು ಸರ್ಕಾರಿ ಕೆಲಸ; ಪರೀಕ್ಷೆ ಬರೆದ 20 ವರ್ಷಗಳ ನಂತರ ಬಂದ ನೇಮಕಾತಿ ಪತ್ರ!

ಸ್ಟೈಪೆಂಡ್ ಎಷ್ಟು?

ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ಅವಧಿಯಲ್ಲಿ ತಿಂಗಳಿಗೆ 15,000ರೂ. ಸ್ಟೈಪೆಂಡ್ ನೀಡಲಾಗುತ್ತದೆ. ಆದರೆ ಇದು ಶಾಶ್ವತ ಉದ್ಯೋಗವಲ್ಲ; ತರಬೇತಿ ಕಾರ್ಯಕ್ರಮ ಮಾತ್ರವಾಗಿದೆ ಎಂಬುದನ್ನು ಅಭ್ಯರ್ಥಿಗಳು ಗಮನಿಸಬೇಕು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವ ಗಳಿಸಲು ಮತ್ತು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಬಯಸುವ ಪದವೀಧರರಿಗೆ SBI ಅಪ್ರೆಂಟಿಸ್ ಯೋಜನೆ ಉತ್ತಮ ಅವಕಾಶವಾಗಿದೆ.

ವಿವರವಾದ SBI ಅಪ್ರೆಂಟಿಸ್ ನೇಮಕಾತಿ 2026 ಅಧಿಸೂಚನೆಯನ್ನು ಪರಿಶೀಲಿಸಲು ಮತ್ತು ಡೌನ್‌ಲೋಡ್ ಮಾಡಲು ನೇರ ಲಿಂಕ್​ಗೆ ಇಲ್ಲಿ ಕ್ಲಿಕ್​ ಮಾಡಿ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್