ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್: ಈ ಶೈಕ್ಷಣಿಕ ವರ್ಷದ ಶಾಲಾ ದಿನಗಳಲ್ಲಿ ಭಾರೀ ಕಡಿತ

2023-24ರ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆ ದಿನಗಳಲ್ಲಿ ಭಾರೀ ಕಡಿತವಾಗಲಿದೆ. 270 ಕರ್ತವ್ಯದ ದಿನಗಳಲ್ಲಿ 26 ದಿನಗಳು ಕಡಿಮೆಗೊಳಿಸಲಾಗುತ್ತದೆ.

ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್: ಈ ಶೈಕ್ಷಣಿಕ ವರ್ಷದ ಶಾಲಾ ದಿನಗಳಲ್ಲಿ ಭಾರೀ ಕಡಿತ
Follow us
ರಮೇಶ್ ಬಿ. ಜವಳಗೇರಾ
|

Updated on: Apr 20, 2023 | 7:57 AM

ಬೆಂಗಳೂರು: 2023-24ರ ಶೈಕ್ಷಣಿಕ ವರ್ಷದಲ್ಲಿ (karnataka Education Academic year 2023-24) ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆ 244 ದಿನಗಳು(Schools Days) ಇರಲಿವೆ.  ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ, ಮಕ್ಕಳ ಶಾಲಾ ದಿನಗಳ ಸಂಖ್ಯೆಯನ್ನು 26 ದಿನಗಳು ಕಡಿತಗೊಂಡಿವೆ. ಹೀಗಾಗಿ ಈ ವರ್ಷ ಒಟ್ಟು 244 ಶಾಲಾ ದಿನಗಳು ಇರಲಿದ್ದು, ಇದರಲ್ಲಿ 180 ದಿನಗಳು ಮಾತ್ರ ಬೋಧನಾ ದಿನಗಳು ನಡೆಯಲಿವೆ ಎಂದು ಮಾರ್ಗಸೂಚಿಗಳು ತಿಳಿಸಿವೆ. ಕಳೆದ ವರ್ಷದಲ್ಲಿ ಹೆಚ್ಚುವರಿಯಾಗಿದ್ದ ಕಲಿಕಾ ಚೇತರಿಕೆ ಈ ವರ್ಷ ಇಲ್ಲದಿರುವುದು ಮತ್ತು ಈ ವರ್ಷ ದಸರಾ ರಜೆ ಹೆಚ್ಚಾಗಿರುವುದರಿಂದ ಶಾಲಾ ದಿನಗಳು ಕಡಿಮೆಯಾಗಿವೆ.

ಇದನ್ನೂ ಓದಿ: ಪಿಯು ಪರೀಕ್ಷೆ ಅಂಕ ಶೇ.98ರಿಂದ 99ಕ್ಕೆ ಹೆಚ್ಚಿಸಲು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಕರ್ನಾಟಕದ ವಿದ್ಯಾರ್ಥಿ

ಹಿಂದಿನ ಶೈಕ್ಷಣಿಕ ವರ್ಷಕ್ಕೆ ಹೋಲಿಸಿದರೆ ಶಾಲಾ ಕರ್ತವ್ಯ ದಿನಗಳಲ್ಲಿ ಭಾರೀ ಕಡಿತವಾಗಿದೆ. ಅದೇ ರೀತಿ ಕಲಿಕಾ ದಿನಗಳಲ್ಲಿಯೂ ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯವಾಗಿ, 48 ದಿನಗಳಷ್ಟು ಇಳಿಕೆ ಕಂಡು ಬಂದಿದೆ. 2022-23ರ ಶೈಕ್ಷಣಿಕ ವರ್ಷದಲ್ಲಿ 270 ಕರ್ತವ್ಯದ ದಿನಗಳಿದ್ದವು. ಈ ಮೂಲಕ ಹೆಚ್ಚುವರಿಯಾಗಿ 26 ರಜಾ ದಿನಗಳು ಈ ವರ್ಷ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸಿಗಲಿದೆ. ಒಟ್ಟಾರೆಯಾಗಿ ಹಿಂದಿನ ವರ್ಷದ ಶೇ. 74ರಷ್ಟು ದಿನ ಶಿಕ್ಷಣ ಸಂಬಂಧಿ ಚಟುವಟಿಕೆ ನಡೆದಿದ್ದರೆ, ಈ ವರ್ಷ ಶೇ. 67ರಷ್ಟು ದಿನ ನಡೆಯಲಿದೆ.

ಕಳೆದ ಬಾರಿ ಕೊರೋನಾ ಕಾರಣದಿಂದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಆಗಿರುವ ಹಿನ್ನಡೆಯನ್ನು ಸರಿದೂಗಿಸಲು ಮೇ ತಿಂಗಳ 14ರಿಂದ ಶಾಲಾ ಶೈಕ್ಷಣಿಕ ಚಟುವಟಿಕೆ ಆರಂಭಿಸಲಾಗಿತ್ತು. ಮೇ ತಿಂಗಳಲ್ಲಿ 14 ದಿನ ಕಲಿಕಾ ಕಾರ್ಯಕ್ರಮ ನಡೆಸಲಾಗಿತ್ತು. ಆದರೆ, ಈ ವರ್ಷ ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಯುವುದಿಲ್ಲ. ಮೇ 29ರಿಂದ ಶಾಲೆ ಆರಂಭಗೊಳ್ಳಲಿದೆ.

ಇದನ್ನೂ ಓದಿ: ಶಾಲಾ ಮಕ್ಕಳಿಗೆ ‘ನಾಳೆ ರೂ.300 ತರಲು ಮರೆಯುವುದಿಲ್ಲ’ ಎಂದು 30 ಬಾರಿ ಬರೆಸಿದ ಶಿಕ್ಷಕ

10 ದಿನ ದಸರಾ ರಜೆ

ಕಳೆದ ಶೈಕ್ಷಣಿಕ ವರ್ಷದಲ್ಲಿ ಅಕ್ಟೋಬರ್ 3ರಿಂದ ಅ.16ರ ವರೆಗೆ ಅಂದರೆ ಒಟ್ಟು 14 ದಿನ ಮಾತ್ರ ದಸರಾ ರಜೆ ನಿಗದಿ ಪಡಿಸಲಾಗಿತ್ತು. ಆದರೆ ಈ ವರ್ಷ ಅಕ್ಟೋಬರ್ 8ರಿಂದ ಅ. 25ರ ವರೆಗೆ ಒಟ್ಟು 20 ದಿನ ರಜೆ ಇರಲಿದೆ. ಅದೇ ರೀತಿ ಕಳೆದ ವರ್ಷಕ್ಕೆ ಹೋಲಿಸಿದರೆ ಜೂನ್‌, ಜುಲೈಯಲ್ಲಿ ಒಂದು ದಿನ ಮತ್ತು ಡಿಸೆಂಬರ್‌ನಲ್ಲಿ ಮೂರು ರಜಾ ದಿನ ಹೆಚ್ಚಿದೆ.

180 ದಿನ ಮಾತ್ರ ಪಾಠ

ಇನ್ನು ಕಳೆದ ಶೈಕ್ಷಣಿಕ ವರ್ಷದಲ್ಲಿ 228 ಬೋಧನಾ ಕಲಿಕೆ ದಿನಗಳಿದ್ದರೆ, ಈ ವರ್ಷ ಕೇವಲ 180 ಕಲಿಕಾ ದಿನಗಳಿರಲಿವೆ. ಈ ಶೈಕ್ಷಣಿಕ ವರ್ಷದಲ್ಲಿ 244 ಶಾಲಾ ಕರ್ತವ್ಯದ ದಿನಗಳನ್ನು ಸರ್ಕಾರ ನಿಗದಿ ಪಡಿಸಿದೆ. ಇದರಲ್ಲಿ ಬೋಧನಾ – ಕಲಿಕೆ ಪ್ರಕ್ರಿಯೆಗೆ ಕೇವಲ 180 ದಿನ ಉಳಿಯಲಿದೆ. ಉಳಿದಂತೆ ಪರೀಕ್ಷೆಗಳು ಮತ್ತು ಮೌಲ್ಯಾಂಕನ ಪ್ರಕ್ರಿಯೆಗಳಿಗಾಗಿ 26 ದಿನಗಳು, ಪಠ್ಯೇತರ ಚಟುವಟಿಕೆಗಳ / ಪಠ್ಯ ಚಟುವಟಿಕೆಗಳ/ ಸ್ಪರ್ಧೆಗಳ ನಿರ್ವಹಣೆ ಕಾರ್ಯಕ್ಕಾಗಿ 24 ದಿನಗಳು, ಮೌಲ್ಯಮಾಪನ ಮತ್ತು ಫ‌ಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನಗಳು ಮತ್ತು ಶಾಲಾ ಸ್ಥಳೀಯ ರಜೆಗಳು ಎಂದು ನಾಲ್ಕು ದಿನವನ್ನು ನಿಗದಿಪಡಿಸಲಾಗಿದೆ.ಹೀಗಾಗಿ ಈ ವರ್ಷದಲ್ಲಿ ಕೇವಲ 180 ಕಲಿಕಾ ದಿನಗಳಿರಲಿವೆ.

ಇನ್ನಷ್ಟು ಶಿಕ್ಷಣ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್